ಶುಕ್ರವಾರ, ಜುಲೈ 24, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಹೊಸ ಹೀರೋ! ಕಾರ್ತಿಕ್ ರಾಜುಗೆ ಸಿಮ್ರಾನ್ ನಾಯಕಿ 

Vishalakshi Pby Vishalakshi P
02/10/2023
in Majja Special
Reading Time: 1 min read
ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಹೊಸ ಹೀರೋ! ಕಾರ್ತಿಕ್ ರಾಜುಗೆ ಸಿಮ್ರಾನ್ ನಾಯಕಿ 

ಕನ್ನಡ ಚಿತ್ರರಂಗದಲಲ್ಲಿ ‘ಮನೆ ದೇವ್ರು’, ‘ಹಾಲುಂಡ ತವರು’, ‘ಕರುಳಿನ ಕೂಗು’ ಮುಂತಾದ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ ಹಿರಿಯ ನಿರ್ಮಾಪಕ ವೈಜಾಕ್ ರಾಜು ಅವರ ಪುತ್ರ ಕಾರ್ತಿಕ್ ರಾಜು, ಇದೀಗ ‘ಅಥರ್ವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ‘ಅಥರ್ವ’ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿದ್ದು, ಇದೇ ನವೆಂಬರ್ ತಿಂಗಳಿನಲ್ಲಿ ತೆರೆಗೆ ಬರುವ ಸಾಧ್ಯತೆಯಿದೆ.

ತಮ್ಮ ಮೊದಲ ಕನ್ನಡ ಸಿನಿಮಾದ ಬಗ್ಗೆ ಮಾತನಾಡಿರುವ ಕಾರ್ತಿಕ್ ರಾಜು, ‘ನಮ್ಮ ತಂದೆ ವೈಜಾಕ್ ರಾಜು, ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ನಾನು ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದೇನೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಕನ್ನಡ ಚಿತ್ರದಲ್ಲಿ ನಾಯಕನಾಗಿ ನಟಿಸಬೇಕೆಂಬ ನನ್ನ ಬಹುದಿನ ಕನಸು ಈಗ ಈಡೇರಿದೆ. ಇದಕ್ಕೂ ಮೊದಲು ನಾನು ಪುನೀತ್ ರಾಜಕುಮಾರ್ ಅವರ ‘ವೀರ ಕನ್ನಡಿಗ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ‘ಅಥರ್ವ’ ಒಂದು ಸಸ್ಪೆನ್ಸ್-ಥ್ರಿಲ್ಲರ್ ಚಿತ್ರ’ ಎಂದಿದ್ದಾರೆ.

ನಾನು ಮೂಲತಃ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಹಾಗೂ ಅನೇಕ ನಿರ್ದೇಶಕರೊಂದಿಗೆ ಕೆಲಸ ಮಾಡಿದ ಅನುಭವವಿರುವ ಮಹೇಶ್ ರೆಡ್ಡಿ ‘ಅಥರ್ವ’ ಚಿತ್ರದ ನಿರ್ದೇಶಕರು. ‘ಕ್ಲೂಸ್ ಡಿಪಾರ್ಟ್ಮೆಂಟ್ ಎಂಬುದು ಪೊಲೀಸ್ ಡಿಪಾರ್ಟ್ಮೆಂಟ್ ವ್ಯಾಪ್ತಿಗೆ ಬರುತ್ತದೆ. ಈ ಕ್ಲೂಸ್ ಡಿಪಾರ್ಟ್ಮೆಂಟ್ ಬಳಸಿಕೊಂಡು ಹೆಚ್ಚಿನ ಸಿನಿಮಾಗಳು ಬಂದಿಲ್ಲ. ನಮ್ಮ ಚಿತ್ರದಲ್ಲಿ ಒಂದು ಕೊಲೆಯ ಸತ್ಯವನ್ನು ತಿಳಿಯಲು ಕ್ಲೂಸ್ ಡಿಪಾರ್ಟ್ಮೆಂಟ್ ಎಷ್ಟು ಮುಖ್ಯ ಎಂಬುದನ್ನು ತೋರಿಸಿದ್ದೇವೆ’ ಎಂಬುದು ನಿರ್ದೇಶಕ ಮಹೇಶ್ ರೆಡ್ಡಿ ಮಾತು. ಚಿತ್ರದಲ್ಲಿ ನಾಯಕಿ ಸಿಮ್ರಾನ್ ಪತ್ರಕರ್ತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
‘ಶುಗರ್ ಫ್ಯಾಕ್ಟರಿ’ ನಲ್ಲಿ ಮೂವರು ಸುಂದರಿಯರ ಜೊತೆ ಡಾರ್ಲಿಂಗ್ ಕೃಷ್ಣ ರೊಮ್ಯಾನ್ಸ್ !

‘ಶುಗರ್ ಫ್ಯಾಕ್ಟರಿ’ ನಲ್ಲಿ ಮೂವರು ಸುಂದರಿಯರ ಜೊತೆ ಡಾರ್ಲಿಂಗ್ ಕೃಷ್ಣ ರೊಮ್ಯಾನ್ಸ್ !

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.