ಶುಕ್ರವಾರ, ಜುಲೈ 24, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

`ಕೆಜಿಎಫ್‍’ ಗೂ ಮೊದಲು ಯಶ್ ದೊಡ್ಡ ಸ್ಟಾರ್ ಆಗಿರಲಿಲ್ಲ… ಹೀಗಂದರೇಕೆ ಅಲ್ಲು ಅರ್ಜುನ್ ತಂದೆ?

Vishalakshi Pby Vishalakshi P
08/11/2023
in Majja Special
Reading Time: 1 min read
`ಕನ್ನಡ ರಾಜ್ಯೋತ್ಸವ’ದಂದು ರಾಕಿ ಉತ್ಸವ! ಕೆಜಿಎಫ್-2 ರಿರಿಲೀಸ್!

ಕೆಜಿಎಫ್ ಸಿನಿಮಾಗೂ ಮೊದಲು ಯಶ್ ದೊಡ್ಡ ಸ್ಟಾರ್ ಆಗಿರಲಿಲ್ಲವಂತೆ. ಸಿನಿಮಾ ದೊಡ್ಡದಾಗಿ ಮಾಡಿ ತೋರಿಸಿದ್ದರಿಂದ ಯಶ್ ದೊಡ್ಡ ಸ್ಟಾರ್ ಎನಿಸಿಕೊಂಡರು ಅಷ್ಟೇ. ಹೀಗಂತ ಹೇಳಿದ್ದು ಮತ್ಯಾರು ಅಲ್ಲ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ತಂದೆ ಹಾಗೂ ಹೆಸರಾಂತ ನಿರ್ಮಾಪಕರಾದ ಅಲ್ಲು ಅರವಿಂದ್ ಅವರು. ಯಸ್, ಯಾವುದೋ ವಿಚಾರದ ಬಗ್ಗೆ ಮಾತನಾಡುವ ಭರದಿಂದ ನಟ ಯಶ್ ಹೆಸರು ಎಳೆದು ತಂದು ಅಲ್ಲು ಅರವಿಂದ್ ಈಗ ಸುದ್ದಿಯಾಗಿದ್ದಾರೆ

ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ‘ಕೋಟಬೊಮ್ಮಲಿ ಪಿಎಸ್’ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಿರ್ಮಾಪಕ ಅಲ್ಲು ಅರವಿಂದ್ ಭಾಗಿ ಆಗಿದ್ದರು. ಇದೇ ವೇಳೆ ಸ್ಟಾರ್ ನಟರ ಸಂಭಾವನೆ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಅರವಿಂದ್ ಉತ್ತರಿಸಿದ್ದರು. ಗೀತಾ ಆರ್ಟ್ಸ್ ಬ್ಯಾನರ್ ನಲ್ಲಿ ಸಣ್ಣ ಚಿತ್ರಗಳನ್ನು ಬಿಟ್ಟರೆ ದೊಡ್ಡ ಚಿತ್ರಗಳು ಏಕೆ ಬರುತ್ತಿಲ್ಲ ಎನ್ನುವ ಪ್ರಶ್ನೆ ಎದುರಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅಲ್ಲು ಅರವಿಂದ್ ಸಿನಿಮಾ ನಿರ್ಮಾಣ ವೆಚ್ಚವೇ ಕಾರಣ ಎಂದರು. ಬಳಿಕ ಚಿತ್ರದ ನಿರ್ಮಾಣ ವೆಚ್ಚದ ವಿಚಾರಕ್ಕೆ ಬಂದರೆ ಎಲ್ಲರೂ ಸ್ಟಾರ್ ನಟರ ಸಂಭಾವನೆ ಬಗ್ಗೆಯೇ ಮಾತನಾಡುತ್ತಿದ್ದಾರೆ. ಭಾರೀ ಸಂಭಾವನೆ ಪಡೆಯುವ ಹೀರೋಗಳಲ್ಲಿ ನಿಮ್ಮ ಕುಟುಂಬದ ಒಬ್ಬ ಹೀರೋ ಇದ್ದಾರೆ ಅಲ್ಲವೇ ಎಂದು ಪತ್ರಕರ್ತರೊಬ್ಬರು ಕೇಳಿದ್ದಾರೆ. ಇದಕ್ಕೆ ಅರವಿಂದ್ ಕೊಟ್ಟ ಉತ್ತರ ವಿಚಿತ್ರವಾಗಿತ್ತು.

