ಭಾನುವಾರ, ಜುಲೈ 6, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಶ್ರುತಿಹರಿಹರನ್‌ ನಟನೆಯ `ಸಾರಾಂಶ’ ಟ್ರೇಲರ್‌ ರಿವೀಲ್‌ ಮಾಡಿದ್ರು ಡೈರೆಕ್ಟರ್‌ ಹೇಮಂತ್‌ ರಾವ್‌!

Vishalakshi Pby Vishalakshi P
01/02/2024
in Majja Special
Reading Time: 1 min read
ಶ್ರುತಿಹರಿಹರನ್‌ ನಟನೆಯ `ಸಾರಾಂಶ’ ಟ್ರೇಲರ್‌ ರಿವೀಲ್‌ ಮಾಡಿದ್ರು ಡೈರೆಕ್ಟರ್‌ ಹೇಮಂತ್‌ ರಾವ್‌!

ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆ ಮೂಲಕ ಸಿನಿಮಾ ಮೇಲೆ ಮೂಡಿಕೊಂಡಿದ್ದ ಕುತೂಹಲ ತಣಿಸುವಂತೆ ಇದೀಗ ಟ್ರೈಲರ್ ಬಿಡುಗಡೆಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಗೆ ವಿಶೇಷ ಅತಿಥಿಯಾಗಿ ಆಗಮಿಸಿದ ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್, ಸಾರಾಂಶ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದರು. ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಂಡು ಇಡೀ ಚಿತ್ರತಂಡಕ್ಕೆ ಶುಭಕೋರಿದರು. ನಟಿ ಶ್ರುತಿ ಹರಿಹರನ್, ದೀಪಕ್ ಸುಬ್ಮಣ್ಯ, ಸೂರ್ಯ ವಸಿಷ್ಠ, ಸಂಗೀತ ನಿರ್ದೇಶಕ ಉದಿತ್ ಹರಿತಾಸ್, ರವಿ ಭಟ್, ಶ್ವೇತಾ ಗುಪ್ತ ಸೇರಿದಂತೆ ಚಿತ್ರತಂಡದ ಸದಸ್ಯರು ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದರು.

ಅಂದ್ಹಾಗೇ, ʻಸಾರಾಂಶʼ ಈ ದಿನಮಾನಕ್ಕೆ ಅತ್ಯಂತ ಅಪರೂಪವೆಂಬಂಥಾ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಿತ್ರ. ನಿರ್ದೇಶಕ ಸೂರ್ಯ ವಸಿಷ್ಠ ಅವರೇ ಪ್ರಧಾನ ಪಾತ್ರಗಳಲ್ಲೊಂದಕ್ಕೆ ಜೀವ ತುಂಬಿದ್ದಾರೆ. ದೀಪಕ್ ಸುಬ್ರಮಣ್ಯ ವಿಶಿಷ್ಟ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಶ್ರುತಿ ಹರಿಹರನ್ ಮಾಯಾ ಎಂಬ ಪಾತ್ರವನ್ನು ಒಳಗಿಳಿಸಿಕೊಂಡಿದ್ದಾರೆ. ಈ ಎಲ್ಲ ಪಾತ್ರಗಳ ಝಲಕ್ಕುಗಳು ಸದರಿ ಟ್ರೈಲರ್ ನಲ್ಲಿ ಕಾಣಿಸಿಕೊಂಡಿವೆ. ಈ ಸಿನಿಮಾದ ಎಲ್ಲ ಪಾತ್ರಗಳೂ ವಿಶೇಷವಾಗಿವೆ ಎಂಬುದಕ್ಕೆ ಈ ಟ್ರೈಲರ್ ನಲ್ಲಿ ಪುರಾವೆಗಳು ಸಿಗುತ್ತವೆ. ಅದರಲ್ಲೊಂದು ಪಾತ್ರವನ್ನು ಶ್ವೇತಾ ಗುಪ್ತ ನಿರ್ವಹಿಸಿದ್ದಾರೆ. ಕನ್ನಡತನದ ಬಗ್ಗೆ ಅತೀವ ಪ್ರೀತಿ ಆಸಕ್ತಿ ಇಟ್ಟುಕೊಂಡಿರೋ ಕನ್ನಡೇತರ ಬುಕ್ ಪಬ್ಲಿಷರ್ ಪಾತ್ರವಿದೆ. ಆ ಪಾತ್ರದ ಬಗ್ಗೆ ನಿರ್ದೇಶಕರು ಈ ಪತ್ರಿಕಾ ಗೋಷ್ಠಿಯಲ್ಲಿ ಒಂದಷ್ಟು ವಿವರಗಳನ್ನು ಬಿಚ್ಚಿಟ್ಟಿದ್ದಾರೆ.

