ಮಂಗಳವಾರ, ಜುಲೈ 1, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

Fire Fly: ‘ಫೈರ್ ಫ್ಲೈ’ ಚಿತ್ರಕ್ಕೆ ನಾಯಕಿಯಾದ ರಚನಾ ಇಂದರ್‌ -ಶಿವ‌ ರಾಜ್‌ಕುಮಾರ್ ಪುತ್ರಿ ನಿರ್ಮಾಣದ ಸಿನಿಮಾ ..!

Bharathi Javalliby Bharathi Javalli
22/07/2024
in Majja Special
Reading Time: 1 min read
Fire Fly: ‘ಫೈರ್ ಫ್ಲೈ’ ಚಿತ್ರಕ್ಕೆ ನಾಯಕಿಯಾದ ರಚನಾ ಇಂದರ್‌ -ಶಿವ‌ ರಾಜ್‌ಕುಮಾರ್ ಪುತ್ರಿ ನಿರ್ಮಾಣದ ಸಿನಿಮಾ ..!

Fire Fly: ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಫೈರ್ ಫ್ಲೈ(Fire Fly). ಈ ಚಿತ್ರ ನಾನಾ ಕಾರಣಗಳಿಂದ ನಿರೀಕ್ಷೆ ಹೆಚ್ಚಿಸಿದೆ. ಅದರಲ್ಲಿ ಪ್ರಮುಖವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಚಿತ್ರ ನಿರ್ಮಾಣ ಮಾಡುತ್ತಿರುವುದು ಒಂದು ವಿಷಯವಾದರೆ, ಮತ್ತೊಂದು ಕಾರಣ ಸಿನಿಮಾದ ತಾರಾಬಳಗ. ಈಗಾಗಲೇ ಫೈರ್ ಫ್ಲೈ ಸಿನಿತಂಡ ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ ಸೇರಿದಂತೆ ಹಲವರನ್ನು ಪರಿಚಯಿಸಿದೆ. ಇದೀಗ ಚಿತ್ರದ ನಾಯಕಿ ಯಾರು ಅನ್ನೋದನ್ನು ಅನಾವರಣ ಮಾಡಿದೆ.

ಲವ್ ಮಾಕ್‌ಟೇಲ್‌, ಹರಿಕಥೆ ಅಲ್ಲ ಗಿರಿಕಥೆ, ತ್ರಿಬಲ್‌ ರೈಡಿಂಗ್ ಸಿನಿಮಾಗಳಲ್ಲಿ ಬಬ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚನಾ ಇಂದರ್(Rachana Inder) ವಂಶಿಗೆ ಜೋಡಿಯಾಗಿ ಅಭಿನಯಿಸಿದ್ದಾರೆ.‌ ನೇಹಾ ಎಂಬ ಪಾತ್ರದಲ್ಲಿ ರಚನಾ ಬಣ್ಣ ಹಚ್ಚಿದ್ದು, ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ‘ನಿವೇದಿತಾ ಶಿವರಾಜ್ ಕುಮಾರ್ ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಸಿನಿಮಾದಲ್ಲಿ ನೇಹಾ ಎಂಬ ಪಾತ್ರ ಮಾಡಿದ್ದೇನೆ. ನೇಹಾ ಬದುಕನ್ನು ತುಂಬಾ ಇಷ್ಟಪಡುತ್ತಾಳೆ. ಎಂಜಾಯ್ ಮಾಡುತ್ತಾಳೆ. ಭವಿಷ್ಯದ ಬಗ್ಗೆ ಯೋಚನೆ ಮಾಡೋದಿಲ್ಲ. ಸಿನಿಮಾವನ್ನು ನಾನು ನೋಡಲು ಕಾತರಳಾಗಿದ್ದಾನೆ. ಚಿತ್ರದ ಒಂದಷ್ಟು ಕ್ಲಿಪ್ ನೋಡಿದಾಗ ಮನರಂಜನೆ ನೀಡುವ ಸಿನಿಮಾ ಎನಿಸಿತು. ವಂಶಿ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ದೀಪಾವಳಿಗೆ ನಮ್ಮ ಚಿತ್ರ ತೆರೆಗೆ ಬರುತ್ತಿದೆ’ ಎಂದಿದ್ದಾರೆ.

ಫೈರ್ ಫ್ಲೈ(Fire Fly) ಸಿನಿಮಾವನ್ನು ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ನಾಯಕ- ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ. ಈ ಸಂಸ್ಥೆಯ ಮೊದಲ ಕೂಸು ಫೈರ್ ಫ್ಲೈ ಸಿನಿಮಾ ದೀಪಾವಳಿಗೆ ತೆರೆಗೆ ಬರಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Powder: ನಟ ದಿಗಂತ್‌ ‘ಪೌಡರ್’ ಸಿನಿಮಾ ಬಿಡುಗಡೆ ಮುಂದೂಡಿಕೆ- ಆಗಸ್ಟ್‌ 23ಕ್ಕೆ ಬಿಡುಗಡೆ..!

Powder: ನಟ ದಿಗಂತ್‌ ‘ಪೌಡರ್’ ಸಿನಿಮಾ ಬಿಡುಗಡೆ ಮುಂದೂಡಿಕೆ- ಆಗಸ್ಟ್‌ 23ಕ್ಕೆ ಬಿಡುಗಡೆ..!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.