ಶನಿವಾರ, ಜುಲೈ 5, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ನಂದಕಿಶೋರ್ ನಿರ್ದೇಶನದ ಸಿನಿಮಾಗೆ ಹಾಲಿವುಡ್ ಅನ್ನದಾತನ ಬಂಡವಾಳ!

Vishalakshi Pby Vishalakshi P
09/08/2023
in Majja Special
Reading Time: 1 min read
ನಂದಕಿಶೋರ್ ನಿರ್ದೇಶನದ ಸಿನಿಮಾಗೆ ಹಾಲಿವುಡ್ ಅನ್ನದಾತನ ಬಂಡವಾಳ!

ಸ್ಯಾಂಡಲ್‍ವುಡ್ ಡೈರೆಕ್ಟರ್ ನಂದಕಿಶೋರ್ ಪರಭಾಷಾ ಅಂಗಳಕ್ಕೆ ಲಗ್ಗೆ ಇಟ್ಟಿರುವುದು, ಮಲೆಯಾಳಂ ಸೂಪರ್ ಸ್ಟಾರ್  ಮೋಹನ್ ಲಾಲ್‍ಗೆ ಆ್ಯಕ್ಷನ್ ಕಟ್ ಹೇಳ್ತಿರುವುದು ನಿಮಗೆಲ್ಲ ಗೊತ್ತಿರೋ ವಿಚಾರ. ಲೇಟೆಸ್ಟ್ ಅಪ್‍ಡೇಟ್ ಏನಪ್ಪ ಅಂದರೆ ಇವರಿಬ್ಬರ ಕಾಂಬಿನೇಷನ್ ಸಿನಿಮಾಗೆ ಹಾಲಿವುಡ್ ಪ್ರೊಡ್ಯೂಸರ್ ಬಂಡವಾಳ ಹೂಡ್ತಿದ್ದಾರೆ. ಇದೇ ಮೊದಲ ಭಾರಿಗೆ ಇಂಡಿಯನ್ ಸಿನಿಮಾ ಪ್ರೊಡ್ಯೂಸ್ ಮಾಡಲು ಮುಂದೆ ಬಂದಿರುವ ಆ ನಿರ್ಮಾಪಕ,  ರನ್ನ ಡೈರೆಕ್ಟರ್ ಪಿಕ್ಚರ್ ಗೆ ಕಾರ್ಯಕಾರಿ ನಿರ್ಮಾಪಕರಾಗಿ ಸೇರ್ಪಡೆಗೊಂಡಿದ್ದಾರೆ. ಅವರು ಯಾರು? ಏನು? ಅನ್ನೋದು ಇಲ್ಲಿದೆ ಓದಿ.

ವಿಕ್ಟರಿ, ಅಧ್ಯಕ್ಷ, ರನ್ನ, ಪೊಗರು ಸಿನಿಮಾ ಖ್ಯಾತಿಯ ನಿರ್ದೇಶಕ ನಂದಕಿಶೋರ್ ಅವರು `ರಾಣಾ’ ಸಿನಿಮಾ ನಂತರ ಸುಮಾರು ಒಂದೂವರೆ ವರ್ಷಗಳ ಕಾಲ ಸೈಲೆಂಟಾಗಿದ್ದರು. ಇದೀಗ ಮತ್ತೆ ಮೈ ಕೊಡವಿಕೊಂಡು ಅಖಾಡಕ್ಕೆ ಇಳಿದಿದ್ದಾರೆ. ಇದೇ ಮೊದಲ ಭಾರಿಗೆ ಪರಭಾಷೆಯ `ವೃಷಭ’ ಹೆಸರಿನ ಸಿನಿಮಾ ಡೈರೆಕ್ಟ್ ಮಾಡಿದ್ದು, ಮಲೆಯಾಳಂ ಸೂಪರ್ ಸ್ಟಾರ್  ಮೋಹನ್ ಲಾಲ್‍  ಲೀಡ್ ರೋಲ್‍ನಲ್ಲಿ ನಟಿಸಿದ್ದಾರೆ. ಕಳೆದ ವಾರವಷ್ಟೇ  ಚಿತ್ರೀಕರಣ ಅಧಿಕೃತವಾಗಿ ಪ್ರಾರಂಭವಾಗಿದ್ದು,ಚಿತ್ರತಂಡದಿಂದ ಈಗ ಬಿಗ್ ಅಪ್ಡೇಟ್ ಒಂದು ಹೊರಬಿದ್ದಿದೆ.  ಈ ಸಿನಿಮಾಕ್ಕೆ ಹಾಲಿವುಡ್ ಚಿತ್ರಗಳ ನಿರ್ಮಾಪಕ ಮತ್ತು ಕಾರ್ಯಕಾರಿ ನಿರ್ಮಾಪಕರಾಗಿ ಗುರುತಿಸಿಕೊಂಡಿರೋ ನಿಕ್ ತರ್ಲೋ ಎಂಟ್ರಿಯಾಗಿದೆ.

