ಶನಿವಾರ, ಜುಲೈ 18, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

‘ನನಗೂ ಹೆಂಡ್ತಿ ಬೇಕು’ ಅಂತ ಹುಡುಕಾಡಿದ ತಬಲನಾಣಿಗೆ ಸಿಕ್ಕಿದ್ಯಾರು ಗೊತ್ತೆ?

Vishalakshi Pby Vishalakshi P
14/10/2023
in Majja Special
Reading Time: 1 min read
‘ನನಗೂ ಹೆಂಡ್ತಿ ಬೇಕು’ ಅಂತ ಹುಡುಕಾಡಿದ ತಬಲನಾಣಿಗೆ ಸಿಕ್ಕಿದ್ಯಾರು ಗೊತ್ತೆ?

ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ, ಪೋಷಕ ನಟನಾಗಿ ತನ್ನದೇ ಛಾಪು ಮೂಡಿಸಿರುವ ನಟ ತಬಲ ನಾಣಿ ಈಗ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ಸಿನಿಮಾವೊಂದು ಬಿಡುಗಡೆಗೆ ಸಿದ್ದವಾಗಿದೆ. ಅಂದಹಾಗೆ, ತಬಲನಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಹೊಸ ಸಿನಿಮಾಕ್ಕೆ ‘ನನಗೂ ಹೆಂಡ್ತಿ ಬೇಕು’ ಎಂದು ಟೈಟಲ್ ಇಡಲಾಗಿದೆ. ಅಂಧನೊಬ್ಬ ಮದುವೆಯಾಗಲು ಹೊರಟಾಗ ನಡೆಯುವ ಪ್ರಸಂಗಗಗಳನ್ನು ಹಾಸ್ಯಮಯವಾಗಿ ಹೇಳುವ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಸದ್ದಿಲ್ಲದೆ ಪೂರ್ಣಗೊಂಡಿದೆ. ಸದ್ಯ ‘ನನಗೂ ಹೆಂಡ್ತಿ ಬೇಕು’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ.

ಈ‌ ಹಿಂದೆ ದೇಶಪ್ರೇಮ ಸಾರುವ ‘ಆ್ಯಕ್ಟ್ 370’ ಎಂಬ ಚಿತ್ರ ನಿರ್ದೇಶಿಸಿದ್ದ ಕೆ. ಶಂಕರ್ ಈ ಕಾಮಿಡಿ ಜಾನರ್ ಸಿನಿಮಾವನ್ನು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ಲೈರಾ ಎಂಟರ್ ಟೈನ್ಮೆಂಟ್ ಅಂಡ್ ಮೀಡಿಯಾ’ ಮೂಲಕ ಭರತ್ ಗೌಡ ಮತ್ತು ಸಿ. ರಮೇಶ್ ಜೊತೆಯಾಗಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ನಿರ್ಮಿಸುತ್ತಿರುವ, ಕೆ.ಶಂಕರ್ ನಿರ್ದೇಶನವಿರುವ ಆ ಚಿತ್ರದ ಹೆಸರು ‘ನನಗೂ ಹೆಂಡ್ತಿ ಬೇಕು’ ಸಂಪೂರ್ಣ ಕಾಮಿಡಿ ಜಾನರ್ ಸಿನಿಮಾವಾಗಿದ್ದು, ಮದುವೆಯಾಗಲು ಹೊರಟು ಒಂದು ಹೆಣ್ಣುಕೂಡ ಸಿಗದೇ ಪರಿತಪಿಸುವ ಕುರುಡನ ಪಾತ್ರದಲ್ಲಿ ಹಾಸ್ಯನಟ ತಬಲ ನಾಣಿ ಅವರು ಕಾಣಿಸಿಕೊಂಡಿದ್ದಾರೆ. ತಬಲ ನಾಣಿಗೆ ಎದುರು ಬ್ಯಾಂಕ್ ಜನಾರ್ಧನ್ ಮತ್ತು ಬಾಲು ನಕರಾತ್ಮಕ ಪಾತ್ರದಲ್ಲಿ ರಂಜಿಸಲಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಒಬ್ಬ ಮೂಕಿಯಾಗಿ ನಟಿಸಿದ್ದಾರೆ.

ಉಳಿದಂತೆ ಶೃತಿ, ರಮೇಶ್ ಭಟ್, ಕಿಲ್ಲರ್ ವೆಂಕಟೇಶ್ ಗಣೇಶ್ ರಾವ್, ದೊಡ್ಡ ರಂಗೇಗೌಡ, ಧರ್ಮ, ಕೆಜಿಎಫ್ ಕೃಷ್ಣಪ್ಪ, ಪ್ರಿಯಾಂಕ, ಗಾನವಿ ಮುಂತಾದವರು ‘ನನಗೂ ಹೆಂಡ್ತಿ ಬೇಕು’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಕೆ.ಎಮ್. ಇಂದ್ರ ಸಂಗೀತ ಸಂಯೋಜನೆಯಿದೆ. ಇಡೀ ಚಿತ್ರದ ಚಿತ್ರೀಕರಣ ಚಿತ್ರದುರ್ಗದಲ್ಲಿ ನಡೆಸಲಾಗಿದೆ. ಇದೇ ವರ್ಷಾಂತ್ಯಕ್ಕೆ ‘ನನಗೂ ಹೆಂಡ್ತಿ ಬೇಕು’ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಸ್ಪಂದನಾ ಜೊತೆ ಸಂಸಾರ ಮಾಡಿದ ಮನೆಯಿಂದ ಹೊರಬಂದ್ರು ವಿಜಯ್… ಮಗನೊಟ್ಟಿಗೆ ಹೊಸ ಮನೆಯಲ್ಲಿ ವಾಸ್ತವ್ಯ ಹೂಡಿದ ಚಿನ್ನಾರಿ!

ಸ್ಪಂದನಾ ಜೊತೆ ಸಂಸಾರ ಮಾಡಿದ ಮನೆಯಿಂದ ಹೊರಬಂದ್ರು ವಿಜಯ್... ಮಗನೊಟ್ಟಿಗೆ ಹೊಸ ಮನೆಯಲ್ಲಿ ವಾಸ್ತವ್ಯ ಹೂಡಿದ ಚಿನ್ನಾರಿ!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.