ಶನಿವಾರ, ಜುಲೈ 25, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

`ಘೋಸ್ಟ್’ ಗೆ ಮೆರುಗು ತುಂಬಲು ಮೆರವಣಿಗೆ ಹೊರಡಲಿದ್ದಾರೆ ಶಿವಣ್ಣ ಫ್ಯಾನ್ಸ್ !

Vishalakshi Pby Vishalakshi P
16/10/2023
in Majja Special
Reading Time: 1 min read
`ಘೋಸ್ಟ್’ ಗೆ ಮೆರುಗು ತುಂಬಲು ಮೆರವಣಿಗೆ ಹೊರಡಲಿದ್ದಾರೆ ಶಿವಣ್ಣ ಫ್ಯಾನ್ಸ್ !

ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಘೋಸ್ಟ್’ ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ.

ಜ್ವಾಲಾಮುಖಿ ಡಾ. ರಾಜಕುಮಾರ್ ಅಭಿಮಾನಿಗಳ ಬಳಗ ಈ ಅದ್ದೂರಿ ಮೆರವಣಿಗೆ ಆಯೋಜಿಸಿದೆ. ಡೋಲು, ನಗರಿ, ಕೇರಳದ ಚಂಡೆ, ತಮಟೆ ಮೊದಲಾದ ವಾದ್ಯಗಳು, ಜಾನಪದ ಕಲಾ ತಂಡಗಳು, ನೂರೈವತ್ತಕ್ಕೂ ಆಟೋಗಳಲ್ಲಿ ನಕ್ಷತ್ರಗಳು ಈ ಮೆರವಣಿಗೆಯ ಪ್ರಮುಖ ಆಕರ್ಷಣೆ. ಸಾವಿರಾರು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಿಂದ ಆರಂಭವಾಗುವ ಮೆರವಣಿಗೆ ಡಿಸಿ ಕಛೇರಿ ಮೂಲಕ ಸಾಗಿ ವುಡ್ ಲ್ಯಾಂಡ್ಸ್ ಚಿತ್ರಮಂದಿರ ತಲುಪಲಿದೆ. ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ನಿರ್ಮಾಪಕರಾದ ಸಂದೇಶ್ ಮುಂತಾದವರು ಈ ಅದ್ದೂರಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಮೈಸೂರಿನಲ್ಲಿ ಈಗ ದಸರಾ ಸಡಗರ. ಅದರೊಂದಿಗೆ ‘ಘೋಸ್ಟ್’ ಚಿತ್ರ ಸಹ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಆನಂದವನ್ನು ಮತ್ತಷ್ಟು ಹೆಚ್ಚಿಸಲಿದೆ.

 

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
 ‘ಚಿಕ್ಕಿಯ ಮೂಗುತಿ’ ಮೆಚ್ಚಿ ಸಾಥ್ ನೀಡಿದ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್!

 'ಚಿಕ್ಕಿಯ ಮೂಗುತಿ' ಮೆಚ್ಚಿ ಸಾಥ್ ನೀಡಿದ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.