ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕನಾಗಿ ನಟಿಸಿ, ನಿರ್ಮಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಬಿಡುಗಡೆಗೆ ಮುಹೂರ್ತ ನಿಗಧಿಯಾಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ‘ಸೈಡ್-ಎ’ ಮತ್ತು ‘ಸೈಡ್-ಬಿ’ ಎಂಬ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಈಗಾಗಲೇ ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ‘ಸೈಡ್-ಎ’ ಯ ಮೊದಲ ಟ್ರೇಲರ್ ಬಿಡುಗಡೆ ಮಾಡಿದೆ.
‘ಪರಂವಾ ಪಿಕ್ಚರ್ಸ್’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಕ್ಕೆ ಹೇಮಂತರಾವ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ರುಕ್ಮಿಣಿ ವಸಂತ ಜೋಡಿಯಾಗಿದ್ದಾರೆ. ಉಳಿದಂತೆ ಚೈತ್ರಾ ಜೆ. ಆಚಾರ್, ಅಚ್ಯುತ ಕುಮಾರ್, ಅವಿನಾಶ್, ಶರತ್ ಲೋಹಿತಾಶ್ವ, ರಮೇಶ್ ಇಂದಿರಾ, ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇನ್ನು ಯು-ಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಸಿನಿಪ್ರಿಯರ ಗಮನ ಸೆಳೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.