ನಟ ದಿಗಂತ್ ಅಭಿನಯದ ‘ಎಡಗೈಯೇ ಅಪಘಾತಕ್ಕೆೆ ಕಾರಣ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಇದೀಗ ಈ ಸಿನಿಮಾದಲ್ಲಿ ನಾಯಕ ನಟ ದಿಗಂತ್ ಜೊತೆಗೆ ಮತ್ತೊಬ್ಬ ನಟನ ಆಗಮನವಾಗಿದೆ ಅವರೇ ನಿರೂಪ್ ಭಂಡಾರಿ. ಹೌದು, ‘ಎಡಗೈ’ ತಂಡಕ್ಕೆೆ ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ ಎಂಟ್ರಿಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ನಿರೂಪ್ ಮತ್ತು ದಿಗಂತ್ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸ್ಟಾರ್ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರ ಅಪರೂಪವಾಗಿದೆ. ಮಲ್ಟಿಸ್ಟಾರ್ಸ್ ಸಿನಿಮಾಗಳಿಗೆ ಖ್ಯಾತ ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿರುವುದು ವಿಶೇಷ.
ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಹೀರೋ ಆಗಿ ಅಬ್ಬರಿಸುತ್ತಿದ್ದ ನಿರೂಪ್ ಭಂಡಾರಿ, ದಿಗಂತ್ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಸಿನಿಮಾ ಕಥೆ ಮತ್ತು ಕಾನ್ಸೆೆಪ್ಟ್ ಕಾರಣವಂತೆ. ಕಮರ್ಷಿಯಲ್ ಸಿನಿಮಾಗಳ ಮಧ್ಯೆೆ ಇಂತದೊಂದು ವಿಭಿನ್ನ ರೀತಿಯ ಕಾನ್ಸೆೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್ ಇಂಪ್ರೆೆಸ್ ಆಗಿದ್ದಾರೆ. ಇನ್ನು ಯಂಗ್ ಅಂಡ್ ಎನರ್ಜಿಟಿಕ್ ಆಗಿರುವ ತಂಡ ನೋಡಿ ಈ ಸಿನಿಮಾದಲ್ಲಿ ತಾವು ಕೂಡ ಭಾಗಿ ಆದರೆ ಚೆನ್ನಾಾಗಿರುತ್ತೆೆ ಎಂದು ಎಡಗೈ ಅಪಘಾತಕ್ಕೆೆ ಕಾರಣ’ ಸಿನಿಮಾ ತಂಡದ ಜೊತೆ ಕೈಜೋಡಿಸಿದ್ದಾರೆ ನಿರೂಪ್.
‘ಎಡಗೈ ಅಪಘಾತಕ್ಕೆೆ ಕಾರಣ’ ಚಿತ್ರಕ್ಕೆೆ ಸಮರ್ಥ್ ಬಿ. ಕಡಕೊಳ್ ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆೆಗಳ ಸುತ್ತ ಸುತ್ತುವ ಸಿನಿಮಾವಾಗಿದೆ. ‘ಹೈಫನ್ ಪಿಕ್ಚರ್‌ಸ್’ ಬ್ಯಾನರ್ ಅಡಿಯಲ್ಲಿ ಗುರುದತ್ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರಿಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಉಳಿದಂತೆ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.





