ಅಂಡರ್ ವಲ್ಡ್ ಮತ್ತು ಪ್ರೀತಿಯ ಕಥಾಹಂದರ ಹೊಂದಿರುವ ‘ಗನ್ಸ್ ಅಂಡ್ ರೋಸಸ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ಭರದಿಂದ ನಡೆಯುತ್ತಿದೆ. ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನ ಕೆಂಗೇರಿ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ ಹಲವು ಕಡೆಗಳಲ್ಲಿ ನಡೆಸಲಾಗುತ್ತಿದೆ.
ರಾಜಕೀಯದಲ್ಲಿ ಸಕ್ರಿಯರಾಗಿರುವ ಮತ್ತು ಉದ್ಯಮಿಯೂ ಆಗಿರುವ ಹೆಚ್. ಆರ್ ನಟರಾಜ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಹೆಚ್. ಎಸ್ ಶ್ರೀನಿವಾಸಮೂರ್ತಿ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಶರತ್ ಎಸ್. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ಸಿನಿಮಾದ ಹಾಡುಗಳಿಗೆ ಶಶಿಕುಮಾರ್ ಸಂಗೀತ ಸಂಯೋಜಿಸುತ್ತಿದ್ದು, ಆರ್. ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಕನ್ನಡ ಚಿತ್ರರಂಗದ ಖ್ಯಾತ ಕಥೆಗಾರರಾದ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಯಶ್ಚಿಕ ನಿಷ್ಕಲ. ಶೋಭ್ ರಾಜ್, ಅವಿನಾಶ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ವೀಣಾ ಸುಂದರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.