ಭಾನುವಾರ, ಜುಲೈ 19, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಡೈರೆಕ್ಟರ್ ಕ್ಯಾಪ್ ತೊಟ್ಟ ಎಸ್ತರ್ ನರೋನ್ಹಾ! ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ ‘ದಿ ವೆಕೆಂಟ್ ಹೌಸ್’ ಫಸ್ಟ್ ಸಾಂಗ್

Vishalakshi Pby Vishalakshi P
21/09/2023
in Majja Special
Reading Time: 1 min read
ಡೈರೆಕ್ಟರ್ ಕ್ಯಾಪ್ ತೊಟ್ಟ  ಎಸ್ತರ್ ನರೋನ್ಹಾ! ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ ‘ದಿ ವೆಕೆಂಟ್ ಹೌಸ್’ ಫಸ್ಟ್ ಸಾಂಗ್

ಬಹುಭಾಷಾ ನಟಿ ಎಸ್ತರ್ ನರೋನ್ಹಾ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ ‘ದಿ ವೆಕೆಂಟ್ ಹೌಸ್’ ಸಿನಿಮಾದ ಫಸ್ಟ್ ಲುಕ್ ಭಾರಿ ಸದ್ದು ಮಾಡಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಬಿಡುಗಡೆಯಾಗಿರುವ ಮೊದಲ ಹಾಡು ಕೇಳುಗರನ್ನು ಇಂಪ್ರೆಸ್ ಮಾಡುತ್ತಿದೆ. ತಮ್ಮ ನಿರ್ದೇಶನದ ಚೊಚ್ಚಲ ಚಿತ್ರದ ‘ದಿ ವೆಕೆಂಟ್ ಹೌಸ್’’ ಬಗ್ಗೆ ನರೋನಾ ಮಾಹಿತಿ ಹಂಚಿಕೊಂಡಿದ್ದಾರೆ.

ಎಸ್ತರ್ ನರೋನ್ಹಾ ಮಾತನಾಡಿ, ಲಾಕ್ ಡೌನ್ ನಲ್ಲಿ ಶುರುವಾದ ಪ್ರಯತ್ನ ಇದು. ಈ ಸಿನಿಮಾದಲ್ಲಿ ಕಾಣಿಸುವುದು ನಮ್ಮ ತೋಟದ ಮನೆ. ಲಾಕ್ ಡೌನ್ ಟೈಮ್ ನಲ್ಲಿ ನಾವು ಅಲ್ಲಿಗೆ ಶಿಫ್ಟ್ ಆಗಿದ್ದೇವು. ಆ ಟೈಮ್ ನಲ್ಲಿ ಒನ್ ಲೈನ್ ಹೊಳೆಯಿತು. ಅದನ್ನು ನಮ್ಮ ತಾಯಿ ಬಳಿ ಚರ್ಚೆ ಮಾಡಿ ಕಥೆ ಬರೆಯಲು ಶುರು ಮಾಡಿದೆ. ಕಥೆ ರೆಡಿಯಾಯ್ತು. ನಾನೇ ಸಿನಿಮಾ ಡೈರೆಕ್ಟರ್ ಮಾಡ್ತೀನಿ ಅಂದುಕೊಂಡಿರಲಿಲ್ಲ. ಕಥೆ ಬರೆದ ಮೇಲೆ ಬೇರೆ ಅವರ ಹತ್ತಿರ ರಿಕ್ವೆಸ್ಟ್ ಮಾಡುವುದು ಹೇಗೆ? ಲಾಕ್ ಡೌನ್ ಇರೋದ್ರಿಂದ ಅವರು ಬರುವುದು ಹೇಗೆ ಎಲ್ಲಾ ಸಮಸ್ಯೆ. ಹೀಗಾಗಿ ನಾನೇ ನಿರ್ದೇಶಿಸಿದೆ. ಇದೊಂದು ಫ್ಯಾಮಿಲಿ ವೆಂಚರ್ಸ್ ಸಿನಿಮಾ. ಕೊಂಕಣಿ ಹಾಗೂ ಕನ್ನಡ ಎರಡು ಭಾಷೆಯಲ್ಲಿ ಸಿನಿಮಾ ಮಾಡಿದ್ದೇವೆ. ಒಂದೊಳ್ಳೆ ಟೈಮ್ ನೋಡಿ ಸಿನಿಮಾ ರಿಲೀಸ್ ಮಾಡುತ್ತೇವೆ ಎಂದರು.

ಎಸ್ತರ್‌ ನರೋನಾ ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು. ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಕಲಿತು ಹಿಂದಿ ಚಿತ್ರರಂಗ ಪ್ರವೇಶಿಸಿದ ಎಸ್ತರ್ ಮುಂದೆ ತೆಲುಗು, ತುಳು ಸಿನಿಮಾರಂಗದಲ್ಲಿಯೂ ಹೆಸರು ಮಾಡಿದರು. ನಾವಿಕ, ಅತಿರಥ, ನುಗ್ಗೇಕಾಯಿ, ಲೋಕಲ್ ಟ್ರೈನ್, ಲಂಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಮಿಂಚಿರುವ ಗ್ಲಾಮರ್ ಬ್ಯೂಟಿ ಎಸ್ತರ್ ನರೋನ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.

‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಜೆನೆಟ್ ನರೋನಾ ಪ್ರೊಡಕ್ಷನ್ ನಡಿ ನಿರ್ಮಾಣ ಮಾಡಲಾಗಿದ್ದು, ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ನರೇಂದ್ರ ಗೌಡ ಛಾಯಾಗ್ರಹಣ, ವಿಜಯ್ ರಾಜ್ ಸಂಕಲನ ಸಿನಿಮಾಕ್ಕಿದೆ. ಫಸ್ಟ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ದಿ ವೆಕೆಂಟ್ ಹೌಸ್’ ಸಿನಿಮಾ ಶೀಘ್ರದಲ್ಲಿ ತೆರೆಗೆ ಬರಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಡಬ್ಬಿಂಗ್ ಮುಗಿಸಿದ  ಪ್ರಮೋದ್ ಶೆಟ್ಟಿ ‘ಜಲಂಧರ’!

ಡಬ್ಬಿಂಗ್ ಮುಗಿಸಿದ  ಪ್ರಮೋದ್ ಶೆಟ್ಟಿ ‘ಜಲಂಧರ’!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.