ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ‘ಕಾಟೇರ’ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ.
‘ಕಾಟೇರ’ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ತನಕ ನೂರು ದಿನಗಳ ಚಿತ್ರೀಕರಣವಾಗಿದೆ. ಮೂರು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ಎಪ್ಪತ್ತರ ದಶಕದಲ್ಲಿ ನಡೆಯುವ ಕಥೆಯಾಗಿದೆ. ಹಾಗಾಗಿ ಈ ಸ್ಥಳದಲ್ಲಿ ಹಳ್ಳಿಯ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಲಿದೆ ಎಂದಿದ್ದಾರೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್.
‘ಕಾಟೇರ’ ಸಿನಿಮಾದಲ್ಲಿ ದರ್ಶನ್ ನಾಯಕನಾಗಿ ನಟಿಸುತ್ತಿದ್ದು, ಹಿರಿಯ ನಟಿ ಮಾಲಾಶ್ರೀ ಅವರ ಮಗಳು ಆರಾಧನಾ ಮೊದಲ ಬಾರಿಗೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹಿರಿಯ ನಟರಾದ ಅವಿನಾಶ್, ಕುಮಾರ್ ಗೋವಿಂದ್, ವಿನೋದ್ ಆಳ್ವಾ ಮೊದಲಾದವರು ‘ಕಾಟೇರ’ ಸಿನಿಮಾದ ಇತರ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

‘ಕಾಟೇರ’ ಸಿನಿಮಾದ ಹಾಡುಗಳಿಗೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ನೀಡುತ್ತಿದ್ದಾರೆ. ಚಿತ್ರಕ್ಕೆ ಸುಧಾಕರ್ ಛಾಯಾಗ್ರಹಣವಿದೆ. ‘ಕಾಟೇರ’ನಿಗೆ ಮಾಸ್ತಿ ಸಂಭಾಷಣೆ, ಜಡೇಶ್ ಹಂಪಿ ಚಿತ್ರಕಥೆ ಬರೆದಿದ್ದಾರೆ. ಇದೇ ವರ್ಷಾಂತ್ಯಕ್ಕೆ ‘ಕಾಟೇರ’ ಸಿನಿಮಾವನ್ನು ತೆರೆಗೆ ತರುವ ಯೋಜನೆಯಲ್ಲಿದೆ ಚಿತ್ರತಂಡ.





