ದಿಯಾ ಸಿನಿಮಾ ಮೂಲಕ ಸ್ಯಾಂಡಲ್ವುಡ್ನಲ್ಲಿ ನಾಯಕಿಯಾಗಿ ಗುರುತಿಸಿಕೊಂಡವರು ಖುಷಿ ರವಿ. ದಿಯಾ ಬಳಿಕ ಕನ್ನಡದ ಜೊತೆಗೆ ಪರಭಾಷಾ ಚಿತ್ರಗಳಲ್ಲಿಯೂ ನಟಿಸುತ್ತಿರುವ ಅವರೀಗ ‘S/O ಮುತ್ತಣ್ಣ’ ಬಳಗ ಸೇರಿದ್ದಾರೆ. ಯಂಗ್ ಡೈನಾಮಿಕ್ ಎಂದೇ ಕರೆಸಿಕೊಳ್ಳುತ್ತಿರುವ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿತ್ತಿರುವ ‘S/O ಮುತ್ತಣ್ಣ’ ಸಿನಿಮಾದಲ್ಲಿ ಖುಷಿ ರವಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದ್ದು, ಸ್ಪೆಷಲ್ ಮೇಕಿಂಗ್ ವಿಡಿಯೋ ಕೂಡ ಬಿಡುಗಡೆ ಮಾಡಿ ಶುಭ ಕೋರಿದೆ. ‘S/O ಮುತ್ತಣ್ಣ’ ಸಿನಿಮಾಗೆ ಶ್ರೀಕಾಂತ್ ಹುಣಸೂರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪುರಾತನ ಫಿಲ್ಮಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