‘ಸೈರನ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟ ಪ್ರವೀರ್ ಶೆಟ್ಟಿ ಶೆಟ್ಟಿ, ಈಗ ‘ಎಂಗೇಜ್ ಮೆಂಟ್’ ಸಿನಿಮಾದಲ್ಲಿ ನಾಯಕನಾಗಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಈ ಹಿಂದೆ ‘ಜಾಗ್ವಾರ್’, ‘ಪ್ರವೀಣ’ ಚಿತ್ರದಲ್ಲಿ ನಟಿಸಿರುವ ಐಶ್ವರ್ಯ ಗೌಡ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಜು ಬೋನಗಾನಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಎಂಗೇಜ್ ಮೆಂಟ್’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ.

‘ರೋಡಿಯಂ ಎಂಟರ್ಟೈನ್ಮೆಂಟ್’ ಅರ್ಪಿಸುವ, ‘ಸುರಾಮ್ ಮೂವೀಸ್’ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ‘ಎಂಗೇಜ್ ಮೆಂಟ್’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊಡಗು, ಮೈಸೂರು, ಗೋವಾ ಮುಂತಾದ ಕಡೆ ಸುಮಾರು ನಲವತ್ತು ದಿನಗಳ ಕಾಲ ಈ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ. ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣವಾಗುತ್ತಿದೆ.

ಚಿತ್ರದಲ್ಲಿ ಐದು ಹಾಡುಗಳಿದ್ದು, ದಿಲೀಪ್ ಭಂಡಾರಿ ಹಾಗೂ ರಜತ್ ಘೋಶ್ ಸಂಗೀತ ನೀಡಿದ್ದಾರೆ. ವೆಂಕಟ್ ಮನಂ ಛಾಯಾಗ್ರಹಣ, ರವಿ ಕೊಂಡವೀಟಿ ಸಂಕಲನ, ವೆಂಕಟೇಶ್ ಕಲಾ ನಿರ್ದೇಶನ, ಡ್ರ್ಯಾಗನ್ ಪ್ರಕಾಶ್ ಸಾಹಸ ನಿರ್ದೇಶನ ಹಾಗೂ ರಾಜು ಪೈಡೆ ನೃತ್ಯ ನಿರ್ದೇಶನವಿದೆ.

ಪ್ರವೀರ್ ಶೆಟ್ಟಿ, ಐಶ್ವರ್ಯ ಗೌಡ, ರಾಜಗೋಪಾಲ್ ಅಯ್ಯರ್, ಬಾಲ ರಾಜವಾಡಿ, ಭಾವನ, ರಜನಿಶ್ರೀ, ಶರದ್ ವರ್ಮ, ದೀಪ್ತಿ ಗುಪ್ತ ಹಾಗೂ ಸುಜಯ್ ರಾಮ್ ಮುಂತಾದವರು ‘ಎಂಗೇಜ್ ಮೆಂಟ್’ ಚಿತ್ರದ ತಾರಾಬಳಗದಲ್ಲಿದ್ದಾರೆ.





