ಕನ್ನಡ ಚಿತ್ರರಂಗದ ಸ್ಟೈಲಿಶ್ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಈಗ ನಾಯಕ ನಟನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಯಾಗುತ್ತಿದ್ದಾರೆ. ಸಮರ್ಜಿತ್ ಲಂಕೇಶ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಡಲಾಗಿದ್ದು, ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.
ಇನ್ನು ಸಮರ್ಜಿತ್ ಲಂಕೇಶ್ ಚೊಚ್ಚಲ ಸಿನಿಮಾಕ್ಕೆ ಅವರ ತಂದೆ ಇಂದ್ರಜಿತ್ ಲಂಕೇಶ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಸಮರ್ಜಿತ್ ಗೆ ನಾಯಕಿಯಾಗಿ ಕಿರುತೆರೆಯ ‘ಪುಟ್ಟಗೌರಿಯ ಮದುವೆ’ ಧಾರಾವಾಹಿ ಖ್ಯಾತಿಯ ಸಾನ್ಯಾ ಅಯ್ಯರ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ಸದ್ಯ ‘ಗೌರಿ’ ಸಿನಿಮಾದ ಮುಹೂರ್ತ ನಡೆಸಿರುವ ಚಿತ್ರತಂಡ ಸೆಪ್ಟೆಂಬರ್ ತಿಂಗಳಿನಿಂದ ಸಿನಿಮಾದ ಚಿತ್ರೀಕರಣ ಆರಂಭಿಸುವ ಯೋಜನೆ ಹಾಕಿಕೊಂಡಿದೆ. ಇದೇ ವರ್ಷಾಂತ್ಯದೊಳಗೆ ‘ಗೌರಿ’ ಸಿನಿಮಾದ ಶೂಟಿಂಗ್ ಕೆಲಸಗಳು ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷದ ಮಾರ್ಚ್ ವೇಳೆಗೆ ಸಿನಿಮಾವನ್ನು ತೆರೆಗೆ ತರಲಿದ್ದೇವೆ ಎಂಬುದು ಚಿತ್ರತಂಡ ನೀಡಿರುವ ಮಾಹಿತಿ.