ಗುರುವಾರ, ಜುಲೈ 23, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

`ಕಾಟೇರ’ ಚಿತ್ರದಿಂದ ಮತ್ತೆ ವಿತರಕರಾಗಿ ಕಣಕ್ಕಿಳಿದ್ರು ರಾಜಾಹುಲಿ ಡೈರೆಕ್ಟರ್!

Vishalakshi Pby Vishalakshi P
23/12/2023
in Majja Special
Reading Time: 1 min read
`ಕಾಟೇರ’ ಚಿತ್ರದಿಂದ ಮತ್ತೆ ವಿತರಕರಾಗಿ ಕಣಕ್ಕಿಳಿದ್ರು ರಾಜಾಹುಲಿ ಡೈರೆಕ್ಟರ್!

ಕರ್ನಾಟಕದ ತುಂಬೆಲ್ಲ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ `ಕಾಟೇರ’ ಕ್ರೇಜ್ ಮೇರೆ ಮೀರಿಕೊಂಡಿದೆ. ಪರಭಾಷಾ ಚಿತ್ರಗಳಿಗೆ ಸೆಡ್ಡು ಹೊಡೆದು ಥೇಟರುಗಳಿಗೆ ಆಗಮಿಸುವ ಸನ್ನಾಹದಲ್ಲಿರೋ ಈ ಚಿತ್ರದ ದಿಕ್ಕಿನಿಂದ ಕ್ಷಣಕ್ಕೊಂದರಂತೆ ಹೊಸಾ ಸುದ್ದಿಗಳು ಹೊರಬೀಳುತ್ತಿವೆ. ಇದೇ ಹೊತ್ತಿನಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗದ ಕಾಟೇರ ವಿತರಣಾ ಹಕ್ಕನ್ನು ನಿರ್ದೇಶಕ, ನಿರ್ಮಾಪಕ ಗುರು ದೇಶಪಾಂಡೆ ಪಡೆದುಕೊಂಡಿದ್ದಾರೆ.

ಈ ಸುದ್ದಿ ಕೇಳಿದಾಕ್ಷಣ ಹಲವರಿಗೆ ಅಚ್ಚರಿಯಾದೀತೇನೋ… ಗುರು ದೇಶಪಾಂಡೆ ನಿರ್ದೇಶಕರಾಗಿ ಪ್ರಸಿದ್ಧಿ ಪಡೆದುಕೊಂಡಿರುವವರು. ಇತ್ತೀಚಿನ ದಿನಗಳಲ್ಲಿ ನಿರ್ಮಾಪಕರಾಗಿಯೂ ಸದ್ದು ಮಾಡುತ್ತಿರುವವರು. ಇಂಥಾ ಗುರು ದೇಶಪಾಂಡೆ ಏಕಾಏಕಿ ಸಿನಿಮಾ ವಿತರಣಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರೆಂದರೆ, ಅಚ್ಚರಿಯಾಗೋದು ಸಹಜವೇ. ಅಸಲೀ ವಿಚಾರವೆಂದರೆ, ಅವರು ಸಿನಿಮಾ ವಿತರಣಾ ಕ್ಷೇತ್ರಕ್ಕೆ ಸೀನಿಯರ್. ದಶಕಗಳ ಹಿಂದೆ ಹಲವಾರು ಹಿಟ್ ಸಿನಿಮಾಗಳನ್ನು ವಿತರಿಸಿ ಸೈ ಅನ್ನಿಸಿಕೊಂಡಿದ್ದ ಗುರು ದೇಶಪಾಂಡೆ ಕಾಟೇರ ಮೂಲಕ ಆ ಕ್ಷೇತ್ರಕ್ಕೆ ಮತ್ತೆ ಅಡಿಯಿರಿಸಿದ್ದಾರೆ.

