Powder: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ KRG ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ಪೌಂಡರ್(Powder). ಟೀಸರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಆಗಸ್ಟ್ 15ರಂದು ತೆರೆಗೆ ಬರಲು ಸಿದ್ಧವಾಗಿತ್ತು. ಅದಕ್ಕಾಗಿ ಚಿತ್ರತಂಡ ಭರದ ಪ್ರಚಾರ ಕಾರ್ಯ ಕೂಡ ನಡೆಸಿತ್ತು. ಆದರೆ ಈಗ ಪೌಡರ್ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ. ಕನ್ನಡ ಸಿನಿಮಾಗಳ ಉಳಿವಿಗಾಗಿ ಕೆಆರ್ ಜಿ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ.
ಆಗಸ್ಟ್ 15ರಂದು ಸಾಕಷ್ಟು ಸಿನಿಮಾಗಳು ತೆರೆಗೆ ಬರುತ್ತಿವೆ. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ KRG ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ. ಒಂದೇ ದಿನ ಸಾಕಷ್ಟು ಸಿನಿಮಾಗಳು ಬಿಡುಗಡೆಯಾದರೆ ಬಾಕ್ಸಾಫೀಸ್ ನಲ್ಲಿ ಕ್ಲ್ಯಾಷ್ ಆಗಲಿದೆ. ಕಲೆಕ್ಷನ್ ಮೇಲೆಯೂ ಹೊಡೆತ ಬೀಳಲಿದೆ. ಮೊದಲೇ ಕನ್ನಡ ಚಿತ್ರರಂಗದ ಸ್ಥಿತಿ ಶೋಚನೀಯವಾಗಿದೆ. ಇಂತಹ ಸಂದರ್ಭದಲ್ಲಿ ಬಾಕ್ಸಾಫೀಸ್ ವಾರ್ ಬೇಡ ಎಂಬುದನ್ನು ಅರಿತ KRG ಸಂಸ್ಥಾಪಕಾರದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಪೌಡರ್ ರಿಲೀಸ್ ದಿನಾಂಕವನ್ನು ಮುಂಡೂಡಿದ್ದಾರೆ.
ಜನಾರ್ದನ್ ಚಿಕ್ಕಣ್ಣ ನಿರ್ದೇಶನದ “ಪೌಡರ್” ಚಿತ್ರದಲ್ಲಿ ದಿಗಂತ್ ಮಂಚಾಲೆ(Diganth Manchale), ಧನ್ಯ ರಾಮ್ ಕುಮಾರ್(Dhanya Ramkumar), ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ(Sharmila Mandre), ರಂಗಾಯಣ ರಘು(Rangayana Raghu), ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್(Vasuki Vaibhav) ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ.