Dharma KeerthiRaj ಹಿರಿಯ ನಟ ಕೀರ್ತಿರಾಜ್ ಪುತ್ರ ಧರ್ಮ ಕೀರ್ತಿರಾಜ್(Dharma Keerthiraj) ನಾಯಕ ನಟನಾಗಿ ಹಲವು ಸಿನಿಮಾಗಳಲ್ಲಿ ಗಮನ ಸೆಳೆದಿದ್ದಾರೆ. ಬಿಗ್ ಬ್ರೇಕ್ಗಾಗಿ ಕಾಯುತ್ತಿರುವ ಧರ್ಮ ಕೀರ್ತಿರಾಜ್ ನಯಾ ಸಿನಿಮಾ ಒಪ್ಪಿಕೊಂಡಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ನೇರವೇರಿದ್ದು, ಶೀಘ್ರದಲ್ಲೇ ಚಿತ್ರತಂಡ ಟೈಟಲ್ ರಿವೀಲ್ ಮಾಡಲಿದೆ.
ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿ ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಹೆಚ್.ಜನಾರ್ದನ್ ಹಾಗೂ ಸಿ.ಎಲ್ ಹರ್ಷವರ್ಧನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಮೇಶ್ ರಾಜ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರ್ತಿದೆ. ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿದ್ದು. ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಆರಂಭ ಫಲಕ ತೋರುವ ಮೂಲಕ ಸಿನಿಮಾಗೆ ಚಾಲನೆ ನೀಡಿದ್ದಾರೆ.
ಆಕ್ಷನ್ ಡ್ರಾಮ ಜಾನರ್ ಒಳಗೊಂಡ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. “ಗ್ಯಾಂಗ್ ಲೀಡರ್”, ” ತವರಿನ ಋಣ” ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ. ಚಿತ್ರದಲ್ಲಿ ನಾಯಕಿಯಾಗಿ ಪ್ರಿಯಾ ಹೆಗ್ಡೆ(Priya Hegde) ನಟಿಸುತ್ತಿದ್ದಾರೆ. ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ.ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.