ಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ದಿವಂಗತ ನಟ ಪುನೀತ್ ರಾಜಕುಮಾರ್ ಸಂಗ್ರಹಣೀಯ ಶಿಲ್ಪಗಳ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರಾಡಿಸನ್ ಬ್ಲೂ (ಏಟ್ರಿಯಾ) ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಡಿಜಿಟಲ್ ಶಿಲ್ಪ ಕಲಾಕೃತಿಯನ್ನು ಅನಾವರಣಗೊಳಿಸಿದರು.
ಕಲಾವಿದ ವಿಚಾರ್ ಅವರು ನಟ ಪುನೀತ್ ರಾಜಕುಮಾರ್ ವಿವಿಧ ಭಂಗಿಯ ಸೂಕ್ಷ್ಮ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಡಿಜಿಟಲ್ ಆರ್ಟ್ ಮಾದರಿಯಲ್ಲಿ ಈ ಕಲಾಕೃತಿಗಳನ್ನು ನಿರ್ಮಿಸಿದ್ದಾರೆ. ಈ ಶಿಲ್ಪಗಳು ಆನ್ ಲೈನ್ ನಲ್ಲೂ ಲಭ್ಯವಿದ್ದು, ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ.
ಸಮಾರಂಭದಲ್ಲಿ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್, ಅಜಯ್ ಸಿಂಗ್, ನಂದನ್ ಕಟ್ಟೀಮನಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಹಾಜರಿದ್ದರು. ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿದಂತೆ ರಾಜಕುಮಾರ್ ಕುಟುಂಬದ ಬಹುತೇಕರು ಉಪಸ್ಥಿತರಿದ್ದರು.






