ನಟ ಶರಣ್ ಈ ಬಾರಿ ‘ಛೂ… ಮಂತರ್’ ಎಂಬ ಮತ್ತೊಂದು ಔಟ್ ಆ್ಯಂಡ್ ಔಟ್ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಸದ್ದಿಲ್ಲದೆ ‘ಛೂ… ಮಂತರ್’ ಸಿನಿಮಾದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಇತ್ತೀಚೆಗೆ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆಗೊಳಿಸಿದೆ.

‘ತರುಣ್ ಸ್ಟುಡಿಯೋಸ್’ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಮೂಡಿಬಂದಿಕುವ ‘ಛೂ… ಮಂತರ್’ ಚಿತ್ರದ ಟೈಟಲ್ ಟ್ರ್ಯಾಕ್ ಆನಂದ್ ಆಡಿಯೋ ಯೂ-ಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಟೈಟಲ್ ಟ್ರ್ಯಾಕ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

‘ಛೂ… ಮಂತರ್’ ಸಿನಿಮಾದ ಟೈಟಲ್ ಗೆ ಗಾಯಕ ಚಂದನ್ ಶೆಟ್ಟಿ ಧ್ವನಿಯಾಗಿದ್ದು, ಸಂಗೀತವನ್ನೂ ಸಂಯೋಜಿಸಿದ್ದಾರೆ. ‘ಛೂ… ಮಂತರ್’ ಸಿನಿಮಾದಲ್ಲಿ ನಾಯಕ ಶರಣ್ ಅವರಿಗೆ ಅದಿತಿ ಪ್ರಭುದೇವ ಹಾಗೂ ಮೇಘನಾ ಗಾಂವ್ಕರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇದೇ ವರ್ಷಾಂತ್ಯಕ್ಕೆ ‘ಛೂ… ಮಂತರ್’ ಸಿನಿಮಾವನ್ನು ತೆರೆಗೆ ತರುವ ಯೋಜನೆಯಲ್ಲಿದೆ ಚಿತ್ರತಂಡ.