ನಿಕ್ ತರ್ಲೋ ಈ ಹಿಂದೆ ಹಲವು ಹಾಲಿವುಡ್ ಚಿತ್ರಗಳ ನಿರ್ಮಾಪಕರಾಗಿ ಮತ್ತು ಕಾರ್ಯಕಾರಿ ನಿರ್ಮಾಪಕರಾಗಿ ಗುರುತಿಸಿಕೊಂಡವರು. ಆಸ್ಕರ್ ಪ್ರಶಸ್ತಿ ಚಿತ್ರಗಳಾದ ‘ಮೂನ್ಲೈಟ್’, ‘ಮಿಸೌರಿ’, ‘ಥ್ರೀ ಬಿಲ್ಬೋರ್ಡ್ಸ್ ಔಟ್ಸೈಡ್ ಎಬ್ಬಿಂಗ್’ ಮುಂತಾದ ಚಿತ್ರಗಳಲ್ಲಿ ಕೆಲಸ ಮಾಡಿದ್ದ ಅವರು ಈಗ ‘ವೃಷಭ’ ಚಿತ್ರದ ಮೂಲಕ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಕೆಲಸ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ನಿಕ್ ತರ್ಲೋ, ಕಾರ್ಯಕಾರಿ ನಿರ್ಮಾಪಕರಾಗಿ ಸೇರ್ಪಡೆಯಾಗಿದ್ದಾರೆ.

