‘ಸಂದೇಶ್ ಪ್ರೊಡಕ್ಷನ್ಸ್’ ಲಾಂಛನದಲ್ಲಿ ಸಂದೇಶ್ ನಾಗರಾಜ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಘೋಸ್ಟ್’ ಚಿತ್ರ ಇದೇ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ಇದೇ ಮೊದಲ ಬಾರಿಗೆ ಕೆ.ಜಿ.ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ ಅಕ್ಟೋಬರ್18 ರ ಮಧ್ಯರಾತ್ರಿ 12 ಕ್ಕೆ ಭರ್ಜರಿ ಫ್ಯಾನ್ ಶೋ ಆಯೋಜಿಸಲಾಗಿದೆ. ಬಹು ನಿರೀಕ್ಷಿತ ಈ ಚಿತ್ರವನ್ನು ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಳ್ಳಲು ಅಣಿಯಾಗುತ್ತಿದ್ದಾರೆ. ಶಿವಣ್ಣ ಅಭಿನಯದ ‘ಭಜರಂಗಿ’ ಚಿತ್ರದ ಪ್ರದರ್ಶನ ಬೆ.6ರಿಂದ ಆರಂಭವಾಗಿತ್ತು. ಆದರೆ ಮಧ್ಯರಾತ್ರಿಯಿಂದಲೇ ಪ್ರದರ್ಶನ ಕಾಣುತ್ತಿರುವ ಮೊದಲ ಚಿತ್ರ ‘ಘೋಸ್ಟ್’.
‘ಘೋಸ್ಟ್’ ಚಿತ್ರವನ್ನು ನೋಡಲು ಬರೀ ಭಾರತೀಯರಷ್ಟೇ ಅಲ್ಲ. ವಿದೇಶಿಗರು ಕಾತುರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ವಿದೇಶಿ ಅಭಿಮಾನಿಗಳು ತಾವು ಕೂಡ ಈ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿರುವುದಾಗಿ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ. ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು ‘ಘೋಸ್ಟ್’ ಚಿತ್ರದ ತಾರಾಬಳಗದಲ್ಲಿದ್ದಾರೆ.