ಬುಧವಾರ, ಜುಲೈ 2, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

Appu Cup: ‘ಅಪ್ಪು ಕಪ್ ಸೀಸನ್ 2’ಗೆ ಚಾಲನೆ – ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್, ಶ್ರೀಮುರಳಿ

Bharathi Javalliby Bharathi Javalli
15/07/2024
in Majja Special
Reading Time: 1 min read
Appu Cup: ‘ಅಪ್ಪು ಕಪ್ ಸೀಸನ್ 2’ಗೆ ಚಾಲನೆ – ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್,  ಶ್ರೀಮುರಳಿ

Appu Cup: ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ ” ಅಪ್ಪು ಕಪ್ ಸೀಸನ್ 2″(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಅಪ್ಪು ಸಂಭ್ರಮ ಸಮಾರಂಭ ಅದ್ದೂರಿಯಾಗಿ ನಡೆಯಿತು. ಸಾಯಿ ಗೋಲ್ಡ್ ಪ್ಯಾಲೆಸ್  ಶರವಣ ನಿರ್ಮಿಸಿರುವ ಐದು ಕೆಜಿ ತೂಕದ ಅಪ್ಪು ಭಾವಚಿತ್ರವುಳ್ಳ ಬೆಳ್ಳಿ ಕಪ್ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅನಾವರಣವಾಯಿತು.

ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್(Ashwini Puneeth Rajkumar), ಶೆಟಲ್ ಆಟ, ಅಪ್ಪು ಅವರ ಮೆಚ್ಚಿನ ಆಟ. ಕಳೆದ ವರ್ಷದಿಂದ ಅಪ್ಪು ಕಪ್ ಟೂರ್ನಿಯನ್ನು ಚೇತನ್ ಅವರು ಚೆನ್ನಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರಿಗೆ ಹಾಗೂ ಭಾಗವಹಿಸಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದರು.     ಯಾವುದಾದರೂ ಆಟದ ನೆಪದಲ್ಲಿ ಕಲಾವಿದರನ್ನು ಒಟ್ಟಾಗಿ ಸೇರಿಸುವ ಆಸೆ ಅಪ್ಪು ಅವರಿಗಿತ್ತು. ಅದು ಹೊರದೇಶದಲ್ಲಿ ಅದನ್ನು ನಡೆಸಬೇಕೆಂಬುದು ಅವರ ಯೋಚನೆಯಾಗಿತ್ತು. ಸದಾ ಒಬ್ಬರಿಗೆ ಒಳೆಯದನ್ನೇ ಬಯಸುವ ಹೃದಯ ಅವರಿಗಿತ್ತು. ಅಂತಹ ಪುನೀತ್ ರಾಜಕುಮಾರ್(Puneeth Rajkumar) ಅವರ ನೆನಪಿನಲ್ಲಿ ನಡೆಯುತ್ತಿರುವ “ಅಪ್ಪು ಕಪ್ ಸೀಸನ್ 2” ಯಶಸ್ವಿಯಾಗಲಿ’ ಎಂದು ಶ್ರೀಮುರಳಿ(SriMurali) ಹಾರೈಸಿದರು.

ನಾಡು ಕಂಡ ಶ್ರೇಷ್ಠ ನಟ ಪುನೀತ್ ರಾಜಕುಮಾರ್(Puneeth Rajkumar) ಅವರ ಹೆಸರಿನಲ್ಲಿ ನಡೆಯುತ್ತಿರುವ ಈ “ಅಪ್ಪು ಕಪ್” ಶೆಟಲ್ ಬ್ಯಾಡ್ಮಿಂಟನ್ ಟೂರ್ನಿಯ ಬಗ್ಗೆ ಚೇತನ್ ಸೂರ್ಯ ಅವರು ಹೇಳಿದಾಗ ಬಹಳ ಸಂತೋಷವಾಯಿತು. ನಾನು ಮೊದಲೇ ತಿಳಿಸಿದಂತೆ ಈ ಟೂರ್ನಿಯ ಮೊದಲ ವಿಜೇತರಿಗೆ ನೂರು ಗ್ರಾಮ್ ಬಂಗಾರ, ದ್ವಿತೀಯ ವಿಜೇತರಿಗೆ ಐವತ್ತು ಗ್ರಾಮ್ ಬಂಗಾರ ಹಾಗೂ ಮೂರನೇ ವಿಜೇತರಿಗೆ ಇಪ್ಪತ್ತೈದು ಗ್ರಾಮ್ ಬಂಗಾರವನ್ನು ಬಹುಮಾನ ನೀಡುವುದಾಗಿ ಸಾಯಿ ಗೋಲ್ಡ್ ಪ್ಯಾಲೆಸ್ ಶರವಣ(Sharavana) ತಿಳಿಸಿದರು.

ನಾವು ಕಳೆದ ವರ್ಷದಿಂದ ಆಯೋಜಿಸುತ್ತಿರುವ  “ಅಪ್ಪು ಕಪ್” ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಸಹಕಾರ ನೀಡಿರುವುದು ಬಹಳ ಖುಷಿಯಾಗಿದೆ‌. ಶ್ರೀಮುರಳಿ ಅವರು ಹೇಳಿದಂತೆ ಮುಂದಿನ ವರ್ಷ ಹೊರದೇಶದಲ್ಲಿ ಈ ಟೂರ್ನಿಯ ಸೆಮಿಫೈನಲ್ ಹಾಗೂ ಫೈನಲ್ ಆಯೋಜಿಸಲು ಪ್ರಯತ್ನ ಪಡುತ್ತೇನೆ‌. ಈ ಬಾರಿ ಟೂರ್ನಿಯಲ್ಲಿ ಹತ್ತು ತಂಡಗಳಿದೆ. ಹತ್ತು ತಂಡಗಳ ಮಾಲೀಕರಿಗೆ, ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರಿಗೆ ಹಾಗೂ ಎಲ್ಲಾ ತಂಡಗಳ ಮಾಲೀಕರಿಗೆ, ಆಟಗಾರರಿಗೆ ಧನ್ಯವಾದ ತಿಳಿಸಿದ “ಅಪ್ಪು ಕಪ್” ನ ರುವಾರಿ ಚೇತನ್ ಸೂರ್ಯ(Chethan Surya), ಜುಲೈ 26, 27, 28 ಬೆಂಗಳೂರಿನಲ್ಲಿ ಅಶ್ವಿನಿ  ಪುನೀತ್ ರಾಜಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Not Out: ಈ ವಾರ ಬಿಡುಗಡೆಯಾಗುತ್ತಿದೆ ‘ನಾಟ್ ಔಟ್’ ಸಿನಿಮಾ -ಲವ್‌ ಮಾಕ್ಟೈಲ್‌ ರಚನಾ ಇಂದರ್, ಅಜಯ್‌ ಪೃಥಿ ನಟಿಸಿರುವ ಚಿತ್ರ

Not Out: ಈ ವಾರ ಬಿಡುಗಡೆಯಾಗುತ್ತಿದೆ ‘ನಾಟ್ ಔಟ್’ ಸಿನಿಮಾ -ಲವ್‌ ಮಾಕ್ಟೈಲ್‌ ರಚನಾ ಇಂದರ್, ಅಜಯ್‌ ಪೃಥಿ ನಟಿಸಿರುವ ಚಿತ್ರ

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.