ಬುಧವಾರ, ಜುಲೈ 9, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

“ಮತ್ತೆ ಮತ್ತೆ’ ಸಿನಿಮಾ ಲಾಭದಲ್ಲಿ ಶೇ.25ರಷ್ಟು ಹಣ ಬಡಕಲಾವಿದರಿಗೆ ಕೊಡಲು ತೀರ್ಮಾನ!

Vishalakshi Pby Vishalakshi P
18/01/2024
in Majja Special
Reading Time: 1 min read
“ಮತ್ತೆ ಮತ್ತೆ’ ಸಿನಿಮಾ ಲಾಭದಲ್ಲಿ ಶೇ.25ರಷ್ಟು ಹಣ ಬಡಕಲಾವಿದರಿಗೆ ಕೊಡಲು ತೀರ್ಮಾನ!

ಜರ್ನಲಿಸಂ ಮುಗಿಸಿ, ಸಿನಿಮಾ ಮಾಡಲು ಹೊರಟ ಐವರು ವಿದ್ಯಾರ್ಥಿಗಳ ಸುತ್ತ ನಡೆಯುವ ಕಥೆ ಹೊಂದಿದ ಚಿತ್ರ ಮತ್ತೆ ಮತ್ತೆ. ಮೂಲತ: ಲೆಕ್ಚರರ್ ಆದ ಡಾ.ಅರುಣ್ ಹೊಸಕೊಪ್ಪ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರ ಜನವರಿ ೧೯ಕ್ಕೆ ಬಿಡುಗಡೆಯಾಗುತ್ತಿದೆ. ನೈರುತ್ಯ ಆರ್ಟ್ ಮೀಡಿಯಾ ಅಡಿ ನಿರ್ದೇಶಕರೇ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ, ಪ್ರೊಡ್ಯೂಸರ್ ಬೇಕಾಗಿದ್ದಾರೆ ಎಂಬ ಅಡಿಬರಹ ಇರುವ ಈ ಚಿತ್ರದ ೩ ಹಾಡುಗಳಿಗೆ ಇಮ್ತಿಯಾಜ್ ಸುಲ್ತಾನ್ ಸಂಗೀತ ಸಂಯೋಜನೆ ಮಾಡಿದ್ದು, ನಿರ್ದೇಶಕರೇ ಸಾಹಿತ್ಯ ರಚಿಸಿದ್ದಾರೆ. ಹಾಡುಗಳ ಜೊತೆಗೆ ಟ್ರೈಲರ್ ಪ್ರದರ್ಶನದ ಸಂದರ್ಭದಲ್ಲಿ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿತು.


ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಹಿರಿಯನಟ ಎಂ.ಎಸ್.ಉಮೇಶ್ ಮಾತನಾಡಿ, ಈ ಚಿತ್ರ ಅರುಣ್‌ರ ಕನಸಿನ ಕೂಸು. ಇಲ್ಲಿ ಕಥೆಯೇ ಹೀರೋ. ಮನದೀಪ್‌ರಾಯ್, ಸತ್ಯಜಿತ್, ರಾಕ್‌ಲೈನ್ ಸುಧಾಕರ್ ಇಂದು ನಮ್ಮೊಂದಿಗಿಲ್ಲ, ಆದರೆ ಈ ಚಿತ್ರ ಅವರನ್ನು ಜೀವಂತವಾಗಿರಿಸಿದೆ. ಅರುಣ್ ಚಿತ್ರಕ್ಕಾಗಿ ತುಂಬಾ ಕಷ್ಟಪಟ್ಟಿದ್ದಾರೆ, ಬೇರೆಯವರಾಗಿದ್ದರೆ ಅರ್ಧಕ್ಕೇ ಬಿಟ್ಟಿರುತ್ತಿದ್ರು. ಅವರ ಶ್ರಮಕ್ಕೆ ಫಲ ಸಿಗಬೇಕು, ಈ ಚಿತ್ರ ಯಶಸ್ವಿಯಾದರೆ ಹತ್ತಾರು ಜನಕ್ಕೆ ಅನ್ನ ಕೊಡುತ್ತಾರೆ, ಚಿತ್ರದಲ್ಲಿ ನನ್ನದು ಮನೆ ಮಾಲೀಕನ ಪಾತ್ರ, ಹೆಣ್ಣುಮಕ್ಕಳನ್ನು ಕಂಡರೆ ಜೊಲ್ಲು ಸುರಿಸುವವ, ಸಂಜನಾ ಅವರ ಜೊತೆ ಡ್ರೀಮ್ ಸಾಂಗ್ ಮಾಡಿದ್ದೇನೆ. ಅಣ್ಣಾವ್ರನ್ನು ನೆನಪಿಸುವ ಹಾಡದು ಎಂದರು.