“ಇತ್ತೀಚೆಗೆ ಹೆಚ್ಚಾದ ಸಿನಿಮಾ ಬಜೆಟ್ನಲ್ಲಿ ಹೀರೋಗಳು ಗರಿಷ್ಠ 20 ರಿಂದ 25%ರಷ್ಟು ಸಂಭಾವನೆ ರೂಪದಲ್ಲಿ ಪಡೆಯುತ್ತಾರೆ. ಹಾಗಾಗಿ ಹೀರೋಗಳಿಂದ ಖರ್ಚು ಹೆಚ್ಚುತ್ತದೆ ಎಂದು ಹೇಳುವುದಕ್ಕಿಂತ, ನಿರ್ಮಾಣ ವೆಚ್ಚ ಹೆಚ್ಚಿಸಿದ ಸಿನಿಮಾಗಳಲ್ಲಿ ಹೀರೋಗಳು ಇರ್ತಾರೆ ಎಂದು ನನಗೆ ಅನ್ನಿಸುತ್ತಿದೆ. ಹೆಸರು ಹೇಳುವುದು ಬೇಡ. ಕೆಲ ಸಿನಿಮಾಗಳ ಬಜೆಟ್ ಎಷ್ಟಿದೆ ಎಂದು ನೀವೇ ಗಮನಿಸಿ. ಆ ಬಜೆಟ್ನಲ್ಲಿ ನಟರ ಸಂಭಾವನೆ ಎಷ್ಟು ಎಂದು ಲೆಕ್ಕಾ ಹಾಕಿಕೊಳ್ಳಿ. ಕಡಿಮೆ ಇರುತ್ತದೆ. ಹೀರೋಗಳಿಂದಾಗಿ ಪ್ರೊಡಕ್ಷನ್ ಬಜೆಟ್ ಹೆಚ್ಚಿದೆ, ಅದಕ್ಕೆ ನಿರ್ಮಾಪಕರು ಸಿನಿಮಾ ಮಾಡದೇ ದೂರ ಉಳಿಯುತ್ತಿದ್ದಾರೆ ಎನ್ನುವುದು ಸರಿಯಲ್ಲ.”

“ಈಗ ದೊಡ್ಡ ಚಿತ್ರಗಳನ್ನು ಅದ್ಧೂರಿಯಾಗಿ ತೋರಿಸದ ಹೊರತು ಪ್ರೇಕ್ಷಕರು ಒಪ್ಪಿಕೊಳ್ಳುವುದಿಲ್ಲ. ಹೀರೋಗಳು ಯಾರೇ ಆಗಿರಲಿ, ಸಿನಿಮಾವನ್ನು ಅದ್ಧೂರಿಯಾಗಿ ತೋರಿಸಬೇಕು. ‘ಕೆಜಿಎಫ್ ‘ ಸಿನಿಮಾ ಬರುವ ಮುನ್ನ ಆತ (ಯಶ್) ಯಾರು? ಆತ ಎಷ್ಟು ದೊಡ್ಡ ಹೀರೋ? ಸಿನಿಮಾವನ್ನು ಅದ್ಧೂರಿಯಾಗಿ ತೋರಿಸಿದ್ದರಿಂದ ಆ ಸಿನಿಮಾ ಗೆಲ್ತು. ಇದೊಂದು ಉದಾಹರಣೆ ಅಷ್ಟೇ’ ಎಂದು ಅಲ್ಲು ಅರವಿಂದ್ ಹೇಳಿದ್ದಾರೆ. ಅಲ್ಲು ಅರವಿಂದ್ ಮಾತಿಗೆ ಯಶ್ ಅಭಿಮಾನಿಗಳು ಕೆಂಡಾಮಂಡಲವಾಗಿದ್ದಾರೆ. ಕೆಜಿಎಫ್ ಬರೋಕ್ಕೆ ಮುನ್ನ ಯಶ್ ಸೂಪರ್ ಸ್ಟಾರ್ ನಟ. ಅದು ನಿಮಗೆ ಗೊತ್ತಿಲ್ಲ ಎನಿಸುತ್ತದೆ. ನಮ್ಮ ಕೆಜಿಎಫ್ ಸಿನಿಮಾ ನೋಡಿ ‘ಪುಷ್ಪ’ ಸಿನಿಮಾ ಮಾಡಿ ನಿಮ್ಮ ಮಗ ಗೆದ್ದಿದ್ದು. ರಾಷ್ಟ್ರಪ್ರಶಸ್ತಿ ಪಡೆದಿದ್ದು. ಅದನ್ನು ಮರೆಯಬೇಡಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಯಶ್ ಬಗ್ಗೆ ಅಲ್ಲು ಅರವಿಂದ್ ಹೇಳಿಕೆ ಸಖತ್ ವೈರಲ್ ಆಗುತ್ತಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ಜೋಡಿಯ ಗಾನಬಜಾನ

ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ಜೋಡಿಯ ಗಾನಬಜಾನ

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.