‘ಪಿಆರ್‌ಕೆ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಿಸಿದ್ದ ‘ಆಚಾರ್ ಆ್ಯಂಡ್ ಕೋ’ ಸಿನಿಮಾ ಜುಲೈ ಕೊನೆವಾರ ಥಿಯೇಟರ್‌ನಲ್ಲಿ ಬಿಡುಗಡೆಯಾಗಿತ್ತು. 1960ರ ದಶಕದ ಕೂಡು ಕುಟುಂಬದ ಕಥೆಯನ್ನು ನಿರ್ದೇಶಕಿ ಸಿಂಧು ಶ್ರೀನಿವಾಸಮೂರ್ತಿ ಈ ಸಿನಿಮಾದಲ್ಲಿ ತೆರೆಮೇಲೆ ಹೇಳಿದ್ದರು. ಥಿಯೇಟರ್‌ನಲ್ಲಿ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ, ‘ಆಚಾರ್ ಆ್ಯಂಡ್ ಕೋ’ ಸಿನಿಮಾ ಇದೀಗ ಓಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ.
ಹೌದು, ‘ಆಚಾರ್ ಆ್ಯಂಡ್ ಕೋ’ ಸಿನಿಮಾ ಥಿಯೇಟರ್‌ನಲ್ಲಿ ರಿಲೀಸ್ ಒಂದೇ ತಿಂಗಳ ಒಳಗಾಗಿ ಓಟಿಟಿಗೆ ಕಾಲಿಡುತ್ತಿದೆ. ಇದೇ ಆಗಸ್ಟ್ 22ರಂದು ‘ಆಚಾರ್ ಆ್ಯಂಡ್ ಕೋ’ ಸಿನಿಮಾ ಅಮೆಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರವಾಗುತ್ತಿದೆ. ಅಂದಹಾಗೆ, ಥಿಯೇಟರ್‌ನಲ್ಲಿ ‘ಆಚಾರ್ ಆ್ಯಂಡ್ ಕೋ’ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಅಮೇಜಾನ್ ಪ್ರೈಮ್ ವಿಡಿಯೋ ಓಟಿಟಿಯಲ್ಲಿ ನೋಡಬಹುದು.
ಸಿಂಧು ಶ್ರೀನಿವಾಸಮೂರ್ತಿ, ಅಶೋಕ್, ಸುಧಾ ಬೆಳವಾಡಿ ಮೊದಲಾದವರು ‘ಆಚಾರ್ ಆ್ಯಂಡ್ ಕೋ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು. ಸಿನಿಮಾದ ನಿರ್ಮಾಪಕರು, ನಿರ್ದೇಶಕರು, ಸಂಗೀತ ನಿರ್ದೇಶನ, ಕಲಾ ನಿರ್ದೇಶನ ಹೀಗೆ ‘ಆಚಾರ್ ಆ್ಯಂಡ್ ಕೋ’ ಸಿನಿಮಾದ ಬಹುತೇಕ ವಿಭಾಗಗಳಲ್ಲಿ ಮಹಿಳೆಯರೇ ಕೆಲಸ ಮಾಡಿದ್ದು, ಈ ಸಿನಿಮಾದ ಮತ್ತೊಂದು ವಿಶೇಷ.