‘ರಾಜಲಕ್ಷ್ಮೀ ಎಂಟರ್ಟೈನ್ಮೆಂಟ್’ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಾಣ ಮಾಡುತ್ತಿರುವ ಹಾಗೂ ಕಲೈ ನಿರ್ದೇಶಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿದ್ದಾರೆ. ಸಾಮಾಜಿಕ ಕಳಕಳಿ ಹೊಂದಿರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಅಕ್ಟೊಬರ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ.
ಇಪ್ಪತ್ತು ವರ್ಷಗಳಿಂದ ‘ರಾಜಲಕ್ಷ್ಮೀ ಟ್ರಾವಲ್ಸ್’ ಸಂಸ್ಥೆ ನಡೆಸುತ್ತಿರುವ ಮಂಗಳೂರು ಮೂಲದ ಪ್ರತಿಭಾ ನಿರ್ಮಿಸುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನೃತ್ಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕಲೈ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.
ಮದನ್ – ಹರಿಣಿ, ಚಿನ್ನಿಪ್ರಕಾಶ್, ತ್ರಿಭುವನ್, ಫೈವ್ ಸ್ಟಾರ್ ಗಣೇಶ್ ಮುಂತಾದ ಹಿರಿಯ ನೃತ್ಯ ನಿರ್ದೇಶಕರೊಂದಿಗೆ ಕೆಲಸ ಮಾಡಿರುವ ಕಲೈ, ಜನಪ್ರಿಯ ನಾಯಕರ 300ಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಇದು ಕಲೈ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರ ಇದಾಗಿದ್ದು, ಸಾಮಾಜಿಕ ಸಂದೇಶದ ಜೊತೆಗೆ ಮನರಂಜನಾತ್ಮಕ ಸಿನಿಮಾವನ್ನು ಪ್ರೇಕ್ಷಕರ ಮುಂದಿಡುವ ಯೋಜನೆಯಲ್ಲಿದ್ದಾರೆ ನಿರ್ದೇಶಕ ಕಲೈ.
ಇದೇ ಅಕ್ಟೊಬರ್ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು, ಹೆಚ್ಚಿನ ಭಾಗದ ಚಿತ್ರೀಕರಣ ಅದ್ದೂರಿ ಸೆಟ್ ಗಳಲೇ 80 ದಿನಗಳ ಕಾಲ ನಡೆಯಲಿದೆ. ಅರು ಭರ್ಜರಿ ಫೈಟ್ ಗಳು ಹಾಗೂ ಆರು ಹಾಡುಗಳು ಈ ಚಿತ್ರದಲ್ಲಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಶಂಕರ್ ಹಾಗೂ ಚಂದ್ರಮೌಳಿ(ಕೆ.ಜಿ.ಎಫ್ ಖ್ಯಾತಿ) ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಸಿನಿಮಾದ ಟೈಟಲ್ ಮತ್ತು ನಾಯಕಿ ಇನ್ನಷ್ಟೇ ಅಂತಿಮವಾಗಬೇಕಿದೆ.