ಈ ಹಿಂದೆ ‘ಕಡಲತೀರದ ಭಾರ್ಗವ’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಪನ್ನಗ ಹೊಸ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಹೊಸ ಸಿನಿಮಾಕ್ಕೆ ‘ಕೆಂದಾವರೆ’ ಎಂದು ಹೆಸರಿಟ್ಟಿರುವ ಪನ್ನಗ ಇತ್ತೀಚೆಗೆ ತಮ್ಮ ಸಿನಿಮಾದ ಟೈಟಲ್ ಪೋಸ್ಟರ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ‘ಕೆಂದಾವರೆ’ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಈ ಹಿಂದೆ ಒಂದಷ್ಟು ಮ್ಯೂಸಿಕ್ ಆಲ್ಬಂನಲ್ಲಿ ಅಭಿನಯಿಸಿದ್ದ ಆದಿತ್ಯ ವಿನೋದ್ ‘ಕೆಂದಾವರೆ’ ಎಂಬ ಈ ಚಿತ್ರದ ಮೂಲಕ ನಾಯಕ ನಟನಾಗಿ ಸ್ಯಾಂಡಲ್ ವುಡ್ ಪದಾರ್ಪಣೆ ಮಾಡುತ್ತಿದ್ದಾರೆ. ನೈಜ ಘಟನೆಯ ಆಧಾರಿತ ‘ಕೆಂದಾವರೆ’ ಸಿನಿಮಾಗೆ ಆದಿತ್ಯ ವಿನೋದ್, ಹಿತಾಂಶು ಸಂಗೀತ ಒದಗಿಸುತ್ತಿದ್ದು, ಕೀರ್ತನ್ ಪೂಜಾರಿ ಛಾಯಾಗ್ರಹಣ ನೀಡಲಿದ್ದಾರೆ.
‘ಅಪ್ರಮೇಯ ಫಿಲ್ಮಂಸ್’ ಬ್ಯಾನರ್ ನಡಿ ಚಿತ್ರ ತಯಾರಾಗುತ್ತಿದ್ದು, ಅನಿಲ್ ಎಂ. ಎಚ್, ಪ್ರಶಾಂತ್ ಸಹ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಹುಬ್ಬಳ್ಳಿ, ಕಾರ್ಕಳ, ಸಾಗರ ಭಾಗದಲ್ಲಿ ‘ಕೆಂದಾವರೆ’ ಸಿನಿಮಾದ ಚಿತ್ರೀಕರಣ ನಡೆಸಲು ತಂಡ ಸಜ್ಜಾಗಿದೆ. ನವೆಂಬರ್ ತಿಂಗಳಿನಿಂದ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಸಿಗಲಿದೆ.





