ಶುಕ್ರವಾರ, ಜುಲೈ 4, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

‘ಶಾಖಾಹಾರಿ’ಗೆ ಸಪೋರ್ಟ್‌ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್-ಸುಕ್ಕ ಸೂರಿ!

Vishalakshi Pby Vishalakshi P
09/02/2024
in Majja Special
Reading Time: 1 min read
‘ಶಾಖಾಹಾರಿ’ಗೆ ಸಪೋರ್ಟ್‌ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್-ಸುಕ್ಕ ಸೂರಿ!

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದರಲ್ಲಿ ಒಬ್ಬರು ರಂಗಾಯಣ ರಘು. ಅವರ ಅಮೋಘ ಅಭಿನಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ವಿಶೇಷ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವ ರಂಗಾಯಣ ರಘು ಅವರೀಗ ʻಅಭಿನಯಾಸುರʼ ಎಂಬ ಬಿರುದು ನೀಡಿ ಗೌರವಿಸಲಾಗಿದೆ. ಸಂದೀಪ್ ಸುಂಕದ್ ಚೊಚ್ಚಲ ಹೆಜ್ಜೆ ಶಾಖಾಹಾರಿ.. ಈ ಸಿನಿಮಾದಲ್ಲಿ ರಂಗಾಯಣ ರಘು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸನ್ನದ್ಧರಾಗಿದ್ದಾರೆ. ಇದೇ ತಿಂಗಳ 16ರಂದು ಮಲೆನಾಡ ಸೊಗಡಿನ ಥ್ರಿಲ್ಲಿಂಗ್ ಕಥಾಹಂದರ ಶಾಖಾಹಾರಿ ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವೆಂಬಂತೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು. ಇದೇ ವೇಳೆ ರಂಗಾಯಣ ರಘು ಅವರಿಗೆ ಶಾಖಾಹಾರಿ ಸಿನಿ ಬಳಗ ʻಅಭಿನಯಾಸುರʼ ಎಂಬ ಬಿರುದು ನೀಡಿ ಗೌರವಿಸಿತು. ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ಅವರ ಕಲಾಸೇವೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ದುನಿಯಾ ಸೂರಿ ಮಾತನಾಡಿ, ನಾನು ಈ ರೀತಿ ಮೈಕ್ ಹಿಡಿದು ಮಾತನಾಡುತ್ತಿದ್ದೇನೆ. ನನ್ನ ನಿರ್ದೇಶಕ ಅಂತಾ ಕರೆಯುತ್ತಾರೆ ಎಂದರೆ. ಈ ಹಿಂದೆ ನಾವು ಯೋಗರಾಜ್ ಮಣಿ ಅಂತಾ ಸಿನಿಮಾ ಮಾಡಬೇಕಾದರೆ ರಘು ಸರ್ ಸಿಕ್ತಾರೆ. ನಮಗೆ ಅಲ್ಲಿಂದ ದೊಡ್ಮನೆ ಹುಡುಗ ಸಿನಿಮಾದವರೆಗೂ ಜೊತೆಯಲಿ ಇದ್ದರು. ಈ ನಡುವೆ ಅಣ್ಣ ಮಾಡುವ ಪಾತ್ರ ಇಲ್ಲ ಎಂದು ಬಿಟ್ಟುಕೊಡುತ್ತೇವೆ. ನಾನು ಒಂದು ವಿಷಯ ತೆಗೆದುಕೊಂಡು ಹೋದರೆ ಅದಕ್ಕೊಂದು ಹಿನ್ನೆಲೆ ಹೇಳಿ ಗಟ್ಟಿ ಮಾಡುತ್ತಾರೆ. ಯೋಗರಾಜ್, ಸರ್ ನಮಗೆ ಗುರು. ಅನುಭವ ಹೇಳ್ತಾರೆ, ಹೆದರಬೇಡ ಅಂತಾರೇ. ನಾನು ಆಕ್ಷನ್ ಕಟ್ ಹೇಳಬಹುದು. ನಾನು ಇಂದು ಏನಾದ್ರೂ ಮಾಡಿದ್ದೇನೆ ಎಂದರೆ ಅದರಲ್ಲಿ ರಘು ಸರ್ ದ್ದೂ ದೊಡ್ಡ ಪಾಲು. ನಮ್ಮ ಬರವಣಿಗೆಯನ್ನು ಸ್ಕ್ರೀನ್ ಗೆ ತರುವುದು ಇದೆಯಲ್ಲ. ಅದಕ್ಕೆ ಕಲಾವಿದ ಜೀವ ತುಂಬಬೇಕು. ನನಗೆ ಅನಿಸುತ್ತದೆ ನಾವು ರಘು ಸರ್ ಅವರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲವೇನೋ? ಅನಿಸುತ್ತೆ ಎಂದರು.

