ಶುಕ್ರವಾರ, ಜುಲೈ 4, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಸಿನಿಮಾಗಳಿಗೆ ಸಬ್ಸಿಡಿ ಬೇಡಿಕೆಯಿಟ್ಟ ಧನಂಜಯ್: ಡಾಲಿ ಮನವಿಗೆ ಸ್ಪಂಧಿಸಿದ ಸಿಎಂ!

Vishalakshi Pby Vishalakshi P
01/03/2024
in Majja Special
Reading Time: 1 min read
ಸಿನಿಮಾಗಳಿಗೆ ಸಬ್ಸಿಡಿ ಬೇಡಿಕೆಯಿಟ್ಟ ಧನಂಜಯ್: ಡಾಲಿ ಮನವಿಗೆ ಸ್ಪಂಧಿಸಿದ ಸಿಎಂ!

ನಿನ್ನೆ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Chirotsava) ಅದ್ದೂರಿ ಚಾಲನೆ ಸಿಕ್ಕಿದೆ. ಈ ಬಾರಿ ಬೆಂಗಳೂರು ಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ ಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ. ಡಾಲಿ ಧನಂಜಯ್ (Dolly Dhananjay) ಅವರನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನೇಮಕ ಮಾಡಿರುವುದು ಅವರ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಖುಷಿ ತಂದಿದೆ.

ವಿಧಾನಸೌಧದ ಮುಂಭಾಗದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ (Siddaramaiah) ಅವರ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ, ಸಾಧು ಕೋಕಿಲ, ಆರಾಧನಾ ಸೇರಿದಂತೆ ಅನೇಕ ಸಿನಿ ಗಣ್ಯರು ಉಪಸ್ಥಿತರಿದ್ದರು. ಈ ಬಾರಿ ಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಡಾಲಿ ಧನಂಜಯ ಮಾತನಾಡಿ ಚಿತ್ರೋದ್ಯಮದ ಪರವಾಗಿ ಒಂದಿಷ್ಟು ಬೇಡಿಕೆಗಳನ್ನು ಸಿಎಂ ಮುಂದಿಟ್ಟರು.

‘ಕೊರೊನಾ ಬಳಿಕ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ, ಇದರ ಜೊತೆಗೆ ಪ್ರಶಸ್ತಿ ಕೂಡ ನಿಂತಿದೆ. ಕಲಾವಿದರಿಗೆ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಕಾಂತರ, ಕೆಜಿಎಫ್ ಅಂತಹ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಇದರ ಜೊತೆಗೆ ಸರ್ಕಾರದ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಸದ್ಯ ನಿಂತಿರುವ ಪ್ರಶಸ್ತಿ ಮತ್ತು ಸಬ್ಸಿಡಿಯನ್ನು ಮುಂದುವರಿಸಬೇಕೆಂದು ಚಿತ್ರರಂಗದ ಪರವಾಗಿ ನಾನು ಸಿಎಂ ಬಳಿ ಕೇಳಿಕೊಳ್ಳುತ್ತಿದ್ದೇನೆ’ ಎಂದರು.

ಧನಂಜಯ್ ಮಾತುಗಳಿಗೆ ಸಿಎಂ ಸಿದ್ದರಾಮಯ್ಯ ಅಲ್ಲೇ ಸಮ್ಮತಿ ಸೂಚಿಸಿದರು. ಚಿತ್ರೋತ್ಸವ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಚಿತ್ರೋತ್ಸವಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಾಯವನ್ನು ನೀಡಿದೆ, ಮುಂದೆಯೂ ಸಹ ಚಿತ್ರರಂಗಕ್ಕೆ ಎಲ್ಲಾ ರೀತಿಯ ಸಹಾಯವನ್ನು ಮಾಡಲಿದೆ. ಕನ್ನಡ ಚಿತ್ರರಂಗಕ್ಕೆ ಎಲ್ಲಾ ರೀತಿಯ ಬೆಂಬಲ, ಹಣಕಾಸಿನ ಸಹಕಾರವನ್ನು ಕೊಡುತ್ತೇನೆ. 2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ಈಗ ನಾನು ಕಮಿಟಿಗಳನ್ನು ಮಾಡಿದ್ದೇನೆ. ಆ ಕಮಿಟಿ ವರದಿ ಕೊಟ್ಟ ತಕ್ಷಣ ಎಲ್ಲಾ ವರ್ಷದ ಪ್ರಶಸ್ತಿಗಳನ್ನು ಕೊಡುತ್ತೇವೆ’ ಎಂದರು.

ಇಂದು ಉದ್ಘಾಟನೆಯಾದ ಚಲನಚಿತ್ರೋತ್ಸವ ಮಾರ್ಚ್​ 7 ರವರೆಗೆ ನಡೆಯಲಿದೆ. ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಮನಸ್ತಾಪ ಮರೆತು ಒಂದಾದ ಕಪಿಲ್‌-ಸುನಿಲ್‌… ನೆಟ್‌ಫ್ಲಿಕ್ಸ್‌ನಲ್ಲಿ ಬರ್ತಿದೆ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼ !

ಮನಸ್ತಾಪ ಮರೆತು ಒಂದಾದ ಕಪಿಲ್‌-ಸುನಿಲ್‌... ನೆಟ್‌ಫ್ಲಿಕ್ಸ್‌ನಲ್ಲಿ ಬರ್ತಿದೆ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼ !

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.