ಯುವ ಸಾಮ್ರಾಟ್ ನಾಗಚೈತನ್ಯ ಹಾಗೂ ಚಂದು ಮೊಂಡೇಟಿ ಜೋಡಿಯ ಕ್ರೇಜಿ ಪ್ರಾಜೆಕ್ಟ್ ಗೆ ಟೈಟಲ್ ಫಿಕ್ಸ್ ಮಾಡಲಾಗಿದೆ. ನಾಳೆ ಚೈತು ಜನ್ಮದಿನ..ಈ ಹಿನ್ನೆಲೆ ಚಿತ್ರತಂಡ ಒಂದು ದಿನ ಮುಂಚಿತವಾಗಿಯೇ ಫಸ್ಟ್ ಲುಕ್ ಹಾಗೂ ಟೈಟಲ್ ರಿವೀಲ್ ಮಾಡಿ ಶುಭಾಶಯ ಕೋರಿದೆ. ನಾಗಚೈತನ್ಯ 23ನೇ ಸಿನಿಮಾಗೆ ಥಂಡಲ್ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಥಂಡಲ್ ಎಂದರೆ ಕಾಂತಿಯುತ, ಶಕ್ತಿಯುತ, ಮಹತ್ವಾಂಕ್ಷೆ ಎಂದರ್ಥ..ನಾಗಚೈತನ್ಯ ಮೀನುಗಾರ ಪಾತ್ರದಲ್ಲಿ ನಟಿಸ್ತಿದ್ದು, ಉದ್ದನೆಯ ಕೂದಲು ಮತ್ತು ಗಡ್ಡದೊಂದಿಗೆ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ ಹುಟ್ಟು ಹಾಕಿಕೊಂಡು ದೋಣಿಯ ಮೇಲೆ ಕುಳಿತಿರುವ ನಾಗ ಚೈತನ್ಯ ಫಸ್ಟ್ ಲುಕ್ ಪೋಸ್ಟರ್ ಥಂಡಲ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
ಕಾರ್ತಿಕೇಯ-2 ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಮೀನುಗಾರರ ಸಮುದಾಯದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ. ಲವ್ ಸ್ಟೋರಿ ಸಿನಿಮಾದಲ್ಲಿ ಮೋಡಿ ಮಾಡಿದ್ದ ಸಾಯಿಪಲ್ಲವಿ ಹಾಗೂ ನಾಗಚೈತನ್ಯ ಜೋಡಿ ಈ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ದೇವಿಶ್ರೀ ಪ್ರಸಾದ್ ಸಂಗೀತ, ಶಾಮದತ್ ಛಾಯಾಗ್ರಾಹಣ ಚಿತ್ರಕ್ಕಿದೆ. ಪ್ರೀ ಪ್ರೊಡಕ್ಷನ್ ನಲ್ಲಿ ಬ್ಯಸಿಯಾಗಿರುವ ಥಂಡಲ್ ಸಿನಿಮಾತಂಡ ಡಿಸೆಂಬರ್ ನಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.





