‘ವಿಲೇಜ್ ರೋಡ್ ಫಿಲಂಸ್’ ಸಂಸ್ಥೆ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸಿರುವ ಹಾಗೂ ಡಾ. ಗಿರಿಧರ್ ಹೆಚ್. ಟಿ ನಿರ್ದೇಶನದ, ಬಹು ತಾರಾಗಣದ ‘ಪರಿಮಳ ಡಿಸೋಜಾ’ ಸಿನಿಮಾ ಇದೇ ಸೆಪ್ಟೆಂಬರ್ 15 ರಂದು ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ‘ಪರಿಮಳ ಡಿಸೋಜಾ’ ಸಿನಿಮಾವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಿ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರವನ್ನು ನೀಡಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಅನೌನ್ಸ್ ಮಾಡಿದ್ದು, ಸೆಪ್ಟೆಂಬರ್ 15 ರಂದು ‘ಪರಿಮಳ ಡಿಸೋಜಾ’ ಥಿಯೇಟರಿಗೆ ಬರೋದು ಖಚಿತ ಎಂದಿದೆ.
‘ಪರಿಮಳ ಡಿಸೋಜಾ’ ಸಿನಿಮಾದಲ್ಲಿ ಕೋಮಲ ಬನವಾಸೆ, ಭವ್ಯಾ, ಶ್ರೀನಿವಾಸ್ ಪ್ರಭು, ವಿನೋದ್ ಶೇಷಾದ್ರಿ, ಶ್ವೇತಾ ರಮೇಶ್, ಪೂಜಾ ರಾಮಚಂದ್ರ, ನಾಗಮಂಗಲ ಜಯರಾಮ್, ಮೀಸೆ ಆಂಜನಪ್ಪ, ಜ್ಯೊತಿ ಮರೂರ್, ಉಗ್ರಂ ರೆಡ್ಡಿ, ಚಂದನ ಶ್ರೀನಿವಾಸ್, ಲಕ್ಷ್ಮಣ್ ಗೌಡ, ರೋಹಿಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಂದಹಾಗೆ, ‘ಪರಿಮಳಾ ಡಿಸೋಜ’ ಸಿನಿಮಾವನ್ನು ಕರ್ನಾಟಕ ಮಾತ್ರವಲ್ಲದೆ, ಚೆನ್ನೈ, ಮುಂಬೈ, ಹೈದರಾಬಾದ್ ಹಾಗೂ ವಿದೇಶಗಳಲ್ಲೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.