ಬುಧವಾರ, ಜುಲೈ 2, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

Mahesh Babu: ‘ಆಕಾಶ್’, ‘ಅರಸು’, ‘ಮೆರವಣಿಗೆ’ ಡೈರೆಕ್ಟರ್ ಹೊಸ ಸಿನಿಮಾ ಶುರು- ಮಹೇಶ್‌ ಬಾಬು ಚಿತ್ರಕ್ಕೆ ಸ್ಮೈಲ್ ಗುರು ರಕ್ಷಿತ್ ನಾಯಕ

Bharathi Javalliby Bharathi Javalli
15/07/2024
in Majja Special
Reading Time: 1 min read
Mahesh Babu: ‘ಆಕಾಶ್’, ‘ಅರಸು’, ‘ಮೆರವಣಿಗೆ’ ಡೈರೆಕ್ಟರ್ ಹೊಸ ಸಿನಿಮಾ ಶುರು- ಮಹೇಶ್‌ ಬಾಬು ಚಿತ್ರಕ್ಕೆ ಸ್ಮೈಲ್ ಗುರು ರಕ್ಷಿತ್ ನಾಯಕ

Mahesh Babu: ಆಕಾಶ್, ಅರಸು ಮೆರವಣಿಗೆಯಂತಹ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು(Mahesh Babu) ಹೊಸ ಸಿನಿಮಾ ಕೈಗೆತ್ತಿಕೊಂಡಿರುವುದು ಗೊತ್ತಿರುವ ಸಂಗತಿ. ಪ್ರತಿ ಸಿನಿಮಾದಲ್ಲಿಯೂ ಹೊಸ ಪ್ರತಿಭೆಗಳನ್ನು ಪರಿಚಯಿಸುವ ಅವರೀಗ, ಈ ಚಿತ್ರದ ಮೂಲಕ ಕಿರುತೆರೆಯ ಪ್ರತಿಭಾನ್ವಿತ ನಟರಲ್ಲಿ ಒಬ್ಬರಾದ ಸ್ಮೈಲ್ ಗುರು ರಕ್ಷಿತ್(Smile Guru Rakshith) ಅವರನ್ನು ನಾಯಕನಾಗಿ ಕನ್ನಡ ಬೆಳ್ಳಿಪರದೆಗೆ ಕರೆದುಕೊಂಡು ಬರುತ್ತಿದ್ದಾರೆ. ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ನಿನ್ನೆ ಸೆಟ್ಟೇರಿದೆ. ಬೆಂಗಳೂರಿನ ಅಭಯ ಹಸ್ತ ಬಲಮುರಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ.

ಮಹೇಶ್ ಬಾಬು(Mahesh Babu ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಇದನ್ನು ‘ಪ್ರೊಡಕ್ಷನ್ ನಂ 2’ ಎಂದು ಕರೆಯಲಾಗುತ್ತಿದೆ. ನೆನಪಿರಲಿ ಪ್ರೇಮ್(Nenapirali Prem) ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ್ದರು. ಸಿನಿಮಾದ ಮೊದಲ ದೃಶ್ಯಕ್ಕೆ ಅವರು ಆರಂಭ ಫಲಕ ತೋರಿದರು. ಬಳಿಕ ಚಿತ್ರತಂಡಕ್ಕೆ ಅವರು ಶುಭ ಹಾರೈಸಿದರು. ಎ ಕ್ಲಾಸ್ ಸಿನಿ ಫಿಲ್ಮ್ಸ್ ಪ್ರೊಡಕ್ಷನ್ ಸಂಸ್ಥಾಪಕ  ಅನುರಾಗ್ ಆರ್  ತಾಯಿ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಶುಭ ಕೋರಿದರು. ಈ ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ‘ವೀರ ಮದಕರಿ’ಯಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ ಅವರು ಅಭಿನಯಿಸುತ್ತಿದ್ದಾರೆ. ಮತ್ತೊಬ್ಬ ನಾಯಕಿಯನ್ನು ಚಿತ್ರತಂಡ ಶೀಘ್ರದಲ್ಲಿಯೇ ರಿವೀಲ್ ಮಾಡಲಿದೆ. .

ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಸಿನಿಮಾ ಕೊಡಬೇಕೆಂಬ ಉದ್ದೇಶದಿಂದ  MMM ಪಿಕ್ಚರ್ಸ್ ಹಾಗೂ A ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆಎಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರತಂಡ ಅದ್ಧೂರಿಯಾಗಿ ಟೈಟಲ್ ರಿವೀಲ್ ಮಾಡುವ ಯೋಜನೆ ಹಾಕಿಕೊಂಡಿದೆ. ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ಮುಗಿಸಲಿರುವ ಚಿತ್ರತಂಡ ಎರಡನೇ ಹಂತದ ಶೂಟಿಂಗ್ ಗಾಗಿ ಮಲೆನಾಡಿನತ್ತ ಹೆಜ್ಜೆ ಹಾಕಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
KRG Studios: ಮಲಯಾಳಂ ಚಿತ್ರ ನಿರ್ಮಾಣಕ್ಕೆ ಮುನ್ನುಡಿ ಬರೆದ ಕೆಆರ್‌ಜಿ ಸ್ಟುಡಿಯೋಸ್ – ‘ಪಡಕ್ಕಳಂ’ ಚಿತ್ರಕ್ಕೆ ಕೊಚ್ಚಿಯಲ್ಲಿ ಮುಹೂರ್ತ‌

KRG Studios: ಮಲಯಾಳಂ ಚಿತ್ರ ನಿರ್ಮಾಣಕ್ಕೆ ಮುನ್ನುಡಿ ಬರೆದ ಕೆಆರ್‌ಜಿ ಸ್ಟುಡಿಯೋಸ್ – ‘ಪಡಕ್ಕಳಂ’ ಚಿತ್ರಕ್ಕೆ ಕೊಚ್ಚಿಯಲ್ಲಿ ಮುಹೂರ್ತ‌

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.