ಶುಕ್ರವಾರ, ಜುಲೈ 24, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

`ಇಂಡಿಯನ್‍’ ಗೆ ಸಾವೇ ಇಲ್ಲ ಎನ್ನುತ್ತಾ ಖಡಕ್ಕಾಗಿ ಎಂಟ್ರಿಕೊಟ್ಟ `ಸೇನಾಪತಿ’ಗೆ ಸುದೀಪ್ ಸಾಥ್ !

Vishalakshi Pby Vishalakshi P
03/11/2023
in Majja Special
Reading Time: 1 min read
`ಇಂಡಿಯನ್‍’ ಗೆ ಸಾವೇ ಇಲ್ಲ ಎನ್ನುತ್ತಾ ಖಡಕ್ಕಾಗಿ ಎಂಟ್ರಿಕೊಟ್ಟ `ಸೇನಾಪತಿ’ಗೆ ಸುದೀಪ್ ಸಾಥ್ !

ತಮಿಳಿನ ಖ್ಯಾತ ನಿರ್ದೇಶಕ ಎಸ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರಬಿದ್ದಿದೆ. ಅನ್ಯಾಯದ ವಿರುದ್ಧ ಕಮಲ್ ಹಾಸನ್ ಹೇಗೆಲ್ಲಾ ಹೋರಾಟ ಮಾಡ್ತಾರೆ ಅನ್ನೋದನ್ನು ಸೀಕ್ವೆಲ್ ನಲ್ಲಿ ಕಟ್ಟಿಕೊಡಲಾಗಿದೆ.

`ಎಲ್ಲಿ ತಪ್ಪು ನಡೆದರೂ ಖಂಡಿತವಾಗಿ ನಾನು ಬರುತ್ತೇನೆ’ ಹೀಗೊಂದು ಪವರ್ ಫುಲ್ ಡೈಲಾಗ್ ಜೊತೆ ಇಂಡಿಯನ್ ಎಂಟ್ರಿಯಾಗಿದೆ. `ನಮಸ್ಕಾರ ಇಂಡಿಯಾ… ಇಂಡಿಯನ್ ಈಸ್ ಬ್ಯಾಕ್’ ಎನ್ನುತ್ತಾ ಗ್ರ್ಯಾಂಡ್ ಎಂಟ್ರಿಕೊಟ್ಟಿರೋ ಸೇನಾಪತಿ, ಸಿನಿಮಾ ಪ್ರೇಮಿಗಳ ಥ್ರಿಲ್ ಹೆಚ್ಚಿಸಿ, ಭ್ರಷ್ಟರ ಎದೆ ನಡುಗಿಸಿದ್ದಾರೆ. 27 ವರ್ಷಗಳು ಉರುಳಿದ್ವು ಆದರೆ ಯಾವುದು ಕೂಡ ಬದಲಾಗಲಿಲ್ಲ. ದೌರ್ಜನ್ಯ, ದಬ್ಬಾಳಿಕೆ, ದರೋಡೆ ಇದ್ಯಾವುದು ಕಡಿಮೆಯಾದಂತೆ ಕಾಣಲಿಲ್ಲ. ಹೀಗಾಗಿ, ನಾನು ಕಂಬ್ಯಾಕ್ ಮಾಡಬೇಕಾಗಿ ಬಂತು ಎನ್ನುತ್ತಾ ಸೇನಾಪತಿ ಫೀಲ್ಡಿಗಿಳಿದಿದ್ದಾರೆ.

‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್‌’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು. ಅದರ ಮುಂದುವರೆದ ಭಾಗವಾಗಿರುವಇಂಡಿಯನ್-2 ಇಂಟ್ರೋ ವೀಡಿಯೋ ಐದು ಭಾಷೆಯಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಿದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ನಡಿ ಇಂಡಿಯನ್-2 ನಿರ್ಮಾಣವಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭ್ರಷ್ಟಾಚಾರ – ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ, ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್ ಅವರ ಎಡಿಟಿಂಗ್ ಇರಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
“ಶುಗರ್ ಫ್ಯಾಕ್ಟರಿ” ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ !

"ಶುಗರ್ ಫ್ಯಾಕ್ಟರಿ" ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ !

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.