ಬುಧವಾರ, ಜುಲೈ 9, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

’ಉಸಿರೇ ಉಸಿರೇ’ ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಅಭಿನಯ ಸುದೀಪ್!

Vishalakshi Pby Vishalakshi P
05/09/2023
in Majja Special
Reading Time: 1 min read
’ಉಸಿರೇ ಉಸಿರೇ’ ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಅಭಿನಯ ಸುದೀಪ್!

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ಉಸಿರೇ ಉಸಿರೇ’ ಚಿತ್ರದ ಪ್ರಮುಖ ಪಾತ್ರದಲ್ಲಿ ನಟ ಕಿಚ್ಚ ಸುದೀಪ್ ಅಭಿನಯಿಸುತ್ತಿರುವುದು ನಿಮಗೆ ಗೆೊತ್ತಿರಬಹುದು. ಈಗಾಗಲೇ ಈ ಸಿನಿಮಾದಲ್ಲಿ ತಮ್ಮ ಭಾಗದ ಚಿತ್ರೀಕರಣ ಮುಗಿಸಿರುವ ಸುದೀಪ್, ಇತ್ತೀಚೆಗೆ ಸಿನಿಮಾದಲ್ಲಿ ಬರುವ ತಮ್ಮ ಪಾತ್ರದ ಡಬ್ಬಿಂಗ್ ಕೂಡ ಮುಗಿಸಿಕೊಟ್ಟಿದ್ದಾರೆ

ಸಿನಿಮಾದ ಟೈಟಲ್ಲೇ ಹೇಳುವಂತೆ, ‘ಉಸಿರೇ ಉಸಿರೇ’ ನವಿರಾದ ಪ್ರೇಮಕಥಾಹಂದರದ ಸಿನಿಮಾ. ನವ ನಟ ರಾಜೀವ್ ಈ ಸಿನಿಮಾದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ಶ್ರೀಜಿತಾ ನಾಯಕಿಯಾಗಿ ನಟಿಸಿದ್ದಾರೆ. ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ತೆಲುಗಿನ ಖ್ಯಾತ ನಟರಾದ ಆಲಿ ಹಾಗೂ ಬ್ರಹ್ಮಾನಂದಂ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಡೈನಾಮಿಕ್ ಸ್ಟಾರ್ ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು, ಜಗಪ್ಪ, ಸುಶ್ಮಿತಾ ಮುಂತಾದವರು ಸಿನಿಮಾದ ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಪ್ರದೀಪ್ ಯಾದವ್ ಮೊದಲ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಸಿ. ಎಂ ವಿಜಯ್ ನಿರ್ದೇಶನವಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಎಲ್ಲಾ ಅಂದುಕೊಂಡ ಹಾಗೆ ಆದರೆ ಆಕ್ಟೋಬರ್ ನಲ್ಲಿ ತೆರೆಗೆ ಬರುವ ಸಾಧ್ಯತೆಗಳಿವೆ. ‘ಎನ್ನುವುದು ಚಿತ್ರತಂಡದ ಮೂಲಗಳ ಮಾಹಿತಿ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ತಲಾ 1 ಲಕ್ಷದಂತೆ 100 ಕುಟುಂಬಕ್ಕೆ ಚೆಕ್ ನೀಡುವುದಾಗಿ ಘೋಷಿಸಿದ ವಿಜಯ್ ದೇವರಕೊಂಡ!

ತಲಾ 1 ಲಕ್ಷದಂತೆ 100 ಕುಟುಂಬಕ್ಕೆ ಚೆಕ್ ನೀಡುವುದಾಗಿ ಘೋಷಿಸಿದ ವಿಜಯ್ ದೇವರಕೊಂಡ!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.