ಭಾನುವಾರ, ಜುಲೈ 6, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಕನ್ನಡದ ಜೊತೆಗೆ ತಮಿಳು-ಮಲಯಾಳಂ ಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡ ಕೆಆರ್ ಜಿ ಸ್ಟುಡಿಯೋಸ್!

Vishalakshi Pby Vishalakshi P
29/02/2024
in Majja Special
Reading Time: 1 min read
ಕನ್ನಡದ ಜೊತೆಗೆ ತಮಿಳು-ಮಲಯಾಳಂ ಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡ ಕೆಆರ್ ಜಿ ಸ್ಟುಡಿಯೋಸ್!

ಕೆಆರ್ ಜಿ ಸ್ಟುಡಿಯೋಸ್ ಒಂದು ಹೆಸರಾಂತ ಚಿತ್ರ ನಿರ್ಮಾಣ, ವ್ಯಾಪಾರ ಹಾಗೂ ವಿತರಣಾ ಸಂಸ್ಥೆಯಾಗಿದ್ದು, ಹಲವಾರು ಯಶಸ್ವಿ ಚಿತ್ರಗಳನ್ನು ಕೊಡುಗೆಯಾಗಿ ನೀಡಿದೆ‌. ಇದೀಗ ಈ ಸಂಸ್ಥೆ ಬೇರೆ ಭಾಷೆಯ ಚಿತ್ರರಂಗಕ್ಕೂ ಕಾಲಿಡುತ್ತಿದೆ. ಸೂಫಿಯುಂ ಸುಜಾತಯುಂ,‌ ಹೋಮ್, ಅಂಗಮಲೇ ಬಾಯ್ಸ್ ನಂತಹ ಯಶಸ್ವಿ ಮಲಯಾಳಂ ಚಿತ್ರಗಳನ್ನು ನೀಡಿರುವ Friday Film Houseನೊಂದಿಗೆ “ಪಡಕ್ಕಲಂ” ಎಂಬ ಮಲಯಾಳಂ ಚಿತ್ರಕ್ಕಾಗಿ ಕೆಆರ್ ಜಿ ಕೈ ಜೋಡಿಸಿದೆ. ಈ‌ ಚಿತ್ರಕಥೆಯನ್ನು ಮನು ಸ್ವರಾಜ್ ಬರೆದು ನಿರ್ದೇಶಿಸಲಿದ್ದಾರೆ. ಬೇಸಿಲ್ ಜೋಸೆಫ್ ನಂತಹ ಖ್ಯಾತ ನಿರ್ದೇಶಕರೊಂದಿಗೆ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿರುವ ಖ್ಯಾತಿ ಇವರದ್ದು.

ಕೆ ಆರ್ ಜಿ ಸ್ಟುಡಿಯೋಸ್ ಮತ್ತು Friday Film House ಸಹಯೋಗದಲ್ಲಿ ಈಗಾಗಲೇ ಮೂಡಿ ಬಂದಿರುವ “ಅಬ್ಬಬ್ಬ” ಎಂಬ ಹಾಸ್ಯಭರಿತ ಕನ್ನಡ ಚಿತ್ರ, “ವಾಲಟಿ” ಎಂಬ ಮಲಯಾಳಂ ಚಿತ್ರದ ಕನ್ನಡ ಡಬ್ಬಿಂಗ್ ಹಾಗೂ ಬಿಡುಗಡೆ ಎಲ್ಲೆಡೆ ಸದ್ದು ಮಾಡಿತ್ತು.ಇನ್ನು ಹೆಸರಾಂತ ಹಿಂದಿ ಚಿತ್ರ ನಿರ್ಮಾಣ ಸಂಸ್ಥೆಯಾದ ಟಿ.ವಿ.ಎಫ್ ನೊಂದಿಗೆ “ಪೌಡರ್” ಎಂಬ ಕನ್ನಡ ಚಿತ್ರವನ್ನು ಎದುರು ನೋಡುತ್ತಿದೆ. ಅಷ್ಟೇ ಅಲ್ಲದೆ, Bangalore Days, ಉಸ್ತಾದ್ ಹೊಟೇಲ್ ಖ್ಯಾತಿಯ ಅಂಜಲಿ ಮೆನನ್ ನಿರ್ದೇಶನದಲ್ಲಿ ತಮಿಳು ಚಿತ್ರವೊಂದನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೂ ಕಾಲಿಡಲಿದೆ.

ಇನ್ನು ಇಂತಹ ಅನೇಕ ನವೀನ ಕಥಾ ವಸ್ತುವನ್ನು ಚಿತ್ರರಂಗಕ್ಕೆ ಪರಿಚಯಿಸುವ ಮಹೋದ್ದೇಶವನ್ನು ಕೆ ಆರ್ ಜಿ ಸ್ಟುಡಿಯೋಸ್ ಹೊಂದಿದೆ. ಈ ಮೂಲಕ ಕನ್ನಡ ಚಿತ್ರಗಳ ಮಾರ್ಕೆಟಿಂಗ್ ವ್ಯಾಪ್ತಿಯನ್ನು ಹೊರ ರಾಜ್ಯಗಳಲ್ಲಿ ವಿಸ್ತರಿಸಲು ಹೊರಟಿದೆ. ಸದ್ಯಕ್ಕೆ ಕೆಆರ್ ಜಿ ಬ್ಯಾನರ್ ನಲ್ಲಿ ಪೌಡರ್, ಉತ್ತರಕಾಂಡ, ಕಿರಿಕೆಟ್ 11, ಕೆ.ಕೆ ಮುಂತಾದ ಚಿತ್ರಗಳು ತಯಾರಾಗುತ್ತಿವೆ.

 

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಅಮೃತೇಶ್ವರ ಸ್ಫಟಿಕ ಲಿಂಗ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಯಶ್‌-ರಾಜಮೌಳಿ ಭಾಗಿ!

ಅಮೃತೇಶ್ವರ ಸ್ಫಟಿಕ ಲಿಂಗ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಯಶ್‌-ರಾಜಮೌಳಿ ಭಾಗಿ!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.