Chowkidar: ದಿಯಾ ಪೃಥ್ವಿ ಅಂಬಾರ್(Pruthvi Ambaar) ಹಾಗೂ ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ(Chandrashekar Bandiyappa) ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ. ಪೃಥ್ವಿ ಈಗ ‘ಚೌಕಿದಾರ್’ ಆಗಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರಳಿ(Sri Muarali) ಚಂದ್ರಶೇಖರ್ ಬಂಡಿಯಪ್ಪ ಪ್ರಯತ್ನಕ್ಕೆ ಸಾಥ್ ನೀಡಿದ್ದಾರೆ. . ‘ಚೌಕಿದಾರ್’ ಟೈಟಲ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ. ‘ಚೌಕಿದಾರ್’. ಕನ್ನಡ ಜೊತೆಗೆ ಹಲವು ಭಾಷೆಯಲ್ಲಿ ಸಿನಿಮಾ ತೆರೆಗೆ ಬರಲಿದೆ.
‘ಚೌಕಿದಾರ್’(Chowkidar) ಪಕ್ಕ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ. ಚಂದ್ರಶೇಖರ್ ಬಂಡಿಯಪ್ಪ ಪ್ರತಿ ಸಿನಿಮಾದಲ್ಲಿಯೂ ಹೊಸ ಕಥೆಯೊಂದಿಗೆ ಬರ್ತಾರೆ. ‘ಆನೆ ಪಟಾಕಿ’ಯಲ್ಲಿ ಕಾಮಿಡಿ, ‘ರಥಾವರ’ದಲ್ಲಿ ಕಲ್ಟ್, ‘ತಾರಕಾಸುರ’ದಲ್ಲೊಂದು ಬಗೆ, ‘ರೆಡ್ ಕಾಲರ್’ ನಲ್ಲಿ ಕ್ರೈಮ್ ಥ್ರಿಲ್ಲರ್ ಕಟ್ಟಿಕೊಟ್ಟಿರುವ ಅವರು ‘ಚೌಕಿದಾರ್’ ಸಿನಿಮಾದಲ್ಲಿ ಯಾವ ರೀತಿ ಕಥೆಯನ್ನು ಕಟ್ಟಿಕೊಟ್ಟಿದ್ದಾರೆಂಬನ ಕುತೂಹಲ ಪ್ರೇಕ್ಷಕರಲ್ಲಿದೆ.
ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಸಂಗಮದ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ.