ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ‘ಫೈಟರ್’ ಸಿನಿಮಾದ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಇದೇ ಅಕ್ಟೊಬರ್ 6 ರಂದು ‘ಫೈಟರ್’ ಸಿನಿಮಾ ತೆರೆಗೆ ಬರುತ್ತಿದೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು, ಮಾನವಹಕ್ಕು ಹೋರಾಟಗಾರರು, ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರ ಸಮ್ಮುಖದಲ್ಲಿ ‘ಫೈಟರ್’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಯಿತು. ನಿಜವಾದ ‘ಫೈಟರ್’ ಗಳೆಂದರೆ ನಮ್ಮ ನಾಡು,ನುಡಿ,ಜಲ, ಸಂಸ್ಕೃತಿ, ದೇಶಕ್ಕಾಗಿ ಹೋರಾಡಿದ ಹೋರಾಟಗಾರರು. ಹಾಗಾಗಿ ನಾವು ಈ ನಮ್ಮ ಹೋರಾಟಗಾರರಿಂದ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲು ತೀರ್ಮಾನಿಸಿದೆವು ಎಂದಿದೆ ಚಿತ್ರತಂಡ.
‘ಫೈಟರ್’ ಸಿನಿಮಾದಲ್ಲಿ ನಾಯಕ ವಿನೋದ್ ಪ್ರಭಾಕರ್ ರೈತಪರ ಹೋರಾಟಗಾರನಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಲೇಖಾಚಂದ್ರ ಅಭಿನಯಿಸಿದ್ದಾರೆ. ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದಲ್ಲಿ ಮೂಡಿಬಂದಿರುವ ‘ಫೈಟರ್’ ಸಿನಿಮಾವನ್ನು ನೂತನ ಉಮೇಶ್ ನಿರ್ದೇಶನ ಮಾಡಿದ್ದಾರೆ.




