ಶನಿವಾರ, ಜುಲೈ 5, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಶೋಕ್ದಾರ್ ಧನ್ವೀರ್ ಆ್ಯಕ್ಷನ್ ಧಮಾಕ; ಕಿಕ್ಕೇರಿಸುತ್ತಿದೆ ‘ವಾಮನ’ ಟೀಸರ್ !

Vishalakshi Pby Vishalakshi P
18/08/2023
in Majja Special
Reading Time: 1 min read
ಶೋಕ್ದಾರ್ ಧನ್ವೀರ್ ಆ್ಯಕ್ಷನ್ ಧಮಾಕ;  ಕಿಕ್ಕೇರಿಸುತ್ತಿದೆ  ‘ವಾಮನ’ ಟೀಸರ್ !

ಧನ್ವೀರ್ ಮತ್ತು ರೀಷ್ಮಾ ನಾಣಯ್ಯ ಅಭಿನಯದ “ವಾಮನ” ಚಿತ್ರ ಸೆಪ್ಟೆಂಬರ್ ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಆಕ್ಷನ್ ಟೀಸರ್ ಗುರುವಾರ ಮೈಸೂರಿನಲ್ಲಿ ಬಿಡುಗಡೆಯಾಗಿದೆ. ಈ ಸಮಾರಂಭದಲ್ಲಿ ಹುಣಸೂರು ಶಾಸಕ ಹರೀಶ್ ಗೌಡ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ, ನಿರ್ದೇಶಕ ಶಂಕರ್ ರಾಮನ್, ‘ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಜನರಿಂದ ಮೆಚ್ಚುಗೆ ಪಡೆದಿದೆ. ಇದೊಂದು ಆಕ್ಷನ್ ಚಿತ್ರ. ಚಿತ್ರದಲ್ಲಿ ಆಕ್ಷನ್ ಹೇಗಿರುತ್ತದೆ ಎಂದು ತೋರಿಸುವುದಕ್ಕೆ ಈ ಟೀಸರ್ ಬಿಡುಗಡೆ ಮಾಡಿದ್ದೇವೆ. ಈ ಚಿತ್ರದಲ್ಲಿ ಒಟ್ಟು ನಾಲ್ಕು ಫೈಟ್ ಗಳಿದೆ. ಮೂರು ಫೈಟ್ ಗಳಿಗೆ ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ. ಇನ್ನೊಂದು ಫೈಟ್ ನಲ್ಲಿ ಕಥೆ ಜೊತೆಜೊತೆಯಾಗಿ ಸಾಗುತ್ತದೆ. ಈ ಫೈಟ್ ಪ್ರೇಕ್ಷಕರಿಗೆ ಬೇರೆ ತರಹದ ಅನುಭವ ಕೊಡುತ್ತದೆ ಎಂಬ ನಂಬಿಕೆ ನನಗಿದೆ. ಸಾಹಸ ದೃಶ್ಯವನ್ನು ವಿಕ್ರಮ್ ಮೋರ್ ನಿರ್ದೇಶನ ಮಾಡಿದ್ದಾರೆ. ಅರ್ಜುನ್ ರಾಜ್ ಮತ್ತು ವಿಕ್ರಮ್ ಮೋರ್ ಜೊತೆಗೆ ಜಾಲಿ ಬಾಸ್ಟಿನ್ ಅವರ ನೆರವು ಮತ್ತು ಮಾರ್ಗದರ್ಶನವಿದೆ. ಈ ಮೂವರೂ ಸಾಹಸ ನಿರ್ದೇಶಕರಿಗೆ ನಮ್ಮ ಚಿತ್ರತಂಡದಿಂದ ಧನ್ಯವಾದಗಳು. ವಾಮನ ಚಿತ್ರವನ್ನು ಸೆಪ್ಟೆಂಬರ್ ನಲ್ಲಿ ಬಿಡುಗಡೆ ಮಾಡುವ ಯೋಚನೆ ಇದೆ. ಧನ್ವೀರ್ ಅವರ ಚಿತ್ರ ಬಿಡುಗಡೆಗೆ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳಿಗೆ ಈ ಸಿನಿಮಾ ಹಬ್ಬ ಆಗುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ವಾಮನ ಅಂದರೆ ದಶಾವತಾರದಲ್ಲಿ ಬರುವ ಐದನೇ ಅವತಾರ. ದುಷ್ಟತ್ವವೇ ಸರ್ವಸ್ವ ಎನ್ನುವ ಜನರ ವಿರುದ್ಧ ವಾಮನ ಹೇಗೆ ಹೋರಾಡುತ್ತಾನೆ ಎಂಬುದು ಚಿತ್ರದ ಕಥೆ. ಇಲ್ಲಿ ರೌಡಿಸಂ, ಭೂಗತಲೋಕ ಮತ್ತು ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಕಥೆ ಸಾಗುತ್ತಿದೆ. ಈ ಚಿತ್ರದ ಹೈಲೈಟ್ ಅಂದರೆ ಸೆಂಟಿಮೆಂಟ್ ದೃಶ್ಯಗಳು. ಈ ಚಿತ್ರದಲ್ಲಿ ಒಂದು ಅದ್ಭುತವಾದ ಸಂದೇಶವಿದೆ ಎಂದರು.

