ಶುಕ್ರವಾರ, ಜುಲೈ 24, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಹೆಜ್ಜೆ ಇಡಲಿದೆ ಹೊಸಬರ ‘ಜುಗಲ್ ಬಂದಿ’ ಸಿನಿಮಾ

Vishalakshi Pby Vishalakshi P
16/11/2023
in Majja Special
Reading Time: 1 min read
ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಹೆಜ್ಜೆ ಇಡಲಿದೆ ಹೊಸಬರ ‘ಜುಗಲ್ ಬಂದಿ’ ಸಿನಿಮಾ

ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರದಲ್ಲೂ ಸ್ಯಾಂಡಲ್‌ವುಡ್‌ನಲ್ಲಿ ಹೊಸಬರ ಸಿನಿಮಾಗಳು ಸದ್ದು ಮಾಡುತ್ತಿವೆ. ವಿನೂತನ ಕಂಟೆಂಟ್‌ನಿಂದ ಪ್ರೇಕ್ಷಕರನ್ನು ಸೆಳೆಯುತ್ತಿವೆ. ಸದ್ಯ ಇಂತಹದ್ದೇ ಒಂದು ಸಿನಿಮಾ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದೆ. ಅದುವೇ ‘ಜುಗಲ್ ಬಂದಿ’. ಸ್ಯಾಂಪಲ್ಸ್ ಮೂಲಕ ನಿರೀಕ್ಷೆ ಹೆಚ್ಚು ಮಾಡಿರುವ ಈ ಚಿತ್ರವೀಗ ಥಿಯೇಟರ್ ಗೆ ಹೆಜ್ಜೆ ಇಡಲು ರೆಡಿಯಾಗಿದ್ದು, ಶೀಘ್ರದಲ್ಲಿಯೇ ಜುಗಲ್ ಬಂದಿ ಸಿನಿಮಾ ಪ್ರೇಕ್ಷಕರ ಎದುರು ಹಾಜರಾಗಲಿದೆ.

ಹೊಸಬರ ಈ ಚಿತ್ರಕ್ಕೆ ದಿವಾಕರ ಡಿಂಡಿಮ ಆಕ್ಷನ್ ಕಟ್ ಹೇಳಿದ್ದು, ಇದು ಇವರಿಗೆ ನಿರ್ದೇಶಕರಿಗೆ ಚೊಚ್ಚಲ ಪ್ರಯತ್ನ. ಈಗಾಗಲೇ ಸಿನಿಮಾ ಫಸ್ಟ್ ಲುಕ್ ಹಾಗೂ ಹಾಡುಗಳು ಪ್ರೇಕ್ಷಕರಿಗೆ ಇಷ್ಟ ಆಗಿವೆ. ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಕತೆಯನ್ನು ಒಳಗೊಂಡಿರುವ ‘ಜುಗಲ್ ಬಂದಿ’ ಒಂದೇ ಕತೆಯ ಸಿನಿಮಾ ಅಲ್ಲ. ಇದು ಹಲವು ಕಥೆಗಳ ಸಂಗಮ. ಹೀಗಾಗಿ ಕುತೂಹಲ ದುಪ್ಪಟ್ಟು ಮಾಡಿದೆ. ಸಸ್ಪೆನ್ಸ್ ಥ್ರಿಲ್ಲರ್ ಜೊತೆಗೆ ಎಲ್ಲಾ ಎಲಿಮೆಂಟ್ಸ್‌ ಕೂಡ ಇರುವುದರಿಂದ ಪ್ರೇಕ್ಷಕರಿಗೆ ಇಷ್ಟ ಆಗುವ ಸಾಧ್ಯತೆಯಿದೆ.

‘ಕಾಂತಾರ’ ಸಿನಿಮಾದಲ್ಲಿ ರಿಷಬ್ ಶೆಟ್ಟಿಯ ತಾಯಿ ಪಾತ್ರದಲ್ಲಿ ನಟಿಸಿದ್ದ ಮಾನಸಿ ಸುಧೀರ್ ಈ ಸಿನಿಮಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅರ್ಚನಾ ಕೊಟ್ಟಿಗೆ, ಅಶ್ವಿನ್ ರಾವ್ ಪಲ್ಲಕ್ಕಿ, ಸಂತೋಷ್ ಆಶ್ರಯ್, ಯಶ್ ಶೆಟ್ಟಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳು. ಹಾಗೇ ಪ್ರಕಾಶ್ ಬೆಳಗಲ್, ಚಂದ್ರಪ್ರಭಾ ಜಿ ಯುವಕ, ರಂಜನ್, ಯುಕ್ತ ಅಲ್ಲು ಸುಶ್, ಅರವಿಂದ್ ರಾವ್ ‘ಜುಗಲ್ ಬಂದಿ’ ಸಿನಿಮಾದಲ್ಲಿ ನಟಿಸಿದ್ದಾರೆ. ದಿವಾಕರ ಡಿಂಡಿಮ ನಿರ್ದೇಶನದ ಜೊತೆಗೆ ಡಿಂಡಿಮ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಪ್ರದ್ಯೋತ್ತನ್ ಸಂಗೀತ ನಿರ್ದೇಶನ, ಪ್ರಸಾದ್ ಹೆಚ್ ಎಂ ಸಂಕಲನ ಚಿತ್ರಕ್ಕಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರೂ ಹಾಡುಗಳಿಗೆ ನಿರ್ದೇಶಕ ದಿವಾಕರ್ ಡಿಂಡಿಮ ಸಾಹಿತ್ಯ ಬರೆದಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಎಸ್ತರ್ ನರೋನ್ಹಾ ಹೊಸ ಕನಸು ‘ದಿ ವೆಕೆಂಟ್ ಹೌಸ್’ ನಾಳೆ ತೆರೆಗೆ!

ಎಸ್ತರ್ ನರೋನ್ಹಾ ಹೊಸ ಕನಸು ‘ದಿ ವೆಕೆಂಟ್ ಹೌಸ್’ ನಾಳೆ ತೆರೆಗೆ!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.