ಮಂಗಳವಾರ, ಜುಲೈ 1, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

C Movie: ಎ ಅಲ್ಲ ಬಿ ಅಲ್ಲ ‘ಸಿ’ ಸಾಂಗ್‌ ರಿಲೀಸ್‌ – ಹೊಸ ತಂಡಕ್ಕೆ ಸಾಥ್‌ ನೀಡಿದ ನಟ ಯೋಗಿ, ವಿ. ನಾಗೇಂದ್ರ ಪ್ರಸಾದ್

Bharathi Javalliby Bharathi Javalli
06/08/2024
in Majja Special
Reading Time: 1 min read
C Movie: ಎ ಅಲ್ಲ ಬಿ ಅಲ್ಲ ‘ಸಿ’  ಸಾಂಗ್‌ ರಿಲೀಸ್‌ – ಹೊಸ ತಂಡಕ್ಕೆ ಸಾಥ್‌ ನೀಡಿದ ನಟ ಯೋಗಿ, ವಿ. ನಾಗೇಂದ್ರ ಪ್ರಸಾದ್

CMovie: ‘ಸಿ’(C)..ಸ್ಯಾಂಡಲ್ ವುಡ್ ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’(C) ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಈ ಸಿನಿಮಾ ಈಗಾಗಲೇ ಟೀಸರ್ ಮತ್ತು ‘ಕಂದಾ ಕಂದಾ’ ಎನ್ನುವ ಹಾಡಿನ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

ಇದೀಗ ‘ಸಿ’(C) ಸಿನಿಮಾಗೆ ನಟ ಯೋಗಿ ಮತ್ತು ಖ್ಯಾತ ಸಾಹಿತಿ ವಿ.ನಾಗೇಂದ್ರ ಪ್ರಸಾದ್(V.Nagendra Prasad) ಬೆಂಬಲ ಕೂಡ ಸಿಕ್ಕಿದೆ‌. ಅಂದ ಹಾಗೆ ‘ಸಿ'(C) ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ಸಿನಿಮಾ. ಕಿರಣ್ ನಿರ್ದೇಶನದ ಜೊತೆಗೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಚಿತ್ರತಂಡ ಎ ಅಲ್ಲ ಬಿ ಅಲ್ಲ ‘ಸಿ’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಖ್ಯಾತ ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಈ ಹಾಡನ್ನು ನಟ ಲೂಸ್ ಮಾದ ಯೋಗಿ(Loose Mada Yogi) ರಿಲೀಸ್ ಮಾಡಿದ್ದಾರೆ. ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಯೋಗಿ ಹೊಸ ಸಿನಿಮಾ ತಂಡದ ಬೆನ್ನಿಗೆ ನಿಂತಿರುವುದು ‘ಸಿ’(C) ಚಿತ್ರತಂಡಕ್ಕೆ ಖುಷಿ ತಂದಿದೆ. ಖ್ಯಾತ ಚಿತ್ರ ಸಾಹಿತಿ ವಿ ನಾಗೇಂದ್ರ ಪ್ರಸಾದ್ ಸಿನಿಮಾದ ಹಾಡನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಇಡೀ ಸಿನಿಮಾಗೆ ಒಳ್ಳೆದಾಗಲಿ ಕನ್ನಡ ಚಿತ್ರರಂಗ ಬೆಳೆಯಲಿ ಎಂದು ಹಾರೈಸಿದ್ದಾರೆ.

‘ಸಿ’(C) ಸಿನಿಮಾ ಕಣ್ಣು ಕಾಣದ ಮಗಳು ಹಾಗೂ ಅಪ್ಪನ ನಡುವಿನ ಬಾಂಧವ್ಯದ ಬಗ್ಗೆ ಇದೆ. ಕಣ್ಣು ಕಾಣದ ಮಗಳ ಆಸೆಯನ್ನು ನೆರವೇರಿಸಲು ಅಪ್ಪ ಎಷ್ಟೆಲ್ಲ ಕಷ್ಟ ಪಡುತ್ತಾರೆ, ಮಗಳಿಗಾಗಿ ಅಪ್ಪನ ಹೋರಾಟದ ಕಥೆಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕಿರಣ್ ಸುಬ್ರಮಣಿ. ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ‘ಸಿ’(C) ಸಿನಿಮಾ ಮೂಲಕ ಸ್ವಾತಂತ್ರ ನಿರ್ದೇಶಕರಾಗಿ ಹೊರ ಹೊಮ್ಮುತ್ತಿದ್ದಾರೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ. ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಚಿತ್ರ ಆಗಸ್ಟ್‌ 23ಕ್ಕೆ ತೆರೆಗೆ ಬರುತ್ತಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Gowri Movie: ಇಂದ್ರಜಿತ್‌ ಲಂಕೇಶ್‌ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್- ಗೌರಿ ಟ್ರೈಲರ್‌ ರಿಲೀಸ್‌ ಮಾಡಿ ಶುಭ ಹಾರೈಕೆ

Gowri Movie: ಇಂದ್ರಜಿತ್‌ ಲಂಕೇಶ್‌ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್- ಗೌರಿ ಟ್ರೈಲರ್‌ ರಿಲೀಸ್‌ ಮಾಡಿ ಶುಭ ಹಾರೈಕೆ

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.