ಸ್ಯಾಂಡಲ್ವುಡ್ ನಲ್ಲಿ ಒಂದಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ‘ಅನ್ಲಾಕ್ ರಾಘವ’ ಸಿನಿಮಾ ಕೂಡ ಒಂದು. ಸೆಟ್ಟೇರಿದ ದಿನದಿಂದಲೂ ಆಗಾಗ್ಗೆ ಎಲ್ಲರ ಗಮನ ಸೆಳೆಯುತ್ತಿರುವ ‘ಅನ್ಲಾಕ್ ರಾಘವ’ ಚಿತ್ರತಂಡದ ಕಡೆಯಿಂದ ಮತ್ತೊಂದು ಝಲಕ್ ಹೊರಬಿದ್ದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್.
‘ಎ 2’ ಮ್ಯೂಸಿಕ್ ಯು-ಟ್ಯೂಬ್ ಚಾನೆಲ್ ನಲ್ಲಿ ‘ಮೂಡ್ಸ್ ಆಫ್ ರಾಘವ’ ಟೀಸರ್ ಬಿಡುಗಡೆಯಾಗಿದೆ . ‘ಅನ್ಲಾಕ್ ರಾಘವ’ ಚಿತ್ರವನ್ನು ‘ಮಯೂರ ಮೋಷನ್ ಪಿಕ್ಚರ್ಸ್’ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.
ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ. ಸದ್ಯ ಬಿಡುಗಡೆಯಾಗಿರುವ ‘ಮೂಡ್ಸ್ ಆಫ್ ರಾಘವ’ ಟೀಸರ್ ನ ನೋಡಿ.. ರಾಘವನಿಗೆ ನಿಮ್ಮ ಸಹಕಾರ ನೀಡಿ ಎನ್ನುತ್ತಿದೆ ಚಿತ್ರತಂಡ.





