ಗುರುವಾರ, ಜುಲೈ 23, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

 ‘ನಾದ ಯೋಗಿ’ಮೂಲಕ ಹೊಸ ಹೆಜ್ಜೆ ಇಟ್ಟ ಚಂದನ್ ಶೆಟ್ಟಿ-ನಿವೇದಿತಾ ಗೌಡ!

Vishalakshi Pby Vishalakshi P
20/09/2023
in Majja Special
Reading Time: 1 min read
 ‘ನಾದ ಯೋಗಿ’ಮೂಲಕ ಹೊಸ ಹೆಜ್ಜೆ ಇಟ್ಟ ಚಂದನ್ ಶೆಟ್ಟಿ-ನಿವೇದಿತಾ ಗೌಡ!

ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗಿಯೂ ಪರಿಚಿತರಾಗಿರುವವರು ಚಂದನ್ ಶೆಟ್ಟಿ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು‌. ಈ ಬಾರಿಯ ಹುಟ್ಟುಹಬ್ಬದಂದು ‘ನಾದಯೋಗಿ’ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಚಾಲನೆ ನೀಡಿದರು. ಗಣಪತಿ ಹಬ್ಬದ ಸಂದರ್ಭದಲ್ಲಿ ಗಣಪತಿಯನ್ನು ಕುರಿತಾದ ‘ಗಂ ಗಣಪತಿ…’ ಹಾಡಿನೊಂದಿಗೆ ಈ ಚಾನಲ್ ಆರಂಭವಾಗಿದೆ.

‘ಕಳೆದ ಎಂಟು ವರ್ಷಗಳ ಹಿಂದೆ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ನನ್ನ ಮೊದಲ ಹಾಡು ಬಿಡುಗಡೆಯಾಗಿತ್ತು. ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದೇನೆ. ‘ನಾದ ಯೋಗಿ’ ಎಂಬ ಹೊಸ ಯೂಟ್ಯೂಬ್ ಚಾನಲನ್ನು ಜೀರೋ ಸಬ್ ಸ್ಕ್ರೈಬರ್ ನೊಂದಿಗೆ ಆರಂಭಿಸಿದ್ದೇನೆ. ಈ ಚಾನಲ್ ಬರೀ ಭಕ್ತಿಗೀತೆಗಳಿಗೆ ಮೀಸಲು. ಈಗಿನ ಯುವಜನತೆಗೆ ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಸಲುವಾಗಿ ‘ನಾದಯೋಗಿ’ ಚಾನೆಲ್ ಆರಂಭಿಸಿದ್ದೇನೆ’ ಎಂದಿದ್ದಾರೆ.

ಇನ್ನು ಚಂದನ್ ಶೆಟ್ಟಿ ಇಂಥದ್ದೊಂದು ಕೆಲಸ ಮಾಡಲು ಮೈಸೂರಿನ ಅರ್ಜುನ್ ಅವದೂತರು ಪ್ರೇರಣೆಯಂತೆ. ಈ ಚಾನೆಲ್ ನ ಮೊದಲ ಗೀತೆಯಾಗಿ ‘ಗಂ ಗಣಪತಿ’ ಎಂಬ ಹಾಡನ್ನು ಬಿಡುಗಡೆ ಮಾಡಲಾಗಿದೆ. ಮುಂದೆ ಕೂಡ ಹನುಮ, ಶಿವ ಸೇರಿದಂತೆ ಅನೇಕ ದೇವರುಗಳ ಹಾಡುಗಳನ್ನು ಬಿಡುಗಡೆ ಮಾಡುತ್ತೇವೆ‌. ಈಗ ಬಿಡುಗಡೆಯಾಗಿರುವ ಗಣಪತಿ ಹಾಡಿನಲ್ಲಿ ನಲವತ್ತೆಂಟು ಗಣಪತಿ ನಾಮಗಳಿದೆ. ಚಂದನ್ ಶೆಟ್ಟಿ ಸೋದರ ಪುನೀತ್ ಈ ಹಾಡಿನ ವಿಡಿಯೋ ಮಾಡಿದ್ದಾರೆ. ಈ ಗೀತೆಗೆ ಸ್ವತಃ ಚಂದನ್ ಶೆಟ್ಟಿ ಧ್ವನಿಯಾಗಿದ್ದು, ಮುಂದೆ ‘ನಾದ ಯೋಗಿ’ ಚಾನೆಲ್ ನಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗುವುದು ಎಂದು ಚಂದನ್ ಶೆಟ್ಟಿ ಮತ್ತು ತಂಡ ತಿಳಿಸಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
’ಕರಡಿಗುಡ್ಡ’ದಲ್ಲಿ ಮಕ್ಕಳ ಸಾಹಸಗಾಥೆ! ಶೀರ್ಷಿಕೆ ಬಿಡುಗಡೆ ಮಾಡಿ  ಶುಭ ಕೋರಿದ ಡಾ. ವಿ ನಾಗೇಂದ್ರ ಪ್ರಸಾದ್

’ಕರಡಿಗುಡ್ಡ’ದಲ್ಲಿ ಮಕ್ಕಳ ಸಾಹಸಗಾಥೆ! ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಕೋರಿದ ಡಾ. ವಿ ನಾಗೇಂದ್ರ ಪ್ರಸಾದ್

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.