ಈ ಚಿತ್ರದಲ್ಲಿ ನನ್ನದು ಎರಡು ತರಹ ಶೇಡ್ ಗಳಿರುವ ಪಾತ್ರ. ಚಿತ್ರದಲ್ಲೊಂದು ಒಳ್ಳೆಯ ಸಂದೇಶವಿದೆ. ನಿರ್ದೇಶಕರು ಮೂಲತಃ ಒಳ್ಳೆಯ ಬರಹಗಾರರು. ಅವರೊಂದು ಎಳೆಯನ್ನು ಹೇಳಿದ್ದರು. ಬಹಳ ಇಷ್ಟವಾಗಿ, ಅದನ್ನು ಬೆಳೆಸಿ ಎಂದು ಹೇಳಿದ್ದೆ. ಆ ಎಳೆ ಚಿತ್ರವಾಗಿ, ಇದೀಗ ಬಿಡುಗಡೆಗೆ ಬಂದಿದೆ. ಇಂದು ಗಣ್ಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಆಕ್ಷನ್ ಟೀಸರ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ಸೇರಿದಂತೆ ಬೇರೆ ಊರುಗಳಲ್ಲಿ ಸಹ ಚಿತ್ರದ ಪ್ರಮೋಷನ್ ಮಾಡುತ್ತೇವೆ ಎಂದು ನಾಯಕ ಧನ್ವೀರ್ ತಿಳಿಸಿದ್ದಾರೆ.

ಈ ಚಿತ್ರದಲ್ಲಿ ನನ್ನದು ಬಹಳ ಮುದ್ದಾದ ಮತ್ತು ಅಷ್ಟೇ ಸರಳವಾದ ಪಾತ್ರ. ನನಗಂತೂ ಬಹಳ ಇಷ್ಟವಾದ ಪಾತ್ರ ಇದು. ಚಿತ್ರ ನೋಡಿದ ಜನರಿಗೂ ಇಷ್ಟವಾಗುತ್ತೆ ಎಂಬ ನಂಬಿಕೆ ಇದೆ ಎಂದು ನಾಯಕಿ ರೀಷ್ಮಾ ನಾಣಯ್ಯ ತಿಳಿಸಿದರು.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಮಾಣಿಕ್ಯನ ಮಗಳೀಗ ನಾಯಕಿ; ರಿಯಲ್ ಅಲ್ಲ ರೀಲ್!

ಮಾಣಿಕ್ಯನ ಮಗಳೀಗ ನಾಯಕಿ; ರಿಯಲ್ ಅಲ್ಲ ರೀಲ್!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.