ಗುರುವಾರ, ಜುಲೈ 23, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ನಂದಿ ಬಹಳ ಶ್ರೇಷ್ಠ ಅರ್ಹರಿಗೆ ಈ ಪ್ರಶಸ್ತಿ ಮುಡಿಗೇರಲಿ ಎಂದ್ರು ಕಿಚ್ಚ ಸುದೀಪ್ !

Vishalakshi Pby Vishalakshi P
20/11/2023
in Majja Special
Reading Time: 1 min read
ನಂದಿ ಬಹಳ ಶ್ರೇಷ್ಠ ಅರ್ಹರಿಗೆ ಈ ಪ್ರಶಸ್ತಿ ಮುಡಿಗೇರಲಿ ಎಂದ್ರು ಕಿಚ್ಚ ಸುದೀಪ್ !

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ದತೆ ನಡೆದಿದೆ. ನಂದಿ ಚಲನಚಿತ್ರ ಪ್ರಶಸ್ತಿ-2023ರ ಕರ್ಟನ್ ರೈಸ್ ಗೆ ಕಿಚ್ಚ ಸುದೀಪ್ ಚಾಲನೆ ನೀಡಿ ಹೊಸ ಪ್ರಶಸ್ತಿ ಸಮಾರಂಭಕ್ಕೆ ಶುಭ ಹಾರೈಸಿದರು. ಕಿಚ್ಚ ಸುದೀಪ್ ಮಾತನಾಡಿ, ‌ಸಂಸ್ಥಾಪಕರಿಗೆ ಒಳ್ಳೆದಾಗಲಿ. ಅವಾರ್ಡ್ಸ್ ಕಾರ್ಯಕ್ರಮಕ್ಕೆ ಹೋಗುವುದು ಬಿಟ್ಟು 2003-2004 ಕೊನೆ.‌ಆ ಬಳಿಕ ಅವಾರ್ಡ್ಸ್  ಕಾರ್ಯಕ್ರಮಕ್ಕೆ ಹೋಗೇ ಇಲ್ಲ. ಅದಕ್ಕೆ  ಬೇರೆ ಇತಿಹಾಸವಿದೆ. ‌ಆದರೆ ಇಲ್ಲಿ ಆ ಅವಾರ್ಡ್ಸ್ ಮಹತ್ವ ಬೇರೆ ಕಲಾವಿದರಿಗೆ ಆಗಲಿ. ಎಲ್ಲರಿಗೂ ಎಷ್ಟು ಮುಖ್ಯ ಎನ್ನುವುದನ್ನು ನೋಡಿದ್ದೇನೆ. ನನ್ನ ಮನವಿ ಏನೆಂದರೆ ಯಾರಿಗೆ ಹೋಗಬೇಕು ಅವರಿಗೆ ಹೋಗಲಿ. ಮಿಕ್ಕಿದವರೆಲ್ಲಾ ದುಡ್ಡು ಮಾಡುತ್ತಿದ್ದಾರೆ. ಅವಾರ್ಡ್, ದುಡ್ಡು ಅಂತಾ ನೋಡಿದಾಗ ಪ್ರಶಸ್ತಿ ಬಿಟ್ಟು ದುಡ್ಡಿಗೆ ಕೈ ಹಾಕುವವರು ಇದ್ದಾರೆ. ಪ್ರಶಸ್ತಿಗೆ ಗೌರವ ಕೊಟ್ಟು ಅದಕ್ಕಾಗಿ ಬಾಳಿ ಬದುಕುವವರಿಗೆ ಅವರಿಗೆ ನೀಡಿ. ನಂದಿ ಬಹಳ ಶ್ರೇಷ್ಠ. ಅದರ ಹೆಸರಲ್ಲಿ ನಡೆಸುತ್ತೀರಾ ಎಂದರೆ ಅಷ್ಟೇ ಶುದ್ಧವಾಗಿ ಇರಲಿ. ಕರ್ನಾಟಕದಲ್ಲಿ ಅವಾರ್ಡ್ಸ್ ಪ್ರೋಗ್ರಾಂ ನಡೆಸಲು ಬಹಳ ಕೊರತೆ ಇದೆ.  ತಲೆ ಎತ್ತಿ ನೋಡುವ ಅವಾರ್ಡ್ಸ್ ಪ್ರೋಗ್ರಾಂ ಇಲ್ಲ. ಅಂತಹ ಪ್ರಶಸ್ತಿ ಕಾರ್ಯಕ್ರಮ  ನಂದಿ ಆಗಲಿ ಎಂದು ಶುಭ ಹಾರೈಸಿದರು.

ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಮಬಂಧವಿಲ್ಲ. ಎರಡು ಬೇರೆ ಬೇರೆ. ಆಂಧ್ರಪ್ರದೇಶದಂತೆ ಕನ್ನಡದ ಪ್ರಶಸ್ತಿಗೂ ನಂದಿ ಅವಾರ್ಡ್ ಎಂದೇ ಕರೆಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದಲೇ ‘ನಂದಿ’ ಎಂಬ ಹೆಸರನ್ನೇ ಕನ್ನಡದ ಪ್ರಶಸ್ತಿಗೂ ಇಡಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ‘ನಂದಿ ಫಿಲ್ಮಂ ಅವಾರ್ಡ್’ ಸಂಸ್ಥಾಪರಾಗಿದ್ದಾರೆ. ಭಾ.ಮಾ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಅಶೋಕ್ ಡೈರೆಕ್ಟರ್ಸ್ ಗಳಾಗಿದ್ದಾರೆ.

ನಂದಿ ಪ್ರಶಸ್ತಿಯಲ್ಲಿ ಕನ್ನಡ ಸಿನಿಮಾಗಳು, ಪ್ರಾದೇಶಿಕವಾಗಿ ಭಾಷೆಗಳಾದ ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಬಂಜಾರ ಈ ಭಾಷೆಗಳಿಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅದರದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ಕನ್ನಡದ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದ್ದು, ನಂದಿ ಅವಾರ್ಡ್ ಘೋಷಣೆಯಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ಡಿಸೆಂಬರ್ 6 ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಭಾಗಿಯಾಗಲಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಪ್ಯಾನ್ ಇಂಡಿಯಾ ಸಿನಿಮಾಗೆ ಹೀರೋ ಆದರು ಡಾಲಿ!

ಪ್ಯಾನ್ ಇಂಡಿಯಾ ಸಿನಿಮಾಗೆ ಹೀರೋ ಆದರು ಡಾಲಿ!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.