ನಿರ್ಮಾಪಕ ಕಮ್ ನಿರ್ದೇಶಕ ಡಾ.ಅರುಣ್ ಹೊಸಕೊಪ್ಪ ಮಾತನಾಡುತ್ತ ಇದು ಸಂಪೂರ್ಣ ಕಾಮಿಡಿ ಜಾನರ್ ಸಿನಿಮಾ. ನಾನೊಬ್ಬ ಉಪನ್ಯಾಸಕ. ಆದರ್ಶ ಫಿಲಂ ಇನ್‌ಸ್ಟಿಟ್ಯೂಟ್‌ನಲ್ಲಿ ಕಲಿತು, ಒಂದು ಸಿನಿಮಾ ನಿರ್ದೇಶನ ಮಾಡಬೇಕೆಂದು ಈ ಕಥೆ ರೆಡಿಮಾಡಿದೆ. ಚಿಕ್ಕ ಪಾತ್ರದಲ್ಲೂ ಅಭಿನಯಿಸಿದ್ದೇನೆ. ಚಿತ್ರ ನೋಡಿದ ಎಲ್ಲರೂ ತುಂಬಾ ಚೆನ್ನಾಗಿ ಬಂದಿದೆ ಎಂದಿದ್ದಾರೆ, ಜರ್ನಲಿಸಂ ಮುಗಿಸಿದ ೫ ಜನ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಅಂತ ಯೋಚಿಸಿ ನಂತರ ಅವರೆಲ್ಲ ಸೇರಿ ಸಿನಿಮಾವೊಂದನ್ನು ನಿರ್ಮಿಸಿ, ಅದರಿಂದ ಬಂದ ಹಣದಲ್ಲಿ ಒಂದು ಚಾನಲ್ ಪ್ರಾರಂಭಿಸಲು ಯೋಚಿಸುತ್ತಾರೆ. ಆ ಹಂತದಲ್ಲಿ ಏನೇನೆಲ್ಲ ಆಗಿಹೋಯ್ತು, ಸಾಕಷ್ಟು ಅಡೆ, ತಡೆಗಳನ್ನು ಎದುರಿಸಿ, ಕೊನೆಗೂ ಅವರು ಸಿನಿಮಾ ಮಾಡಿ ಮುಗಿಸಿದರೇ, ಇಲ್ಲವೇ ಎನ್ನುವುದೇ ಮತ್ತೆ ಮತ್ತೆ ಚಿತ್ರದ ಕಥಾಹಂದರ.

ಹಿರಿಯ ಕಲಾವಿದರನ್ನು ಕರೆಸಿ ನಮ್ಮ ಚಿತ್ರದಲ್ಲಿ ಪಾತ್ರ ಮಾಡಿಸಿದ್ದೇನೆ. ಕನ್ನಡ ಚಿತ್ರರಂಗದ ಬಹುತೇಕ ಹಿರಿಯ, ಹಾಸ್ಯ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದರಿಂದ ಬರುವ ಲಾಭದಲ್ಲಿ ಶೇ.೨೫ರಷ್ಟು ಹಣವನ್ನು ಬಡ ಕಲಾವಿದರಿಗೆ ಕೊಡಬೇಕು ಎಂದುಕೊಂಡಿದ್ದೇನೆ. ೧೯ಕ್ಕೆ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಒಮ್ಮೆ ಸಿನಿಮಾ ನೋಡಿ ನಂತರ ಅಭಿಪ್ರಾಯ ವ್ಯಕ್ತಪಡಿಸಿ ಎನ್ನುವುದೇ ನನ್ನ ಪ್ರಾರ್ಥನೆ. ಚಿತ್ರದಲ್ಲಿ ಉಮೇಶಣ್ಣ ಅವರ ಜೊತೆ ಸಿಹಿಕಹಿ ಚಂದ್ರು ಅವರು ಮುಖ್ಯಮಂತ್ರಿಯಾಗೇ ಕಾಣಿಸಿಕೊಂಡಿದ್ದಾರೆ, ಇನ್ನು ಸಂಜನಾ ಗಲ್ರಾನಿ ಅವರದು ಚಿಕ್ಕ ಪಾತ್ರವಾದರೂ ಕಥೆಗೆ ತಿರುವು ಕೊಡುತ್ತದೆ, ಉಳಿದಂತೆ ಡಿಂಗ್ರಿ ನಾಗರಾಜ್, ಹೊನ್ನವಳ್ಳಿ ಕೃಷ್ಣ, ಶಂಖನಾದ ಅಂಜಿನಪ್ಪ, ಪ್ರಕಾಶ್ ತುಮ್ಮಿನಾಡ್, ಶ್ರೀನಿವಾಸ್‌ಗೌಡ, ವೈಷ್ಣವಿ ಮೆನನ್, ತುಮಕೂರು ಮೋಹನ್ ಸೇರಿದಂತೆ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ, ಬೆಂಗಳೂರು, ನೆಲಮಂಗಲ, ಮುರುಡೇಶ್ವರ, ಶಿರಾಲಿ ಹೀಗೆ ಹಲವಾರು ಲೊಕೇಶನ್‌ಗಳಲ್ಲಿ ೫೦ ದಿನಗಳವರೆಗೆ ಚಿತ್ರೀಕರಣ ನಡೆಸಿದ್ದೇವೆ ಎಂದು ವಿವರಿಸಿದರು. ನಂತರ ಕೋಟೆ ಪ್ರಭಾಕರ್, ಆರ್‌.ಜೆ. ವಿಕ್ಕಿ, ಸ್ವಾತಿ, ನೃತ್ಯನಿರ್ದೇಶಕ ಅನಿ ಇವರೆಲ್ಲ ಚಿತ್ರದ ಕುರಿತಂತೆ ಮಾತನಾಡಿದರು.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಸ್ಯಾಮ್‌ನ ಫುಲ್‌ ಕಂಟ್ರೋಲ್‌ನಲ್ಲಿಟ್ಟಿದ್ದರಾ ಅಕ್ಕಿನೇನಿ ನಾಗಚೈತನ್ಯ?

ಸ್ಯಾಮ್‌ನ ಫುಲ್‌ ಕಂಟ್ರೋಲ್‌ನಲ್ಲಿಟ್ಟಿದ್ದರಾ ಅಕ್ಕಿನೇನಿ ನಾಗಚೈತನ್ಯ?

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.