2019ರಲ್ಲಿ ಅಭಿಷೇಕ್ ಅಂಬರೀಶ್ ‘ಅಮರ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದರು. ಅದಾದ ಬಳಿಕ ಸುಮಾರು ನಾಲ್ಕು ವರ್ಷದ ಬಳಿಕ ಅಭಿಷೇಕ್ ಅಂಬರೀಶ್ ನಾಯಕನಾಗಿ ಅಭಿನಯಿಸಿರುವ ಎರಡನೇ ಸಿನಿಮಾ ‘ಬ್ಯಾಡ್ ಮ್ಯಾನರ್ಸ್’ ಈಗ ಬಿಡುಗಡೆಗೆ ರೆಡಿಯಾಗಿದೆ. ಅಂದಹಾಗೆ, ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಇದೇ ನವೆಂಬರ್ 24ಕ್ಕೆ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ.
‘ದುನಿಯಾ’ ಸೂರಿ ನಿರ್ದೇಶನದಲ್ಲಿ ಮೂಡಿಬಂದಿರುವ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಅಭಿಷೇಕ್ ಅಂಬರೀಶ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಸುಧೀರ್ ಕೆ. ಎಂ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಫಸ್ಟ್ ಲುಕ್, ಟೀಸರ್, ಹಾಡುಗಳು ಮಾಸ್ ಆಡಿಯನ್ಸ್ ಗಮನ ಸೆಳೆಯಲು ಯಶಸ್ವಿಯಾಗಿದೆ.
ಸದ್ಯ ಭರದಿಂದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೀಗ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಈಗಾಗಲೇ ಒಂದಷ್ಟು ಸೌಂಡ್ ಮಾಡುತ್ತಿರುವ ‘ಬ್ಯಾಡ್ ಮ್ಯಾನರ್ಸ್’ ಹವಾ ಹೇಗಿರಲಿದೆ ಎಂಬುದು ಇದೇ ನವೆಂಬರ್ 24ಕ್ಕೆ ಗೊತ್ತಾಗಲಿದೆ.





