ಬುಧವಾರ, ಜುಲೈ 22, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ !

Vishalakshi Pby Vishalakshi P
25/11/2023
in Majja Special
Reading Time: 1 min read
ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ !

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡಿದೆ.”ಗಣ” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಮೈ ನೇಮ್ ಇಸ್ ಸೋನಾ ಬೇಬಿ ಬೇಬಿ.. ಕಣ್ಣಾಮುಚ್ಚಾಲೆ ನನ್ನ ಹಾಬಿ” ಎಂಬ ಮನಮೋಹಕ ಹಾಡು “ಸರಿಗಮಪ” ಆಡಿಯೋ ಸಂಸ್ಥೆ ಮೂಲಕ ಬಿಡುಗಡೆಯಾಗಿದೆ.

ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಮಾಸ್ ಐಟಂ ಹಾಡಿಗೆ ಪ್ರಜ್ವಲ್ ದೇವರಾಜ್ , ನಮೃತಾ ಮಲ್ಲ ಹಾಗೂ ರವಿಕಾಳೆ ಹೆಜ್ಜೆ ಹಾಕಿದ್ದಾರೆ. “ಕ್ರಾಂತಿ” ಚಿತ್ರದ “ಟೇಕ್ ಇಟ್ ಪುಷ್ಪವತಿ” ಹಾಡು ಸೇರಿದಂತೆ ಅನೇಕ ಯಶಸ್ವಿ ಗೀತೆಗಳನ್ನು ಹಾಡಿರುವ ಐಶ್ವರ್ಯ ರಂಗರಾಜನ್ ಈ ಹಾಡನ್ನು ಹಾಡಿದ್ದಾರೆ. “ಸೋನಾ ಬೇಬಿ” ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.

ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು “ಗಣ” ಚಿತ್ರದ ತಾರಾಬಳಗದಲ್ಲಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
`ಕಾಂತಾರ’ ಬ್ಲಾಕ್‍ಬಸ್ಟರ್ ಅಪ್‍ಡೇಟ್… ಹಾಲಿವುಡ್‍ಗೆ ಲಗ್ಗೆ ಇಡಲಿದ್ದಾರೆ ಡಿವೈನ್ ಸ್ಟಾರ್!

`ಕಾಂತಾರ' ಬ್ಲಾಕ್‍ಬಸ್ಟರ್ ಅಪ್‍ಡೇಟ್... ಹಾಲಿವುಡ್‍ಗೆ ಲಗ್ಗೆ ಇಡಲಿದ್ದಾರೆ ಡಿವೈನ್ ಸ್ಟಾರ್!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.