ಈ ಕುರಿತು ಮಾತನಾಡಿರುವ ನಿಕ್ ತರ್ಲೋ, ‘ಇದು ನನ್ನ ಮೊದಲ ಭಾರತೀಯ ಸಿನಿಮಾ. ನಾನು ಇಲ್ಲಿ ಕೆಲಸ ಮಾಡುವುದಕ್ಕೆ ಎದುರು ನೋಡುತ್ತಿದ್ದೇನೆ. ಒಬ್ಬ ಕಾರ್ಯಕಾರಿ ನಿರ್ಮಾಪಕನಾಗಿ, ಚಿತ್ರದ ಸೃಜನಶೀಲ ಚಟುವಟಿಕೆಗಳು ಸೇರಿದಂತೆ ಹಲವು ವಿಭಾಗಗಳ ಕುರಿತು ಕಾರ್ಯನಿರ್ವಹಿಸುತ್ತಿದ್ದೇನೆ. ನನ್ನ ದೇಶದ ಚಿತ್ರಗಳ ಹೊರತಾಗಿ, ನಾನು ಕೆಲಸ ಮಾಡುತ್ತಿರುವ ಬೇರೆ ದೇಶದ ಮೊದಲ ಚಿತ್ರವಿದು. ಅದರಲ್ಲೂ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗುತ್ತಿರುವ ಈ ಚಿತ್ರ ನನಗೆ ಒಂದು ಹೊಸ ಅನುಭವ. ಈ ಚಿತ್ರದಿಂದ ನಾನು ಬಹಳಷ್ಟು ಕಲಿಯುವುದಿದೆ ಮತ್ತು ಈ ಅನುಭವ ಅದ್ಭುತವಾಗಿ ಇರುತ್ತದೆ ಎಂದು ಎದುರು ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಚಿತ್ರತಂಡಕ್ಕೆ ನಿಕ್ ಸೇರ್ಪಡೆಯ ಕುರಿತು ಮಾತನಾಡಿರುವ ನಿರ್ಮಾಪಕ ವಿಶಾಲ್ ಗುರ್ನಾನಿ, ‘ನಿಕ್ ಸೇರ್ಪಡೆಯಿಂದ ನಮ್ಮ ಚಿತ್ರ ಇನ್ನಷ್ಟು ದೊಡ್ಡದಾಗಿದೆ. ಈ ಚಿತ್ರವನ್ನು ನಾವು ಹಾಲಿವುಡ್ ಶೈಲಿಯಲ್ಲಿ ನಿರ್ಮಿಸುತ್ತಿದ್ದು, ನಿಕ್ರಂತಹ ಸಮರ್ಥ ವ್ಯಕ್ತಿ ನಮ್ಮ ಜೊತೆಗೆ ಕೈಜೋಡಿಸಿರುವುದು ತಂಡದ ಆತ್ಮವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿದೆ’ ಎಂದು ಹೇಳಿಕೊಂಡಿದ್ದಾರೆ. ‘ವೃಷಭ’ ಚಿತ್ರವು ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಂದು ಆಕ್ಷನ್-ಸೆಂಟಿಮೆಂಟ್ ಚಿತ್ರವಾಗಿದ್ದು, ಮೋಹನ್ ಲಾಲ್, ರೋಶನ್ ಮೇಕ ಜೊತೆಗೆ ಶನಾಯ ಕಪೂರ್, ಜಹ್ರ ಎಸ್ ಖಾನ್, ಶ್ರೀಕಾಂತ್ ಮೇಕ, ರಾಗಿಣಿ ದ್ವಿವೇದಿ ಮುಂತಾದವರು ನಟಿಸುತ್ತಿದ್ದಾರೆ.


ಬಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋ ‘ವೃಷಭ’ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ವರುಣ್ ಮಾಥುರ್, ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ಜೂಹಿ ಪಾರೇಖ್ ಮೆಹ್ತಾ, ವಿಶಾಲ್ ಗುರ್ನಾನಿ, ಶ್ಯಾಮಸುಂದರ್, ಸೌರಭ್ ಮಿಶ್ರಾ ಜೊತೆಯಾಗಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ.  ಈ ಚಿತ್ರದಲ್ಲಿ ಗ್ರಾಫಿಕ್ಸ್ ಕೆಲಸಗಳು ಹೆಚ್ಚಾಗಿದ್ದು, ಮುಂದಿನ ವರ್ಷದ ನಿರೀಕ್ಷಿತ ಚಿತ್ರಗಳು ಇದು ಸಹ ಒಂದಾಗಿದೆ. ಹಾಲಿವುಡ್ ಮಾದರಿಯಲ್ಲಿ ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗ್ತಿರೋ ಈ ಚಿತ್ರ ಕನ್ನಡ,ತೆಲುಗು,ತಮಿಳು,ಮಲಯಾಳಂ,ಹಿಂದಿ ಭಾಷೆಗಳಲ್ಲಿ ಏಕ ಕಾಲಕ್ಕೆ ರಿಲೀಸ್ ಆಗಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಇದು ಹೆಂಗಳೆಯರ ಹಾರ್ಟ್ ಕದ್ದ ಕಿರುತೆರೆಯ ‘ಕಂಠಿ’ ಯ ರಿಯಲ್ ಕಹಾನಿ!

ಇದು ಹೆಂಗಳೆಯರ ಹಾರ್ಟ್ ಕದ್ದ ಕಿರುತೆರೆಯ 'ಕಂಠಿ' ಯ ರಿಯಲ್ ಕಹಾನಿ!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.