ಸದರಿ ಟ್ರೈಲರ್‍ನಲ್ಲಿ ಪ್ರಧಾನವಾಗಿ ಎರಡು ಬೊಂಬೆ ಪಾತ್ರಗಳು ನೋಡುಗರನ್ನು ಸೆಳೆದುಕೊಂಡಿವೆ. ಅದನ್ನು ರಾಮ್ ಪ್ರಸಾದ್ ಬಾಣಾವರ ಮತ್ತು ಸತೀಶ್ ಕುಮಾರ್ ನಿರ್ವಹಿಸಿದ್ದಾರೆ. ಅದು ಟ್ರೈಲರ್ ನ ಪ್ರಮುಖ ಆಕರ್ಷಣೆಯಾಗಿಯೂ ಗಮನ ಸೆಳೆಯುವಂತಿದೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣ, ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ. ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಸಾರಾಂಶದ ಮೂಲಕ ಅನಂತ್ ಭಾರದ್ವಾಜ್ ಎಂಬ ಪ್ರತಿಭಾನ್ವಿತ ಛಾಯಾಗ್ರಾಹಕ ಪರಿಚಯವಾಗುತ್ತಿದ್ದಾರೆ. ಅವರ ಛಾಯಾಗ್ರಹಣ ಕೂಡಾ ಸಾರಾಂಶದ ಶಕ್ತಿಯಂತಿದೆ ಎಂಬುದು ಚಿತ್ರತಂಡದ ಭರವಸೆ.

ವಿಶೇಷ ಅಂದರೆ ವರ್ಷಾಂತರಗಳ ಹಿಂದೆ ಬಿಡುಗಡೆಗೊಂಡು, ಇಂದಿಗೂ ಆ ಪ್ರಭೆ ಉಳಿಸಿಕೊಂಡಿರುವ ಲೂಸಿಯಾ ಚಿತ್ರತಂಡದ ಸದಸ್ಯರು ʻಸಾರಾಂಶʼ ಸಿನಿಮಾಗಾಗಿ ದುಡಿದಿದ್ದಾರೆ. ನಟಿ ಶ್ರುತಿಹರಿಹರನ್‌ ಸೇರಿದಂತೆ ಈ ಚಿತ್ರದ ನಿರ್ದೇಶಕರಾದ ಸೂರ್ಯ ವಸಿಷ್ಠ ಕೂಡಾ ಲೂಸಿಯಾ ಭಾಗವಾಗಿದ್ದವರೆ. ಹೀಗಾಗಿ ʻಸಾರಾಂಶʼ ಮೇಲೆ ಕೊಂಚ ನಿರೀಕ್ಷೆ ಹೆಚ್ಚಿದೆ. ಇಲ್ಲಿತನಕ ಹಂತ ಹಂತವಾಗಿ ಸಾರಾಂಶದ ಬಗೆಗಿನ ಒಂದಷ್ಟು ವಿಚಾರಗಳನ್ನು ಬಹಿರಂಗಗೊಳಿಸಿ ಕುತೂಹಲ ಹುಟ್ಟಿಸಿರೋ ಸಿನಿಮಾತಂಡ ಈಗ ಒಂದಿಡೀ ಸಿನಿಮಾದ ಆಂತರ್ಯವನ್ನು ತೆರೆದಿಡುವಂಥಾ ಟ್ರೈಲರ್‌ ಅನಾವರಣ ಮಾಡಿದೆ. ಈಗಾಗಲೇ ಚಿತ್ರದ ರಿಲೀಸ್‌ಗೆ ಮುಹೂರ್ತ ಕೂಡ ಫಿಕ್ಸಾಗಿದೆ. ಇದೇ ಫೆಬ್ರವರಿ 15ರಂದು ರಾಜ್ಯಾದ್ಯಂತ ಅದ್ದೂರಿಯಾಗಿಯೇ ತೆರೆಕಾಣಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಬಿಗ್‌ಬಾಸ್ ಕಾರ್ತಿಕ್‌- ಮಂಡ್ಯ ಶಾಸಕ ರವಿಕುಮಾರ್‌ಗೌಡ- ಪುಟ್ಟರಾಜು ಅವ್ರಿಂದ ಮಂಡ್ಯಹೈದನ ಮಾಸ್ ಟ್ರೈಲರ್ ರಿಲೀಸ್‌ 

ಬಿಗ್‌ಬಾಸ್ ಕಾರ್ತಿಕ್‌- ಮಂಡ್ಯ ಶಾಸಕ ರವಿಕುಮಾರ್‌ಗೌಡ- ಪುಟ್ಟರಾಜು ಅವ್ರಿಂದ ಮಂಡ್ಯಹೈದನ ಮಾಸ್ ಟ್ರೈಲರ್ ರಿಲೀಸ್‌ 

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.