ರಂಗಾಯಣ ರಘು ಮಾತನಾಡಿ, ನನ್ನ ಒಟ್ಟು ಜೀವನದಲ್ಲಿ ನನಗೆ ತುಂಬಾ ಅಮೂಲ್ಯ ನೆನಪು ಕೊಟ್ಟಂತಹವರು ಸೂರಿ ಅವರು ಹಾಗೂ ಅಶ್ವಿನಿ ಮೇಡಂ. ನಾನು ಇಂಡಸ್ಟ್ರೀ್ಗೆ ಬಂದು ಸುಮಾರು 35 ವರ್ಷವಾಯ್ತು. ನಾನು ಒಂದ ಸಿನಿಮಾಗೋಸ್ಕರ ಬಂದವನು. 94 ರಿಂದ 2001ರವೆಗೆ ನಾನು ಮಾಡಿದ ಸಿನಿಮಾಗಳ ಬಗ್ಗೆ ಊರಲೆಲ್ಲಾ ಹಾಗೇ ಮಾಡಿದ್ದೇನೆ. ಹೀಗೆ ಮಾಡಿದ್ದೇನೆ ಹೇಳಿಕೊಂಡು ಬರುತ್ತಿದ್ದೆ. ರಂಗಾಯಣದ ಬಗ್ಗೆ ನಾನು ಎಷ್ಟು ನೆನಪು ಮಾಡಿಕೊಂಡರೇ ಸಾಲದು. ನನ್ನದು 350 ಸಿನಿಮಾವಾಗಿದೆ. ಈ ರೀತಿ ಪಾತ್ರ ಮಾಡಬೇಕು ಎಂದು ನಾನು ಯೋಚಿಸಿಲ್ಲ ಅಪ್ಪು ಸರ್ ಋಣ ಜಾಸ್ತಿ ಇದೆ, ಮೇಡಂ ಬಂದಿರುವುದು ಅಷ್ಟೇ ಖುಷಿಯಾಗುತ್ತಿದೆ. ನಮಗೆ ದೊಡ್ಮನೆಯಿಂದ ದೊಡ್ಡ ಆಶೀರ್ವಾದ ಸಿಕ್ಕಿದೆ. ಇಡೀ ಇಂಡಸ್ಟ್ರೀಯ ಎಲ್ಲಾ ನಟರ ಜೊತೆ ಮಾಡಿದ್ದೇನೆ. ಹೊಸಬರ ಜೊತೆಯೂ ಮಾಡಿದ್ದೇನೆ. ಹೊಸಬರು ಮತ್ತಷ್ಟು ಬರಲಿ ಎಂದರು.

