ಸೋಮವಾರ, ಜುಲೈ 20, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಖ್ಯಾತ ಕಬ್ಬಡಿ ಆಟಗಾರ ’ಅರ್ಜುನ್ ಚಕ್ರವರ್ತಿ’ ಜೀವನಾಧಾರಿತ ಕಥೆಗೆ ಸಿನಿಮಾ ಟಚ್

Vishalakshi Pby Vishalakshi P
31/10/2023
in Majja Special
Reading Time: 1 min read
ಖ್ಯಾತ ಕಬ್ಬಡಿ ಆಟಗಾರ ’ಅರ್ಜುನ್ ಚಕ್ರವರ್ತಿ’ ಜೀವನಾಧಾರಿತ ಕಥೆಗೆ ಸಿನಿಮಾ ಟಚ್

ಭಾರತೀಯ ಕ್ರೀಡಾ ಜಗತ್ತಿನ ಜನಪ್ರಿಯ ಕ್ರೀಡಾಪಟು, ಕಬ್ಬಡಿ ಆಟಗಾರ ಅರ್ಜುನ್ ಚಕ್ರವರ್ತಿ ಅವರ ಜೀವನಗಾಥೆ ಹೊಂದಿರುವ ‘ಅರ್ಜುನ್ ಚಕ್ರವರ್ತಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಕ್ರೀಡಾಂಗಣದ ಮಧ್ಯಭಾಗದಲ್ಲಿ ನಿಂತು, ಪದಕವನ್ನು ಹಿಡಿದುಕೊಂಡು ಮೈಕ್ ಮುಂದೆ ತಮ್ಮ ಗೆಲುವಿನ ಕ್ಷಣವನ್ನು ‘ಅರ್ಜುನ್ ಚಕ್ರವರ್ತಿ’ ವಿವರಿಸಿದ್ದಾರೆ. ವಿಕ್ರಾಂತ್ ರುದ್ರ ನಿರ್ದೇಶನದ ಈ ಸಿನಿಮಾದಲ್ಲಿ ವಿಜಯ ರಾಮರಾಜು ‘ಅರ್ಜುನ್ ಚಕ್ರವರ್ತಿ’ಯಾಗಿ ನಟಿಸಿದ್ದು, ಸಿಜಾ ರೋಸ್ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಸಿನಿಮಾದ ಟೈಟಲ್ಲೇ ಹೇಳುವಂತೆ, ‘ಅರ್ಜುನ್ ಚಕ್ರವರ್ತಿ’ 1980ರ ದಶಕದಲ್ಲಿ ಭಾರತವನ್ನು ಪ್ರತಿನಿಧಿಸಿದ ಕಬಡ್ಡಿ ಆಟಗಾರನ ನೈಜ ಕಥೆಯನ್ನು ಆಧರಿಸಿದೆ. ಒಬ್ಬ ಕ್ರೀಡಾಪಟುವಿನ ಜೀವನದ ಹೋರಾಟಗಳು ಮತ್ತು ಗೆಲುವಿನ ಸುತ್ತಾ ಸಿನಿಮಾ ಸಾಗುತ್ತದೆ. ಪೋಷಕ ಪಾತ್ರಗಳಲ್ಲಿ ಅಜಯ್, ದಯಾನಂದ ರೆಡ್ಡಿ, ಅಜಯ್ ಘೋಷ್ ಮತ್ತು ದುರ್ಗೇಶ್ ಇದ್ದಾರೆ.

‘ಅರ್ಜುನ್ ಚಕ್ರವರ್ತಿ’ ಸಿನಿಮಾಕ್ಕೆ ವಿಘ್ನೇಶ್ ಭಾಸ್ಕರನ್ ಸಂಗೀತ ಮತ್ತು ಜಗದೀಶ್ ಚೀಕಾಟಿ ಛಾಯಾಗ್ರಹಣವಿದೆ. ‘ಗ್ಯಾನೆಟ್ ಸೆಲ್ಯುಲಾಯ್ಡ್’ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಶ್ರೀನಿ ಗುಬ್ಬಾಳ ಚಿತ್ರಕ್ಕೆ ಹಣ ಹಾಕಿದ್ದಾರೆ. ಚಿತ್ರವನ್ನು ತೆಲುಗು ಮತ್ತು ತಮಿಳಿನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಹಿಂದಿ, ಮಲಯಾಳಂ ಮತ್ತು ಕನ್ನಡದಲ್ಲಿ ಡಬ್ ಮಾಡಲಾಗುತ್ತದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
`ಆದಿ ಶಂಕರಾಚಾರ್ಯ’ರ ಅವತಾರವೆತ್ತಲಿದ್ದಾರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ?

`ಆದಿ ಶಂಕರಾಚಾರ್ಯ'ರ ಅವತಾರವೆತ್ತಲಿದ್ದಾರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ?

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.