ಗುರುವಾರ, ಜೂನ್ 4, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

Hagga Movie: ‘ಹಗ್ಗ’ ಟೀಸರ್ ರಿಲೀಸ್‌ ಮಾಡಿದ ಆರ್. ಚಂದ್ರು – ಹರ್ಷಿಕಾ ಪೂಣಚ್ಚ, ಅನು ಪ್ರಭಾಕರ್‌, ವೇಣು ನಟನೆಯ ಸಿನಿಮಾ

Bharathi Javalliby Bharathi Javalli
18/07/2024
in Majja Special
Reading Time: 1 min read
Hagga Movie: ‘ಹಗ್ಗ’ ಟೀಸರ್ ರಿಲೀಸ್‌ ಮಾಡಿದ ಆರ್. ಚಂದ್ರು – ಹರ್ಷಿಕಾ ಪೂಣಚ್ಚ, ಅನು ಪ್ರಭಾಕರ್‌, ವೇಣು ನಟನೆಯ ಸಿನಿಮಾ

Hagga Movie: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ “ಹಗ್ಗ”(Hagga) ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಖ್ಯಾತ ನಿರ್ದೇಶಕ ಆರ್ ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ಮಾಪಕರಾದ ಕೆ.ಮಂಜು,‌ ದಯಾಳ್  ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಚಿತ್ರದ  ನಿರ್ದೇಶಕ ಅವಿನಾಶ್ ಮಾತನಾಡಿ, ನಾನು ಮೂಲತಃ ಮ್ಯಕಾನಿಕಲ್ ಎಂಜಿನಿಯರ್. ಸಿನಿಮಾ ನಿರ್ದೇಶನ ನನ್ನ ಕನಸು. ಆ ಕನಸು “ಹಗ್ಗ”(Hagga) ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆದರೆ “ಹಗ್ಗ” ನೇ ನಮ್ಮ ಚಿತ್ರದ ನಾಯಕ. ಹಾರಾರ್ ಜಾನರ್ ನ ಚಿತ್ರವಾದರೂ, ಚಿತ್ರದಲ್ಲಿ ಒಂದು ಪ್ರಮುಖ ಸಂದೇಶ ಸಹ ಇದೆ ಎಂದರು.

ಚಿತ್ರಕ್ಕೆ ನಾನೇ ಕಥೆ‌ ಬರೆದು ನಿರ್ಮಾಣ ಮಾಡಿದ್ದೇನೆ.‌ ಅವಿನಾಶ್ ನಿರ್ದೇಶನ ಮಾಡಿದ್ದಾರೆ. ಟೀಸರ್ ಬಿಡುಗಡೆ ಬಂದಿರುವ ಎಲ್ಲಾ ಗಣ್ಯರಿಗು ಧನ್ಯವಾದ. ಈಗಾಗಲೇ ಮೋಷನ್ ಪೋಸ್ಟರ್ ಮೂಲಕ “ಹಗ್ಗ” ಜನರ ಮನಸ್ಸಿಗೆ ಹತ್ತಿರವಾಗಿದೆ. ಈಗ ಟೀಸರ್ ಬಿಡುಗಡೆಯಾಗಿದೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರಾಜ್ ಭಾರದ್ವಾಜ್ ತಿಳಿಸಿದರು. ಅವಿನಾಶ್ ಅವರು ಚಿತ್ರದ ಕುರಿತು ಹೇಳಿದಾಗ ನನ್ನ ಪಾತ್ರ ಬಹಳ ಇಷ್ಟವಾಯಿತು. ನನ್ನನ್ನು “ಸೂಪರ್ ಹೀರೋ” ಎಂದು ತೋರಿಸಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ‌‌. ಆದರೆ ಒಳ್ಳೆಯ ಪಾತ್ರಕೊಟ್ಟ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ನಟಿ ಅನು ಪ್ರಭಾಕರ್(Anu Prabhakar).

ನನ್ನದು ಈ ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ. ಯಾವುದೋ ಒಂದು ವಿಷಯದ ಅನ್ವೇಷಣೆಗಾಗಿ ಹಳ್ಳಿಗೆ ಹೋಗುತ್ತೇನೆ. ಈ ಚಿತ್ರದಲ್ಲಿ ಜೀಪ್ ಕೂಡ ಡ್ರೈವ್ ಮಾಡಿದ್ದೇನೆ ಎಂದು ಹರ್ಷಿಕಾ ಪೂಣಚ್ಛ(Harshika Poonacha) ತಿಳಿಸಿದರು. ಇದು ನನ್ನ ಮೊದಲ ಚಿತ್ರ. ನಟನೆಗೆ ತಬಲನಾಣಿ ಅವರು ಬಹಳ ಸಹಾಯ ಮಾಡಿದರು. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ವೇಣು(Venu). ನಟ ತಬಲ ನಾಣಿ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಿರ್ಮಾಪಕ ರಾಜ್ ಭಾರದ್ವಾಜ್ ಅವರೆ “ಹಗ್ಗ” ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು. ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್ ಪಿ ಸಂಭಾಷಣೆ ಬರೆದಿದ್ದಾರೆ. ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Hiranya:  ‘ಹಿರಣ್ಯ’ ಚಿತ್ರದ ಡಾನ್ಸಿಂಗ್‌ ನಂಬರ್‌ ರಿಲೀಸ್‌ –  ಬೈಲಾ ಬೈಲಾ  ಎಂದು ಹೆಜ್ಜೆ ಹಾಕಿದ ದಿವ್ಯಾ ಸುರೇಶ್..!

Hiranya:  'ಹಿರಣ್ಯ' ಚಿತ್ರದ ಡಾನ್ಸಿಂಗ್‌ ನಂಬರ್‌ ರಿಲೀಸ್‌ -  ಬೈಲಾ ಬೈಲಾ  ಎಂದು ಹೆಜ್ಜೆ ಹಾಕಿದ ದಿವ್ಯಾ ಸುರೇಶ್..!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.