ಶುಕ್ರವಾರ, ಜುಲೈ 24, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ‘ದಿ ವೆಕೆಂಟ್ ಹೌಸ್’ ಸಿನಿಮಾ ತೆರೆಗೆ ಬರಲು ರೆಡಿ

Vishalakshi Pby Vishalakshi P
02/11/2023
in Majja Special
Reading Time: 2 mins read
ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ‘ದಿ ವೆಕೆಂಟ್ ಹೌಸ್’ ಸಿನಿಮಾ ತೆರೆಗೆ ಬರಲು ರೆಡಿ

ಸ್ಯಾಂಡಲ್‌ವುಡ್‌ನಲ್ಲಿ ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಈ ಬ್ಯೂಟಿ ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಆಗಿ ಕ್ಯಾಪ್ ತೊಟ್ಟಿರುವ ಅವರು, ನಿರ್ದೇಶನದ ಜೊತೆ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಪ್ರಯತ್ನವೀಗ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ನ.10ರಂದು ‘ದಿ ವೆಕೆಂಟ್ ಹೌಸ್’ ಚಿತ್ರ ಬಿಡುಗಡೆಯಾಗಲಿದೆ.

‘ದಿ ವೆಕೆಂಟ್ ಹೌಸ್’ ಸಿನಿಮಾದ ಸ್ಯಾಂಪಲ್ಸ್ ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಹಾಡುಗಳು, ಟೀಸರ್ ಗಮನ ಸೆಳೆಯುತ್ತಿದೆ. ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿರುವ ಚಿತ್ರಕ್ಕೆ ನರೇಂದ್ರ ಗೌಡ ಛಾಯಾಗ್ರಹಣವಿದ್ದರೆ, ವಿಜಯ್ ರಾಜ್ ಸಂಕಲನವಿದೆ. ‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಖಾಲಿ ಮನೆಯ ಸುತ್ತ ನಡೆಯುವ ಘಟನೆ ಆಧರಿತ ಸಿನಿಮಾ ಮಾಡಲಾಗಿದೆ.

 

View this post on Instagram

 

A post shared by Ester Valerie Noronha (@esternoronhaofficial)

ಅಂದ್ಹಾಗೆ ಎಸ್ತರ್‌ ನರೋನ್ಹಾ ಮಂಗಳೂರಿನವರಾದರು. ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಕನ್ನಡ ಸಿನಿಮಾ ‘ಉಸಿರಿಗಿಂತ ನೀನೇ ಹತ್ತಿರ’ ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಎಸ್ತರ್ ಬಳಿಕ ತೆಲುಗು, ತುಳು ಸಿನಿಮಾಗಳಲ್ಲೂ ನಟಿಸಿದ್ದಾರೆ. ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಹಾಡಿಗೆ ಬೊಂಬಾಟ್ ಆಗಿ ಹೆಜ್ಜೆ ಹಾಕಿರುವ ಎಸ್ತಾರ್ ಗ್ಲಾಮರ್ ನಂಬರ್ ಗೆ ಪ್ರೇಕ್ಷಕರ ಚಪ್ಪಾಳೆ ತಟ್ಟಿದ್ದಾರೆ. ರಾಜ್ಯಾದ್ಯಂತ ರಿಲೀಸ್ ಆಗಿರುವ ಇನಾಮ್ದಾರ್ ಚಿತ್ರಕ್ಕೆ ಮೆಚ್ಚುಗೆ ಸಿಕ್ತಿದೆ. ನರೋನ್ಹಾ ಕುಣಿದು ಕುಪ್ಪಳಿಸಿರುವ ಸಿಲ್ಕು ಸಖತ್ ಹಿಟ್ ಆಗಿದೆ. ಈ ಖುಷಿ ಬೆನ್ನಲ್ಲೆ ಎಸ್ತರ್ ಚೊಚ್ಚಲ ಕನಸು ದಿ ವೆಕೆಂಟ್ ಹೌಸ್ ತೆರೆಗೆ ಬರ್ತಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ರಿಷಿ ಮುಡಿಗೇರಿದ ಒಟಿಟಿ ಅವಾರ್ಡ್..ಪ್ರಶಸ್ತಿ ಪಡೆದ ಬೆನ್ನಲ್ಲೇ ಕೊಟ್ರು ಹೊಸ ಸಿನಿಮಾದ ಅಪ್ ಡೇಟ್!

ರಿಷಿ ಮುಡಿಗೇರಿದ ಒಟಿಟಿ ಅವಾರ್ಡ್..ಪ್ರಶಸ್ತಿ ಪಡೆದ ಬೆನ್ನಲ್ಲೇ ಕೊಟ್ರು ಹೊಸ ಸಿನಿಮಾದ ಅಪ್ ಡೇಟ್!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.