ದರ್ಶನ್ ಸಿನಿಮಾಗಳೆಂದರೆ, ದಶದಿಕ್ಕುಗಳತ್ತಲೂ ಕ್ರೇಜ್ ಹಬ್ಬಿಕೊಳ್ಳೋದು ಮಾಮೂಲು. ಸದ್ಯದ ಮಟ್ಟಿಗೆ ಕಾಟೇರ ವಿಚಾರದಲ್ಲಿ ಈ ಹಿಂದಿಗಿಂತಲೂ ತುಸು ಹೆಚ್ಚೇ ನಿರೀಕ್ಷೆಗಳಿದ್ದಾವೆ. ಅದರಲ್ಲಿಯೂ ವಿಶೇಷವಾಗಿ ಹೈದ್ರಾಬಾದ್ ಕರ್ನಾಟಕ ಮಂದಿಯ ಸಿನಿಮಾ ವ್ಯಾಮೋಹ ಅತೀವವಾದದ್ದು. ಇಂಥಾ ಭಾಗದ ಕಾಟೇರ ವಿತರಣಾ ಹಕ್ಕು ಗುರು ದೇಶಪಾಂಡೆ ತೆಕ್ಕೆಗೆ ಬಿದ್ದಿದೆ. ಇದರೊಂದಿಗೆ ಸಿನಿಮಾ ವಿತರಕರಾಗಿ ಗುರು ದೇಶಪಾಡೆ ಅವರ ಸೆಕೆಂಡ್ ಇನ್ನಿಂಗ್ಸ್ ಕೂಡಾ ಭರ್ಜರಿ ಯಶ ದಕ್ಕಿಸಿಕೊಳ್ಳುವ ನಿಖರ ಸೂಚನೆಗಳೂ ಕಾಣಿಸುತ್ತಿವೆ.

ಗುರು ದೇಶಪಾಂಡೆ ಸಿನಿಮಾ ರಂಗದ ನಾನಾ ವಿಭಾಗಗಳಲ್ಲಿ ಸಕ್ರಿಯರಾಗಿದ್ದರೂ ಕೂಡಾ, ಪ್ರಧಾನವಾಗಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಆದರೆ, 2010-11ನೇ ಸಾಲಿನಲ್ಲಿ ಅವರು ಸಿನಿಮಾ ವಿತರಕರಾಗಿ ಸಕ್ರಿಯರಾಗಿದ್ದರು. ಆ ಕಾಲದಲ್ಲಿ ರಜನೀಕಾಂತ್ ಮಾಜೀ ಅಳಿಯ ಧನುಶ್ ನಟಿಸಿದ್ದ ಅಡುಗಳಂ, ದೈವ ತಿರುಮಗಳ್, ದಳಪತಿ ವಿಜಯ್ ನಟಿಸಿದ್ದ ವೇಲಾಯುಧನ್, ಯಶ್ ಅಭಿನಯದ ಕಿರಾತಕ, ಸಂಜು ವೆಡ್ಸ್ ಗೀತಾದಂಥಾ ಹಿಟ್ ಸಿನಿಮಾಗಳನ್ನು ವಿತರಿಸುವ ಮೂಲಕ ಗೆದ್ದಿದ್ದರು. ಆ ನಂತರದಲ್ಲಿ ನಿರ್ದೇಶನದತ್ತ ಹೊರಳಿಕೊಂಡಿದ್ದ ಗುರು ದೇಶಪಾಂಡೆ ವಿತರಣಾ ಕ್ಷೇತ್ರದಿಂದ ಹಿಂದೆ ಸರಿದ್ದರು. ಇದೀಗ ದಶಕದ ನಂತರ, ಕಾಟೇರನ ಪ್ರಭೆಯಲ್ಲವರು ಹಳೇ ಹಾದಿಯಲ್ಲಿ ಹೊಸಾ ಹುರುಪಿನೊಂದಿಗೆ ಹೆಜ್ಜೆಯೂರಿದ್ದಾರೆ!

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ʻಆನ್‌ಲೈನ್ ಮದುವೆ, ಆಫ್‌ಲೈನ್ ಶೋಭನʼ ಅಂತಿರೋದ್ಯಾಕೆ ಸುಶ್ಮಿತಾ-ಜಗ್ಗಪ್ಪ!

ʻಆನ್‌ಲೈನ್ ಮದುವೆ, ಆಫ್‌ಲೈನ್ ಶೋಭನʼ ಅಂತಿರೋದ್ಯಾಕೆ ಸುಶ್ಮಿತಾ-ಜಗ್ಗಪ್ಪ!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.