ಸದ್ಯ ನಾಯಕ ನಟ ಧನ್ವೀರ್ ನಾಯಕರಾಗಿ ನಟಿಸುತ್ತಿರುವ ‘ವಾಮನ’ ಸಿನಿಮಾದ ಬಿಡುಗಡೆಗೆ ತಯಾರಿ ನಡೆಯುತ್ತಿದೆ. ಇದರ ಬೆನ್ನಲ್ಲೇ ಧನ್ವೀರ್ ನಾಯಕನಾಗಿ ಅಭಿನಯಿಸಲಿರುವ ನೂತನ ಚಿತ್ರಕ್ಕೂ ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ.
ಹೌದು, ಧನ್ವೀರ್ ನಾಯಕರಾಗಿ ನಟಿಸುತ್ತಿರುವ ಐದನೇ ಸಿನಿಮಾದ ಸ್ಕ್ರಿಪ್ಟ್ ಕೆಲಸಗಳು ಭರದಿಂದ ನಡೆಯುತ್ತಿದ್ದು, ಧನ್ವೀರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಹೊಸ ಸಿನಿಮಾ ಘೋಷಣೆಯಾಗಿದೆ. ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯುವ ನಿರ್ದೇಶಕ ರಘುಕುಮಾರ್ ಓ ಆರ್ ನಿರ್ದೇಶಿಸುತ್ತಿದ್ದಾರೆ.‘ಸಮೃದ್ಧಿ ಫಿಲಂಸ್’ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.
ಈ ಸಿನಿಮಾದಲ್ಲಿ ಧನ್ವೀರ್ ಜೊತೆಗೆ ರಂಗಾಯಣ ರಘು , ರವಿಶಂಕರ್, ತಬಲನಾಣಿ, ಸಾಧುಕೋಕಿಲ ಇನ್ನಿತರ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಕಾರ್ತಿಕ್ ಎಸ್. ಛಾಯಾಗ್ರಹಣ, ಉಮೇಶ್ ಆರ್. ಬಿ ಸಂಕಲನವಿದೆ. ಜುಡಾ ಸ್ಯಾಂಡಿ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದ್ದು, ಶೀಘ್ರದಲ್ಲೇ ಚಿತ್ರೀಕರಣ ಶುರು ಮಾಡುತ್ತೇವೆ ಎಂದು ನಿರ್ಮಾಣ ಸಂಸ್ಥೆ ‘ಸಮೃದ್ಧಿ ಫಿಲಂಸ್’ ತಿಳಿಸಿದೆ.