ನಿರ್ದೇಶಕ ಸಂದೀಪ್ ಸುಂಕದ್ ಮಾತನಾಡಿ, ಈ ರೀತಿ ಕಥೆಯನ್ನು ಪ್ರೊಡ್ಯೂಸರ್ ಮಾಡೋದಕ್ಕೆ ಧೈರ್ಯ ಬೇಕು. ಒಂದು ಸಾಹಿತ್ಯದ ಹಿನ್ನೆಲೆ ಬೇಕು. ಅಷ್ಟೇ ಪ್ರಬಲ ಪ್ರಜ್ಞೆ ಬೇಕು. ಬ್ಯುಸಿನೆಸ್ ಮೈಡ್ ಸೆಟ್ ಬೇಕು. ಎಲ್ಲಾ ತರಹದ ಅನುಕೂಲ ಕಲ್ಪಿಸಿಕೊಟ್ಟು, ಅಷ್ಟೇ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಯಾವುದೇ ಟೈಮ್ ನಲ್ಲಿಯೂ ಇಲ್ಲ ಅಂದಿಲ್ಲ. ಬಜೆಟ್ ಹೆಚ್ಚು ಕಮ್ಮಿಯಾದ್ರೂ ಯಾವುದೇ ಅಡ್ಡಿ ಆತಂಕ ತೆಗೆದುಕೊಳ್ಳದೇ ಫ್ರೀಡಂ ಕೊಟ್ಟಿದ್ದಾರೆ. ಇದೇ ಕಾರಣಕ್ಕೆ ಚಿತ್ರ ನಿರ್ಮಾಣಕ್ಕೆ ಕಾರಣವಾಗಿದ್ದು, ಇದೇ ತಿಂಗಳ 16 ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾ ರೆಡಿಯಾಗುವವರೆಗೂ ಅದೊಂದು ಆರ್ಟ್. ರೆಡಿಯಾದ್ಮೇಲೆ ಅದೊಂದು ಪ್ರಾಡೆಕ್ಟ್. ಪ್ರಾಡೆಕ್ಟ್ ಬಳಿಕ ಬ್ಯುಸಿನೆಸ್ ಆಗುತ್ತದೆ. ಬ್ಯುಸಿನೆಸ್ ಬಳಿಕ ಮಾರ್ಕೆಟ್ ಗೆ ಬರುತ್ತದೆ. ಒಂದೊಳ್ಳೆ ಪ್ರಾಡೆಕ್ಟ್ ಗೆ ಒಂದೊಳ್ಳೆ ಬ್ಯುಸಿನೆಸ್ ಆಗುತ್ತೇ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಸಿನಿಮಾ ತೆರೆಗೆ ಬರ್ತಿದ್ದು, ನಿಮ್ಮ ಬೆಂಬಲ ಇರಲಿ ಎಂದರು.

ಶಿವಮೊಗ್ಗದ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಕಥೆ. ಮಲೆನಾಡಿನಲ್ಲಿ ನಡೆಯುವ ಒಂದಿಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಕಥೆಯನ್ನು ಹೆಣೆಯಲಾಗಿದೆ. ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ‘ಶಾಖಾಹಾರಿ’ ಸಿನಿಮಾ ಬಂಡವಾಳ ಹೂಡಿದ್ದಾರೆ. ನಿರ್ದೇಶಕ ಸಂದೀಪ್ಗೆ ಜೊತೆಗಾಗಿ ವಿಶ್ವಜಿತ್ ರಾವ್ ಕ್ಯಾಮರಾ, ಶಶಾಂಕ್ ನಾರಾಯಣ ಎಡಿಟಿಂಗ್, ಮಯೂರ್ ಅಂಬೆಕಲ್ಲು ಸಂಗೀತ ಈ ಸಿನಿಮಾಗಿದೆ. ಪ್ರಚಾರದ ಪಡಸಾಲೆಯಲ್ಲಿರುವ ಚಿತ್ರತಂಡ ಇದೇ ತಿಂಗಳ 16ರಂದು ಚಿತ್ರವನ್ನು ತೆರೆಗೆ ತರ್ತಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ವಿನಯ್ ಸಿನಿಮಾ ಕ್ರೇಜ್… ಬಸ್ ನಲ್ಲಿ ಆಗಮಿಸಿ ಸರಳ ಪ್ರೇಮಕಥೆ ವೀಕ್ಷಿಸಿದ ಸಿನಿಮಾಪ್ರೇಮಿಗಳು!

ವಿನಯ್ ಸಿನಿಮಾ ಕ್ರೇಜ್... ಬಸ್ ನಲ್ಲಿ ಆಗಮಿಸಿ ಸರಳ ಪ್ರೇಮಕಥೆ ವೀಕ್ಷಿಸಿದ ಸಿನಿಮಾಪ್ರೇಮಿಗಳು!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.