ಗುರುವಾರ, ಜುಲೈ 23, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ನಾಯಕ ನಾನೇ ನನ್ನ ಕಥೆಗೆ ಎಂದ “ದ ಸೂಟ್” !

Vishalakshi Pby Vishalakshi P
24/11/2023
in Majja Special
Reading Time: 1 min read
ನಾಯಕ ನಾನೇ ನನ್ನ ಕಥೆಗೆ  ಎಂದ “ದ ಸೂಟ್” !

ಮದುವೆ ಮುಂತಾದ ಸಮಾರಂಭಗಳಲ್ಲಿ “ಸೂಟ್” ಧರಿಸಿದರೆ ಒಂದು ಕಳೆ. ಅಂತಹ “ಸೂಟ್” ಬಗ್ಗೆ ಸಿನಿಮಾವೊಂದು ಬರುತ್ತಿದ್ದು, ಬಿಡುಗಡೆಗೂ ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು “ಸೂಟ್” ನ ಬಗ್ಗೆ ಮಾತನಾಡಿದರು. ಸಹ ನಿರ್ಮಾಪಕಿ ಮಾಲತಿ ಗೌಡ ಸಮಾರಂಭಕ್ಕೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ರಾಮಸ್ವಾಮಿ ಈ ಚಿತ್ರದ ನಿರ್ಮಾಪಕರು.

ಮೊದಲು ಮಾತನಾಡಿದ್ದ ನಿರ್ದೇಶಕ ಭಗತ್ ರಾಜ್, “ಸೂಟ್” ಗೆ ಅದರದೇ ಆದ ವಿಶೇಷತೆ ಇದೆ. ಎಂದೂ “ಸೂಟ್” ಹಾಕದವರು, ಮದುವೆ ಆರತಕ್ಷತೆಯಲ್ಲಾದರೂ “ಸೂಟ್” ಧರಿಸುವುದು ವಾಡಿಕೆ. ಅಂತಹ “ಸೂಟ್” ನಮ್ಮ ಚಿತ್ರದ ಕಥಾನಾಯಕ. ಈ ಚಿತ್ರದಲ್ಲಿ “ಸೂಟ್” ಅನ್ನು ಬರೀ ಬಟ್ಟೆಯಂತೆ ತೋರಿಸಿಲ್ಲ. ಮನುಷ್ಯನ ಹೊರಗಿನ ಮನಸ್ಸನ್ನು “ಸೂಟ್” ನ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇನೆ. “ಸೂಟ್” ಬಗ್ಗೆ ಅನೇಕ ಗಣ್ಯರು ತಮಗನಿಸಿದನ್ನು ಕವನಗಳ ಮೂಲಕ ಬರೆದಿದ್ದಾರೆ. ಅದನ್ನು ಸಂಕಲನವಾಗಿ ಹೊರ ತಂದಿದ್ದೇವೆ. ನಮ್ಮ ಚಿತ್ರ ಮೂರು ಕಿರಣಗಳಿಂದ ಹೆಚ್ಚು ಪ್ರಕಾಶಿಸುತ್ತಿದೆ. ಸಂಗೀತ ನಿರ್ದೇಶಕ ಕಿರಣ್ ಶಂಕರ್ ಸುಮಧುರ ಹಾಡುಗಳನ್ನು ನೀಡಿದ್ದಾರೆ. ಛಾಯಾಗ್ರಾಹಕ ಕಿರಣ್ ಹಂಪಾಪುರ ಅವರ ಛಾಯಾಗ್ರಹಣ “ಸೂಟ್” ನ ಅಂದವನೆ ಮತ್ತಷ್ಟು ಹೆಚ್ಚುಸಿದೆ‌. ರೇಖಾಚಿತ್ರಗಳ ಮೂಲಕ ಕಿರಣ್ ನಮ್ಮ ಚಿತ್ರಕ್ಕೆ ಜೀವ ತುಂಬಿದ್ದಾರೆ. ಇವರೆ ಆ ಮೂರು ಕಿರಣಗಳು. ಚಿತ್ರದಲ್ಲಿ ಐವತ್ತಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ. ಸದ್ಯದಲ್ಲೇ “ಸೂಟ್” ತೆರೆಗೆ ಬರಲಿದೆ ಎಂದರು.

ಸಾಹಿತಿ ಡಾ||ವಿ.ನಾಗೇಂದ್ರ ಪ್ರಸಾದ್ ತಾವು ಈ ಚಿತ್ರದಲ್ಲಿ ನಟಿಸಿರುವುದಾಗಿ ತಿಳಿಸಿ, “ಸೂಟ್” ಬಗ್ಗೆ ತಾವು ಬರೆದಿರುವ ಕಾವ್ಯವನ್ನು ವಾಚಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಪ್ರಣಯ ಮೂರ್ತಿ, ದೀಪ್ತಿ ಕಾಪ್ಸೆ, ಭೀಷ್ಮ ರಾಮಯ್ಯ ಮುಂತಾದವರು ಚಿತ್ರ ಹಾಗೂ ತಮ್ಮ ಪಾತ್ರಗಳ ಕುರಿತು ಮಾತನಾಡಿದರು. ಅನಾರೋಗ್ಯದ ನಿಮಿತ್ತ ಕಾರ್ಯಕ್ರಮಕ್ಕೆ ಹಾಜರಾಗದ ಸಂಗೀತ ನಿರ್ದೇಶಕ ಕಿರಣ್ ಶಂಕರ್ ಹಾಡುಗಳ ಹಾಗೂ ಹಾಡಿದವರ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿದರು. ಛಾಯಾಗ್ರಾಹಕ ಕಿರಣ್ ಹಂಪಾಪುರ ಸೇರಿದಂತೆ ಅನೇಕ ತಂತ್ರಜ್ಞರು, ಕಲಾವಿದರು ಹಾಗೂ ಅತಿಥಿಗಳು ಆಡಿಯೋ ರಿಲೀಸ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ದ ಸೂಟ್” ಚಿತ್ರಕ್ಕೆ “ಅತಿಥಿದೇವೋ ಭವ” ಎಂಬ ಅಡಿಬರಹವಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
`ಕೆಜಿಎಫ್’ ದೊಡ್ಡಮ್ಮನಿಗಿಂತ ದೊಡ್ಡ ಗನ್ ಹಿಡಿದು ಅಖಾಡಕ್ಕಿಳಿದ ರಣಬೀರ್!

`ಕೆಜಿಎಫ್' ದೊಡ್ಡಮ್ಮನಿಗಿಂತ ದೊಡ್ಡ ಗನ್ ಹಿಡಿದು ಅಖಾಡಕ್ಕಿಳಿದ ರಣಬೀರ್!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.