ಶನಿವಾರ, ಜುಲೈ 5, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಅಂತರಾಳದ ಆತಂಕ ಹಂಚಿಕೊಂಡು ಭಾರತೀಯ ಚಿತ್ರೋದ್ಯಮದ ಬಗ್ಗೆ ಹೀಗಂದರು ದೀಕ್ಷಿತ್ ಶೆಟ್ಟಿ !

Vishalakshi Pby Vishalakshi P
27/01/2024
in Majja Special
Reading Time: 1 min read
ಅಂತರಾಳದ ಆತಂಕ ಹಂಚಿಕೊಂಡು ಭಾರತೀಯ ಚಿತ್ರೋದ್ಯಮದ ಬಗ್ಗೆ ಹೀಗಂದರು ದೀಕ್ಷಿತ್ ಶೆಟ್ಟಿ !

ರವಿಚಂದ್ರ ಎ ಜೆ ಅವರ ನಿರ್ಮಾಣದ ದೀಕ್ಷಿತ್ ಶೆಟ್ಟಿ ಹಾಗೂ ಚೈತ್ರ ಆಚರ್ ಮುಖ್ಯಭೂಮಿಯಲ್ಲಿ ನಟಿಸಿರುವ ಬ್ಲಿಂಕ್ ಚಿತ್ರತಂಡ , ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ. ತಮ್ಮ ಚಿತ್ರವನ್ನು ಜನರಿಗೆ ಮುಟ್ಟಿಸುವಲ್ಲಿ ಗೆಲ್ಲಲೇಬೇಕು ಎಂದು ಶಪಥ ಮಾಡಿರುವ ಈ ತಂಡ ಯಾವುದೇ ಮುಚ್ಚು ಮರೆ ಇಲ್ಲದೆ , ನೂತನ ಚಿತ್ರಗಳನ್ನು ಕಟ್ಟುವಲ್ಲಿ , ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳನ್ನು ತಿಳಿಸಲು ವಿನೂತನ ಪ್ರಯೋಗ ಮಾಡಿದೆ. “ಜನರಿಂದಲೇ ಸಿನಿಮಾ, ಜನರೇ ಸಿನಿಮಾ” ಎಂಬಾ ವಿಶಿಷ್ಟ ಸಾಲುಗಳು ಜನರ ಮನಸ್ಸನ್ನು ಗೆಲ್ಲುತ್ತಿವೆ..ಚಿತ್ರಮಂದಿರದಿಂದ ದೂರ ಉಳಿದಿರುವ ಜನರಿಗೆ , ಮತ್ತೆ ಚಿತ್ರಮಂದಿರದ ಆ ಮಾಂತ್ರಿಕ ಜಗತ್ತಿನ ವಿಶೇಷತೆಯನ್ನು ಮನಮುಟ್ಟುವಂತೆ ನಿರೂಪಿಸಿದ್ದಾರೆ.

ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ 08 ಕ್ಕೆ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ . ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬ್ಲಿಂಕ್  ಸೈನ್ಸ್‌ ಫಿಕ್ಷನ್‌ ಪ್ರಕಾರದ ಚಿತ್ರವಾಗಿದ್ದು, ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ ಎ ಜೆ ಹೇಳುತ್ತಾರೆ . ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ನಿರ್ದೇಶಕ ಶ್ರೀನಿಧಿ ಬೆಂಗಳೂರುರವರು. ಇದೊಂದು ಕಾಲ್ಪನಿಕ ಕಥೆ, ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಚಿತ್ರಗಳು ತೀರಾ ಕಡಿಮೆ ಹೀಗಾಗಿ ಈ ನಮ್ಮ ಸಿನಿಮಾ ನೋಡುಗರಲ್ಲಿ ಹೊಸತನ ಮೂಡಿಸುತ್ತದೆ ಎಂದು ಹೇಳಿಕೊಳ್ತಾರೆ ನಿರ್ದೇಶಕರು.

ದಿಯಾ, ದಸರಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿಯವರು ನಾಯಕ ನಟನ ಜವಬ್ದಾರಿಯನ್ನು ಹೊತ್ತಿದ್ದಾರೆ. ಹಾಗೂ ಹೊಸ ದಿನಚರಿ ಖ್ಯಾತಿಯ ಮಂದಾರ ಬಟ್ಟಲಹಳ್ಳಿ ನಾಯಕಿನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ತೆರೆಕಂಡ ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ 2 ಚಿತ್ರದ ಸುರಭಿ ಪಾತ್ರಧಾರಿ ಚೈತ್ರ ಜೆ ಆಚಾರ್ ಬ್ಲಿಂಕ್ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ ಹಾಗೂ ವಜ್ರಧೀರ್ ಜೈನ್, ಗೋಪಾಲಕೃಷ್ಣ ದೇಶಪಾಂಡೆ , ಕಿರಣ್ ನಾಯ್ಕ್ , ಮುರುಳಿ ಶೃಂಗೇರಿ , ಸುರೇಶ್ ಅನಗಹಳ್ಳಿ ಸೇರಿದಂತೆ ಇನ್ನು ದೊಡ್ಡ ತಾರಬಳಗವಿದೆ. ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ ಎಸ್ ರವರ ಸಂಗೀತ ನಿರ್ದೇಶನವಿದ್ದು, ಅವಿನಾಶ ಶಾಸ್ರ್ತಿರವರ ಕ್ಯಾಮೆರಾ ಕೈ ಚಳಕವಿದೆ.. ಹಾಗೂ ಸಂಜೀವ್ ಜಾಗೀರ್ದಾರ್ ರವರ ಸಂಕಲನವಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
‘ಫಾರ್​ ರಿಜಿಸ್ಟ್ರೇಷನ್​’ ಗೆ ಸಜ್ಜಾದ ಮಿಲನಾ -ಪೃಥ್ವಿ…! ಲಕ್ಕಿ ಮಂತ್‌ ಕೈ ಹಿಡಿಯುತ್ತಾ?

‘ಫಾರ್​ ರಿಜಿಸ್ಟ್ರೇಷನ್​’ ಗೆ ಸಜ್ಜಾದ ಮಿಲನಾ -ಪೃಥ್ವಿ...! ಲಕ್ಕಿ ಮಂತ್‌ ಕೈ ಹಿಡಿಯುತ್ತಾ?

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.